ಚೆನ್ನೈ: ಕರ್ನಾಟಕದ ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ(Mekedatu Project) ರಾಜ್ಯ ಸರ್ಕಾರ ಮುಂದಾಗಿದ್ದು ಇದಕ್ಕೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಇನ್ನು ಈ ವಿಚಾರಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಮಿಳುನಾಡು ಬಿಜೆಪಿ ಘಟಕ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಈ ಹಿಂದೆಯೇ ತಿಳಿಸಿದ್ದರು. ಆದ್ರೆ ಈಗ ಮೇಕೆದಾಟು ಯೋಜನೆ ವಿರೋಧಿಸಿ ಕೆ.ಅಣ್ಣಾಮಲೈ(K Annamalai) ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಅಣ್ಣಾಮಲೈ ನೇತೃತ್ವದಲ್ಲಿ ಆಗಸ್ಟ್ 5ರಂದು ಕರ್ನಾಟಕ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ. ಕರ್ನಾಟಕದ ನೂತನ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಡ್ಯಾಂ ನಿರ್ಮಿಸುವುದಾಗಿ ಹೇಳಿದ್ದಾರೆ. ನಾವು ಒಂದೇ ಪಕ್ಷದಲ್ಲಿದ್ದರೂ ಈ ನಿರ್ಧಾರ ವಿರೋಧಿಸುತ್ತೇವೆ. ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದಾರೆ.
ಈ ಹಿಂದೆ ಮೇಕೆದಾಟು ಡ್ಯಾಂ ವಿಷಯವಾಗಿ ತಮಿಳುನಾಡು ಬಿಜೆಪಿ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಅಣ್ಣಾಮಲೈ ತಿಳಿಸಿದ್ದರು. ತಿರುಚ್ಚಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ವಿಷಯವಾಗಿ ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ನಾವು ಈ ವಿಷಯವಾಗಿ ರಾಜಕೀಯ ಮಾಡಲು ಬಯಸುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದ ಸರ್ಕಾರವಿದ್ದರೂ, ತಮಿಳುನಾಡು ಬಿಜೆಪಿ ಮತ್ತು ಇಲ್ಲಿನ ಜನರ, ರೈತರ ಹಿತಾಸಕ್ತಿಯ ಪರವಾಗಿ ಕಾರ್ಯ ನಿರ್ವಹಿಸಲಿದೆ. ತಮಿಳುನಾಡು ರೈತರು ಯಾವುದೇ ಸಮಸ್ಯೆಯನ್ನು ಎದುರಿಸಬಾರದು. ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ತನ್ನ ಪಾಲಿನ ಕಾವೇರಿ ನೀರನ್ನು ಪಡೆಯಬೇಕು ಎಂದು ಹೇಳಿದ್ದರು.
ಇದನ್ನೂ ಓದಿ: ದೆಹಲಿಗೆ ಹಾರಿದ ಸಿಎಂ ಬಸವರಾಜ ಬೊಮ್ಮಾಯಿ; ವರಿಷ್ಠರ ಭೇಟಿ, ಧನ್ಯವಾದ ಸಲ್ಲಿಕೆ ನೆಪದಲ್ಲಿ ಸಂಪುಟ ಫೈನಲ್?
(K Annamalai to stage a fasting protest on Aug 5 against the Karnataka govt over mekedatu project)
Published On - 8:04 am, Fri, 30 July 21