AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾಮಲೈಗೆ ತಮಿಳುನಾಡಿನ ಜೊತೆ ರಾಷ್ಟ್ರೀಯ ಹುದ್ದೆ ನೀಡುತ್ತೇವೆ; ಅಮಿತ್ ಶಾ

ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡಿನ ಜವಾಬ್ದಾರಿಯ ಜೊತೆಗೆ ರಾಷ್ಟ್ರೀಯ ಮಟ್ಟದ ಹುದ್ದೆಯನ್ನೂ ನೀಡುತ್ತೇವೆ. ತಮಿಳುನಾಡಿನಲ್ಲಿಯೂ ಅವರ ಕೆಲಸ ಮುಂದುವರಿಯುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯ ಮುಖ್ಯಸ್ಥ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡು ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವುದರ ಜೊತೆಗೆ ರಾಷ್ಟ್ರೀಯ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಹಿರಂಗಪಡಿಸಿದ್ದಾರೆ.

ಅಣ್ಣಾಮಲೈಗೆ ತಮಿಳುನಾಡಿನ ಜೊತೆ ರಾಷ್ಟ್ರೀಯ ಹುದ್ದೆ ನೀಡುತ್ತೇವೆ; ಅಮಿತ್ ಶಾ
Amit Shah Annamalai
ಸುಷ್ಮಾ ಚಕ್ರೆ
|

Updated on: Jun 27, 2025 | 9:23 PM

Share

ನವದೆಹಲಿ, ಜೂನ್ 27: ಬಿಜೆಪಿ ನಾಯಕ ಮತ್ತು ತಮಿಳುನಾಡು ಪಕ್ಷದ ಮಾಜಿ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (K Annamalai) ರಾಜ್ಯ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಅವರಿಗೆ ರಾಷ್ಟ್ರೀಯ ಮಟ್ಟದಲ್ಲಿಯೂ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 2026ರಲ್ಲಿ ಎನ್​​ಡಿಎ ತಮಿಳುನಾಡು ಸರ್ಕಾರವನ್ನು ರಚಿಸಲಿದೆ ಎಂದು ಹೇಳಿದ್ದಾರೆ. ತಮಿಳುನಾಡಿನ ಜೊತೆಗೆ ಕೆ. ಅಣ್ಣಾಮಲೈಗೆ ದೊಡ್ಡ ಪಾತ್ರ ನೀಡುವ ಬಗ್ಗೆ ಅಮಿತ್ ಶಾ ಸುಳಿವು ನೀಡುತ್ತಿರುವುದು ಇದೇ ಮೊದಲಲ್ಲ. ಏಪ್ರಿಲ್‌ನಲ್ಲಿ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿದ ನಂತರ ಮತ್ತು ನೈನಾರ್ ನಾಗೇಂದ್ರನ್ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಅಮಿತ್ ಶಾ ಅಣ್ಣಾಮಲೈ ಅವರ ಅಧಿಕಾರಾವಧಿಯನ್ನು ಶ್ಲಾಘಿಸಿದ್ದರು.

ಅಣ್ಣಾಮಲೈ ಅವರ ನಾಯಕತ್ವವನ್ನು “ಶ್ಲಾಘನೀಯ” ಎಂದು ವಿವರಿಸಿದ ಅಮಿತ್ ಶಾ, ತಮಿಳುನಾಡಿನಲ್ಲಿ ಪಕ್ಷದ ಹೆಜ್ಜೆಗುರುತನ್ನು ವಿಸ್ತರಿಸುವಲ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನೀತಿಗಳನ್ನು ತಳಮಟ್ಟಕ್ಕೆ ಕೊಂಡೊಯ್ಯುವಲ್ಲಿ ಅವರ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. “ಪಕ್ಷದ ರಾಷ್ಟ್ರೀಯ ಚೌಕಟ್ಟಿನಲ್ಲಿ ಅಣ್ಣಾಮಲೈ ಅವರ ಸಂಘಟನಾ ಕೌಶಲ್ಯವನ್ನು ಬಿಜೆಪಿ ಬಳಸಿಕೊಳ್ಳುತ್ತದೆ” ಎಂದು ಅಮಿತ್ ಶಾ ಎಕ್ಸ್ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: Air India Plane Crash: ಡಿಎನ್​ಎ ಪರೀಕ್ಷೆ ಬಳಿಕ ಸಾವಿನ ಸಂಖ್ಯೆ ಘೋಷಣೆ; ಏರ್ ಇಂಡಿಯಾ ಅಪಘಾತದ ಬಗ್ಗೆ ಅಮಿತ್ ಶಾ ಹೇಳಿಕೆ

“ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಕೆ ಅಣ್ಣಾಮಲೈ ಅವರು ಶ್ಲಾಘನೀಯ ಸಾಧನೆಗಳನ್ನು ಮಾಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಚೌಕಟ್ಟಿನಲ್ಲಿ ಅಣ್ಣಾಮಲೈ ಅವರ ಸಂಘಟನಾ ಕೌಶಲ್ಯವನ್ನು ಬಿಜೆಪಿ ಬಳಸಿಕೊಳ್ಳುತ್ತದೆ” ಎಂದು ಅಮಿತ್ ಶಾ ಆ ಸಮಯದಲ್ಲಿ ಪೋಸ್ಟ್ ಮಾಡಿದ್ದರು.

ಪ್ರಾದೇಶಿಕ ದಿನಪತ್ರಿಕೆಯೊಂದಕ್ಕೆ ನೀಡಿದ ತಮ್ಮ ಇತ್ತೀಚಿನ ಸಂದರ್ಶನದಲ್ಲಿ, ಬಿಜೆಪಿ ಮತ್ತು ಎಐಎಡಿಎಂಕೆ ಒಳಗೊಂಡ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 2026ರ ವಿಧಾನಸಭಾ ಚುನಾವಣೆಯ ನಂತರ ತಮಿಳುನಾಡಿನಲ್ಲಿ ಸರ್ಕಾರ ರಚಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ: ದೇಶದ 16ನೇ ಜನಗಣತಿಗೆ ಇಂದು ಗೆಜೆಟ್ ನೋಟಿಫಿಕೇಶನ್, ಅಧಿಕಾರಿಗಳೊಂದಿಗೆ ಅಮಿತ್ ಶಾ ಚರ್ಚೆ

“ಮುಂದಿನ ವರ್ಷ ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆಯ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚಿಸಲಿದೆ” ಎಂದು ಅಮಿತ್ ಶಾ ಹೇಳಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿ ಎಐಎಡಿಎಂಕೆ ಪಕ್ಷದವರಾಗಿರುತ್ತಾರೆ ಎಂದು ಕೂಡ ಅವರು ಹೇಳಿದ್ದಾರೆ. ಆದರೂ ಅವರು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ನೇರವಾಗಿ ಹೆಸರಿಸಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು