AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಜೆಪಿಯನ್ನು ನಾವೆಂದಿಗೂ ಬೆಂಬಲಿಸಲ್ಲ, ಅವರ ಅಜೆಂಡಾವೇ ಬೇರೆ: ತೀವ್ರ ವಿವಾದದ ಬೆನ್ನಲ್ಲೇ ಕೆ. ಅಣ್ಣಾಮಲೈ ಸ್ಪಷ್ಟನೆ

ತೀವ್ರ ವಿವಾದದ ನಂತರ ಕೆ. ಅಣ್ಣಾಮಲೈ ಸಿಜೆಪಿ ಕುರಿತು ಸ್ಪಷ್ಟನೆ ನೀಡಿದ್ದಾರೆ. "ನಾವು ಸಿಜೆಪಿಯನ್ನು ಬೆಂಬಲಿಸಲ್ಲ, ಅವರ ಅಜೆಂಡಾ ಬೇರೆ. ಆದರೆ ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕನ್ನು ಸಮರ್ಥಿಸುತ್ತೇನೆ," ಎಂದರು. ದೇಶಭಕ್ತಿಯ ಬಗ್ಗೆ ಪಾಠ ಬೇಡವೆಂದು ಸ್ಪಷ್ಟಪಡಿಸಿದ ಅವರು, ಬಿಜೆಪಿ ಸಿಜೆಪಿಗೆ ಅನಗತ್ಯ ಪ್ರಚಾರ ನೀಡುತ್ತಿದೆ ಎಂದು ಟೀಕಿಸಿದರು. ಆಡಳಿತದ ತಪ್ಪುಗಳನ್ನು ಪ್ರಶ್ನಿಸುವ ಹಕ್ಕು ನಮಗಿದೆ ಎಂದರು.

ಸಿಜೆಪಿಯನ್ನು ನಾವೆಂದಿಗೂ ಬೆಂಬಲಿಸಲ್ಲ, ಅವರ ಅಜೆಂಡಾವೇ ಬೇರೆ: ತೀವ್ರ ವಿವಾದದ ಬೆನ್ನಲ್ಲೇ ಕೆ. ಅಣ್ಣಾಮಲೈ ಸ್ಪಷ್ಟನೆ
ಕೆ ಅಣ್ಣಾಮಲೈ Image Credit source: PTI
ನಯನಾ ರಾಜೀವ್
|

Updated on: Oct 23, 2026 | 9:35 AM

Share

ಚೆನ್ನೈ, ಅಕ್ಟೋಬರ್ 23: ಚುನಾವಣಾ ಆಯೋಗದ ವಿರುದ್ಧ ‘ಕಾಕ್ರೋಚ್ ಜನತಾ ಪಕ್ಷ‘ ನಡೆಸಿದ ಪ್ರತಿಭಟನೆಯ ಮೇಲಿನ ಪೊಲೀಸ್ ಕ್ರಮವನ್ನು ಟೀಕಿಸಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದ ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ತಮ್ಮ ನಿಲುವಿನ ಕುರಿತು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. “ನಾವು ಯಾವುದೇ ಕಾರಣಕ್ಕೂ ಸಿಜೆಪಿಯನ್ನು ಬೆಂಬಲಿಸುವುದಿಲ್ಲ. ಅವರ ಕಾರ್ಯಸೂಚಿಯೇ ಬೇರೆ, ನಮ್ಮ ಗುರಿಯೇ ಬೇರೆ” ಎಂದು ಅವರು ಖಡಾಖಂಡಿತವಾಗಿ ಹೇಳಿದ್ದಾರೆ.

ಬಿಜೆಪಿಯಿಂದ ಹೊರಬಂದ ನಂತರ ತಾವು ಸ್ಥಾಪಿಸಿದ ಸಂಘಟನೆಯ ವೇದಿಕೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ ಎಂಬ ಕಾರಣಕ್ಕೆ ಪೊಲೀಸ್ ದಬ್ಬಾಳಿಕೆಯನ್ನು ಪ್ರಶ್ನಿಸಿದ್ದೇನೆಯೇ ಹೊರತು, ಸಿಜೆಪಿಯ ಅಜೆಂಡಾವನ್ನು ಬೆಂಬಲಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ದೇಶಭಕ್ತಿಯ ಪಾಠ ಬೇಡ: “ನಾನು ದೇಶದ ಹಲವು ರಾಜ್ಯಗಳಲ್ಲಿ ಐಪಿಎಸ್ ಅಧಿಕಾರಿಯಾಗಿ ಕೆಲಸ ಮಾಡಿದ್ದೇನೆ. ದೇಶದ ಏಕತೆ ಮತ್ತು ಸಾರ್ವಭೌಮತ್ವದ ಅರಿವು ನನಗಿದೆ. ಆದ್ದರಿಂದ ಯಾರೂ ನನಗೆ ದೇಶಭಕ್ತಿಯ ಬಗ್ಗೆ ಉಪನ್ಯಾಸ ನೀಡುವ ಅಗತ್ಯವಿಲ್ಲ” ಎಂದು ತಮ್ಮನ್ನು ಟೀಕಿಸಿದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ: ಸಿಜೆಪಿ ಕಾರ್ಯಕರ್ತರು ತಪ್ಪು ಮಾಡಿದ್ದರೆ ಸೇಡಿನ ರಾಜಕಾರಣ ಮಾಡುವ ಬದಲು ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳಬೇಕು ಎಂದ ಅವರು, “ನಿಜವಾಗಿಯೂ ದೇಶದ ಸಾರ್ವಭೌಮತೆಗೆ ಧಕ್ಕೆ ಇದ್ದರೆ ನಿಮ್ಮ ಬಳಿ ಐಬಿ (IB), ರಾ (RAW) ನಂತಹ ತನಿಖಾ ಸಂಸ್ಥೆಗಳಿವೆ. ಸೂಕ್ತ ಸಾಕ್ಷ್ಯಗಳೊಂದಿಗೆ ಅವರನ್ನು ಜೈಲಿಗೆ ಹಾಕಿ. ಅದನ್ನು ಬಿಟ್ಟು ಎಕ್ಸ್ (ಟ್ವಿಟರ್) ಖಾತೆಗಳಲ್ಲಿ ಟ್ರೋಲ್ ಮಾಡುವ ಕೆಲಸ ಮಾಡಬೇಡಿ” ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ, ಅವರು ಸಮರ್ಥ ಪ್ರಧಾನಿ. ಆದರೆ, ಅವರನ್ನು ಬೆಂಬಲಿಸುತ್ತೇವೆ ಎಂಬ ಮಾತ್ರಕ್ಕೆ ಆಡಳಿತದಲ್ಲಿ ತಪ್ಪುಗಳು ಕಂಡಾಗ ನಾವು ಕೈಕಟ್ಟಿ ಕೂರಲು ಸಾಧ್ಯವಿಲ್ಲ, ತಪ್ಪನ್ನು ಮುಲಾಜಿಲ್ಲದೆ ಪ್ರಶ್ನಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಒಂದೇ ದಿನ ಸಾವಿರಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ!

2011ರ ಮೋದಿ ಹೇಳಿಕೆ ಉಲ್ಲೇಖ

2011ರಲ್ಲಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬಾಬಾ ರಾಮ್‌ದೇವ್ ಮತ್ತು ಅಣ್ಣಾ ಹಜಾರೆ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆ ಮೇಲೆ ಅಂದಿನ ಯುಪಿಎ ಸರ್ಕಾರ ಲಾಠಿಚಾರ್ಜ್ ನಡೆಸಿದಾಗ, “ನಾನು ದೆಹಲಿಗೆ ಹೋಗಿ ಕೇಂದ್ರದ ವಿರುದ್ಧ ಯುದ್ಧ ಸಾರುತ್ತೇನೆ” ಎಂದು ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ ಗುಡುಗಿದ್ದರು. ಅಂದು ಅವರು ಪ್ರತಿಭಟನಾಕಾರರ ಪರ ನಿಂತಿದ್ದು ಸರಿಯಾಗಿದ್ದರೆ, ಇಂದು ಪ್ರತಿಭಟನೆ ನಡೆಸುವವರನ್ನು ಜೈಲಿಗೆ ತಳ್ಳುವುದು ಹೇಗೆ ಸರಿ ಎಂದು ಅಣ್ಣಾಮಲೈ ಪ್ರಶ್ನಿಸಿದರು.

ಪೋಸ್ಟ್

ಉಚಿತ ಪ್ರಚಾರ ನೀಡಬೇಡಿ

ದೆಹಲಿಯ ದಸರಾ ಉತ್ಸವದಲ್ಲಿ ಬಿಜೆಪಿ ಶಾಸಕ ಅಶೋಕ್ ಗೋಯೆಲ್ ನೇತೃತ್ವದಲ್ಲಿ ಜಿರಳೆ ಪ್ರತಿಕೃತಿ ದಹಿಸಿದ್ದನ್ನು ಉಲ್ಲೇಖಿಸಿದ ಅವರು, “ಬಿಜೆಪಿ ಸಿಜೆಪಿಯನ್ನು ಮಟ್ಟಹಾಕಲು ನೋಡುತ್ತಿದೆಯೋ ಅಥವಾ ಅದಕ್ಕೆ ಅನಗತ್ಯವಾಗಿ ರಾಷ್ಟ್ರಮಟ್ಟದಲ್ಲಿ ಉಚಿತ ಪ್ರಚಾರ ನೀಡುತ್ತಿದೆಯೋ ತಿಳಿಯುತ್ತಿಲ್ಲ. 12 ವರ್ಷಗಳ ಕಾಲ ಅಧಿಕಾರ ನಡೆಸಿದ ಮೇಲೂ ಪಕ್ಷ ಹೊಸ ಶತ್ರುಗಳನ್ನು ಹುಡುಕುತ್ತಿದೆ” ಎಂದು ಲೇವಡಿ ಮಾಡಿದರು.

ಬಿಜೆಪಿ ತಿರುಗೇಟು ಮತ್ತು ರಾಜಕೀಯ ಹಿನ್ನೆಲೆ ಅಣ್ಣಾಮಲೈ ಹೇಳಿಕೆಗೆ ತಮಿಳುನಾಡು ಬಿಜೆಪಿ ವಕ್ತಾರ ನಾರಾಯಣನ್ ತಿರುಪತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಅಣ್ಣಾಮಲೈ ಅವರು ಶಾಂತಿಯುತ ಪ್ರತಿಭಟನೆ ಮತ್ತು ಉದ್ದೇಶಪೂರ್ವಕ ಕಾನೂನು ಉಲ್ಲಂಘನೆಯ ನಡುವಿನ ವ್ಯತ್ಯಾಸವನ್ನು ಮರೆತು ಮಾತನಾಡುತ್ತಿದ್ದಾರೆ. ಅವರು ಈಗಾಗಲೇ ಬಿಜೆಪಿಯಿಂದ ಹೊರಬಂದಿರುವುದರಿಂದ ಟೀಕಿಸಲು ಸ್ವತಂತ್ರರು, ಆದರೆ ಅವರ ವಾದ ಒಪ್ಪುವಂತದ್ದಲ್ಲ” ಎಂದಿದ್ದಾರೆ.

ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಕೆ. ಅಣ್ಣಾಮಲೈ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಭಾರಿ ಜನಪ್ರಿಯತೆ ಗಳಿಸಿದ್ದರು. ಆದರೆ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಬಿಜೆಪಿಯನ್ನು ತೊರೆದು ತಮ್ಮದೇ ಆದ ಸ್ವತಂತ್ರ ಯುವ ಸಂಘಟನೆಯ ಮೂಲಕ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ