ಕಾಂಗ್ರೆಸ್​ನಲ್ಲೇ ಇದ್ದರೆ ಜ್ಯೋತಿರಾಧಿತ್ಯ ಸಿಂಧಿಯಾ ಮುಖ್ಯಮಂತ್ರಿ ಆಗುತ್ತಿದ್ದರು, ಬಿಜೆಪಿ ಸೇರಿ ಹಿಂದಿನ ಬೆಂಚಲ್ಲಿ ಕೂರುವಂತಾಗಿದೆ: ರಾಹುಲ್ ಗಾಂಧಿ

ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಕೆಲಸ ಮಾಡಿ ಸಂಘಟನೆ ಬಲಪಡಿಸುವ ಅವಕಾಶ ಸಿಂಧಿಯಾಗೆ ಇತ್ತು. ನೀವು ಮುಂದೊಂದು ದಿನ ಮುಖ್ಯಮಂತ್ರಿ ಆಗುತ್ತೀರಿ ಎಂದು ನಾನು ಹೇಳಿದ್ದೆ: ರಾಹುಲ್ ಗಾಂಧಿ

ಕಾಂಗ್ರೆಸ್​ನಲ್ಲೇ ಇದ್ದರೆ ಜ್ಯೋತಿರಾಧಿತ್ಯ ಸಿಂಧಿಯಾ ಮುಖ್ಯಮಂತ್ರಿ ಆಗುತ್ತಿದ್ದರು, ಬಿಜೆಪಿ ಸೇರಿ ಹಿಂದಿನ ಬೆಂಚಲ್ಲಿ ಕೂರುವಂತಾಗಿದೆ: ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
Follow us
TV9 Web
| Updated By: ganapathi bhat

Updated on:Apr 06, 2022 | 7:19 PM

ದೆಹಲಿ: ಪ್ರಸ್ತುತ ಬಿಜೆಪಿ ಪಕ್ಷದಲ್ಲಿ ಇರುವ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಪಕ್ಷದಲ್ಲೇ ಇರುತ್ತಿದ್ದರೆ ಅವರು ಮುಖ್ಯಮಂತ್ರಿ ಆಗುತ್ತಿದ್ದರು. ಆದರೆ, ಬಿಜೆಪಿ ಪಾಳಯ ಸೇರಿ ಹಿಂದಿನ ಸಾಲಿನಲ್ಲಿ ಕೂರುವಂತಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿನ್ನೆ (ಮಾರ್ಚ್ 8) ಹೇಳಿದ್ದಾರೆ. ಮೂಲಗಳ ಮಾಹಿತಿಯ ಪ್ರಕಾರ, ಕಾಂಗ್ರೆಸ್​ನ ಯುವ ಮೋರ್ಚಾದೊಂದಿಗೆ ಮಾತನಾಡುತ್ತಾ ರಾಹುಲ್ ಗಾಂಧಿ ಹೀಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಸಂಘಟನೆಯ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ಸಿಂಧಿಯಾ ಕಾಂಗ್ರೆಸ್​ನಲ್ಲೇ ಇದ್ದರೆ ಮುಖ್ಯಮಂತ್ರಿ ಆಗುತ್ತಿದ್ದರು ಎಂದಿದ್ದಾರೆ. ಬಿಜೆಪಿ ಸೇರಿ ಹೀಗಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಕೆಲಸ ಮಾಡಿ ಸಂಘಟನೆಯನ್ನು ಬಲಪಡಿಸುವ ಅವಕಾಶ ಸಿಂಧಿಯಾಗೆ ಇತ್ತು. ನೀವು ಮುಂದೊಂದು ದಿನ ಮುಖ್ಯಮಂತ್ರಿ ಆಗುತ್ತೀರಿ ಎಂದು ನಾನು ಹೇಳಿದ್ದೆ. ಆದರೆ, ಸಿಂಧಿಯಾ ಮತ್ತೊಂದು ಮಾರ್ಗವನ್ನು ಆಯ್ಕೆ ಮಾಡಿದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅಷ್ಟಕ್ಕೇ ಮಾತು ನಿಲ್ಲಿಸದ ರಾಹುಲ್ ಗಾಂಧಿ, ‘ಬರೆದಿಟ್ಟುಕೊಳ್ಳಿ. ಜ್ಯೋತಿರಾಧಿತ್ಯ ಸಿಂಧಿಯಾ ಬಿಜೆಪಿಯಲ್ಲಿ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಆ ಸ್ಥಾನ ಪಡೆಯಬೇಕಾದರೆ ಅವರು ಇಲ್ಲಿಗೆ ಬರಲೇ ಬೇಕು’ ಎಂದು ಹೇಳಿರುವ ಬಗ್ಗೆ ಮೂಲಗಳು ತಿಳಿಸಿವೆ. ಆರ್​ಎಸ್​ಎಸ್ ಸಿದ್ಧಾಂತದ ವಿರುದ್ಧ ಹೋರಾಡಬೇಕು. ಯಾರಿಗೂ ಹೆದರಬೇಕಾದ ಅವಶ್ಯಕತೆ ಇಲ್ಲ ಎಂದು ರಾಹುಲ್ ಗಾಂಧಿ ಪಕ್ಷದ ಯುವ ಕಾರ್ಯಕರ್ತರಿಗೆ ಸೂಚಿಸಿದ್ದಾರೆ ಎಂದೂ ತಿಳಿದುಬಂದಿದೆ.

ಜ್ಯೋತಿರಾಧಿತ್ಯ ಮಾಧವ್​ರಾವ್ ಸಿಂಧಿಯಾ ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿ ನಾಯಕರಾಗಿದ್ದರು. ತಮ್ಮ ತಂದೆ ಮಾಧವ್​ರಾವ್ ಸಿಂಧಿಯಾ ಬಳಿಕ, 2002 ಫೆಬ್ರವರಿ 24ರಲ್ಲಿ ಅವರು ಕಾಂಗ್ರೆಸ್ ಲೋಕಸಭಾ ಸದಸ್ಯನಾಗಿ ಆಯ್ಕೆಯಾದರು. ಮಧ್ಯಪ್ರದೇಶದ ಗುಣ ಕ್ಷೇತ್ರದಲ್ಲಿ 2003ರಿಂದ 2019ರ ವರೆಗೂ ಸಿಂಧಿಯಾ ಕಾಂಗ್ರೆಸ್ ಲೋಕಸಭಾ ಸದಸ್ಯರಾಗಿದ್ದರು. 2019ರಲ್ಲಿ ಕೃಷ್ಣ ಪಾಲ್ ಸಿಂಗ್ ವಿರುದ್ಧ ಸೋಲು ಅನುಭವಿಸಿದರು. ಬಳಿಕ, ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿಂಧಿಯಾ ಮಾರ್ಚ್ 10, 2020ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಇದನ್ನೂ ಓದಿ: ಬ್ರಿಟಿಷರನ್ನೇ ಓಡಿಸಿದ ನಮಗೆ ಬಿಜೆಪಿಯನ್ನು ಅಧಿಕಾರದಿಂದ ಇಳಿಸುವುದು ಕಷ್ಟವೇ: ತಮಿಳುನಾಡಲ್ಲಿ ರಾಹುಲ್ ಗಾಂಧಿ ಪ್ರಶ್ನೆ

ಒಂದು ಸಿದ್ಧಾಂತ ಉಳಿದೆಲ್ಲಾ ಆಲೋಚನೆಗಳ ಮೇಲೆ ಸವಾರಿ ಮಾಡುತ್ತಿದೆ; BJP, RSS ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Published On - 11:19 am, Tue, 9 March 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್