Kallakurichi Hooch Tragedy: ಕಲ್ಲಕುರಿಚಿ ಕಳ್ಳಭಟ್ಟಿ ದುರಂತ, ಎಐಎಡಿಎಂಕೆಯಿಂದ ಉಪವಾಸ ಸತ್ಯಾಗ್ರಹ

|

Updated on: Jun 27, 2024 | 12:14 PM

ಎಐಎಡಿಎಂಕೆ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಕಲ್ಲಕುರಿಚಿ ಕಳ್ಳಭಟ್ಟಿ ದುರಂತ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದರು.

Kallakurichi Hooch Tragedy: ಕಲ್ಲಕುರಿಚಿ ಕಳ್ಳಭಟ್ಟಿ ದುರಂತ, ಎಐಎಡಿಎಂಕೆಯಿಂದ ಉಪವಾಸ ಸತ್ಯಾಗ್ರಹ
ಕೆ ಪಳನಿಸ್ವಾಮಿ
Image Credit source: India Today
Follow us on

ಕಲ್ಲಕುರಿಚಿ ಕಳ್ಳಭಟ್ಟಿ ದುರಂತ ಖಂಡಿಸಿ ಎಐಎಡಿಂಕೆ ಕಾರ್ಯಕರ್ತರು ಚೆನ್ನೈನಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರು. ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಕಲ್ಲಕುರಿಚಿ ಕಳ್ಳಭಟ್ಟಿ ದುರಂತ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದರು.

ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಿಂದ ಅಮಾನತುಗೊಂಡಿರುವ ಎಐಎಡಿಎಂಕೆ ಶಾಸಕರು ಕಪ್ಪು ಬಟ್ಟೆ ಧರಿಸಿ, ಚೆನ್ನೈನಲ್ಲಿ ಬೆಳಿಗ್ಗೆ 9 ಗಂಟೆಗೆ ರಾಜರತ್ನಂ ಕ್ರೀಡಾಂಗಣದಲ್ಲಿ ತಮ್ಮ ಉಪವಾಸವನ್ನು ಪ್ರಾರಂಭಿಸಿದರು.

ರಾಜ್ಯ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲು ಅನುಮತಿ ನಿರಾಕರಣೆ ಖಂಡಿಸಿ ನಡೆಸುತ್ತಿರುವ ಉಪವಾಸವೂ ಆಗಿದೆ. ಕಳ್ಳಭಟ್ಟಿ ಸೇವಿಸಿ 60ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದು, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದುರಂತದ ಬಗ್ಗೆ ಪ್ರಾಮಾಣಿಕ ಚರ್ಚೆಯನ್ನು ನಿರಾಕರಿಸುವುದು ಮತ್ತು ಎಐಎಡಿಎಂಕೆ ಶಾಸಕರನ್ನು ಹೊರಹಾಕುವುದು ಮತ್ತು ಅಮಾನತುಗೊಳಿಸುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಪಳನಿಸ್ವಾಮಿ ಬುಧವಾರ ಹೇಳಿದ್ದರು.

ಮತ್ತಷ್ಟು ಓದಿ: ತಮಿಳುನಾಡು ಕಳ್ಳಭಟ್ಟಿ ದುರಂತ: ಸಂತ್ರಸ್ತರನ್ನು ಭೇಟಿ ಮಾಡಿದ ನಟ ಕಮಲ್ ಹಾಸನ್, ಹೇಳಿದ್ದಿಷ್ಟು

ಈ ದುರಂತದ ಕುರಿತು ಡಿಎಂಕೆ ಸರ್ಕಾರ ದಿಕ್ಕಿ ತಪ್ಪಿಸುವ ಕೆಲಸ ಮಾಡುತ್ತಿದೆ, ಗುರುವಾರ ಸಂಜೆ 5 ಗಂಟೆಗೆ ಉಪವಾಸ ಸತ್ಯಾಗ್ರಹ ಅಂತ್ಯಗೊಳ್ಳುವ ಸಾಧ್ಯತೆ ಇದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ