ಕಲ್ಲು ತೂರಾಟ ಹಿನ್ನೆಲೆ: ಕೈಲಾಶ್ ವಿಜಯ ವರ್ಗೀಯಗೆ ಗೃಹ ಇಲಾಖೆಯಿಂದ ಬುಲೆಟ್ ಪ್ರೂಫ್ ಕಾರು
ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯ ವರ್ಗೀಯ ಅವರ ಕಾರಿನ ಮೇಲೆ ಕಲ್ಲು ತೂರಾಟವಾದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಅವರಿಗೆ ಬುಲೆಟ್ ಪ್ರೂಫ್ ಕಾರನ್ನು ನೀಡಿದೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿ ಕೈಲಾಶ್ ವಿಜಯ ವರ್ಗೀಯ ಅವರ ಮೇಲೆ ಕಲ್ಲು ತೂರಾಟವಾದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಅವರಿಗೆ ಬುಲೆಟ್ ಪ್ರೂಫ್ ಕಾರನ್ನು ನೀಡಿದೆ. ಇಂದು ದಕ್ಷಿಣ 24 ಪರಗಣದ ಮಥುರಾಪುರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಅವರು ಈ ವಿಷಯವನ್ನು ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆ ಪ್ರವಾಸದಲ್ಲಿ ಭಾಗವಹಿಸಿದ್ದ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಕೈಲಾಶ್ ವಿಜಯವರ್ಗೀಯ ಅವರಿಗೆ ಚಿಕ್ಕ ಪ್ರಮಾಣದ ಪೆಟ್ಟಾಗಿತ್ತು.
ಈ ಬೆಳವಣಿಗೆಯ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆಯ ಆದೇಶದ ಮೇರೆಗೆ ಬುಲೆಟ್ ಪ್ರೂಫ್ ಕಾರು ಒದಗಿಸಲಾಗಿದೆ. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳದ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಶೀತಲ ಸಮರ ಮುಂದುವರೆಯುವ ಎಲ್ಲಾ ಲಕ್ಷಣಗಳೂ ತೋರುತ್ತಿವೆ.
ನಡ್ಡಾ ಕಾರಿನ ಮೇಲೆ ಕಲ್ಲು ತೂರಾಟಕ್ಕೆ ಬಿಜೆಪಿ ಆಕ್ರೋಶ: ಬಂಗಾಳಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ