Kallakurichi Hooch Tragedy: ಕಲ್ಲಕುರಿಚಿ ಕಳ್ಳಭಟ್ಟಿ ದುರಂತ; ಸಾವಿನ ಸಂಖ್ಯೆ 48ಕ್ಕೆ ಏರಿಕೆ; ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ತಮಿಳುನಾಡಿನ ಕಳ್ಳಭಟ್ಟಿ ದುರಂತದಿಂದ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ವಿಷಪೂರಿತ ಕಳ್ಳಭಟ್ಟಿ ಮಾರಾಟದಲ್ಲಿ ತೊಡಗಿದ್ದ ನಾಲ್ವರನ್ನು ಇದುವರೆಗೆ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚೆನ್ನೈ: ಕಲ್ಲಕುರಿಚಿ ಕಳ್ಳಭಟ್ಟಿ ದುರಂತದಲ್ಲಿ (Kallakurichi Hooch Tragedy) 48 ಮಂದಿ ದಾರುಣವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು (Tamil Nadu) ಸದ್ಯ ರಾಜಕೀಯ ಹಗ್ಗಜಗ್ಗಾಟ ಎದುರಿಸುತ್ತಿದೆ. ಕಲ್ಲಕುರಿಚಿಯ ಪ್ರಮುಖ ಭಾಗಗಳಲ್ಲಿಯೂ ಅಕ್ರಮ ಮದ್ಯದ ದಂಧೆ ನಡೆಯುತ್ತಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಈ ಅನಾಹುತದ ಹಿನ್ನೆಲೆಯಲ್ಲಿ ಕಲ್ಲಕುರಿಚಿಯ ಹಿಂದಿನ ಜಿಲ್ಲಾಧಿಕಾರಿ ಶ್ರವಣಕುಮಾರ್ ಜಾತಾವತ್ ಅಮಾನತುಗೊಂಡಿದ್ದು, ಅವರ ನಂತರ ಹೊಸದಾಗಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಎಂ.ಎಸ್. ಪ್ರಶಾಂತ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ನಕಲಿ ಮದ್ಯ ಸೇವನೆಯಿಂದ 165 ವ್ಯಕ್ತಿಗಳನ್ನು ಕಲ್ಲಕುರಿಚಿ, ಜಿಪ್ಮರ್, ಸೇಲಂ ಮತ್ತು ಮುಂಡಿಯಂಬಕ್ಕಂನ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಈಗಾಗಲೇ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಸುಮಾರು 30 ವ್ಯಕ್ತಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಆದರೆ, 119 ಜನರು ಇನ್ನೂ ತೀವ್ರವಾಗಿ ಹೋರಾಡುತ್ತಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: Hooch Tragedy: ತಮಿಳುನಾಡು ಕಳ್ಳಭಟ್ಟಿ ದುರಂತ; ಕಲ್ಲಕುರಿಚಿಯಲ್ಲಿ ಅಕ್ರಮ ಮದ್ಯ ಸೇವಿಸಿ 10 ಜನ ಸಾವು
ಕಲ್ಲಕುರಿಚಿ ಕಳ್ಳಭಟ್ಟಿ ದುರಂತದ ಕುರಿತು ಮದ್ರಾಸ್ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕಲ್ಲಕುರಿಚಿ ಕಳ್ಳಭಟ್ಟಿ ದುರಂತದಲ್ಲಿ 48 ಮಂದಿ ಸಾವನ್ನಪ್ಪಿರುವ ತಮಿಳುನಾಡು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಮದ್ರಾಸ್ ಹೈಕೋರ್ಟ್, ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಇಂದು (ಶುಕ್ರವಾರ) ಆದೇಶಿಸಿದೆ.
VIDEO | Kallakurichi Hooch Tragedy: “I have no words to say. From yesterday, almost the whole Tamil Nadu is mourning. Local women are telling…more than 50 years this practice is carried out there. It’s the utter failure of the state government,” says BJP leader Tamilisai… pic.twitter.com/mfjAp5zT2o
— Press Trust of India (@PTI_News) June 21, 2024
ಎಐಎಡಿಎಂಕೆ ಕಾನೂನು ವಿಭಾಗದ ಕಾರ್ಯದರ್ಶಿ ಐ.ಎಸ್. ಇನ್ಬದುರೈ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮುಂದಿನ ವಿಚಾರಣೆಯನ್ನು ಜೂನ್ 26ಕ್ಕೆ ಮುಂದೂಡಲಾಗಿದೆ. ನ್ಯಾಯಮೂರ್ತಿಗಳಾದ ಡಿ. ಕೃಷ್ಣಕುಮಾರ್ ಮತ್ತು ಕೆ. ಕುಮರೇಶ್ ಬಾಬು ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ನಿರ್ದೇಶನ ನೀಡಿದೆ. ಕಳ್ಳಕುರಿಚಿ ಜಿಲ್ಲೆಯಲ್ಲಿ ಆರೋಪಿಗಳು ನಡೆಸಿದ ಅಪರಾಧ, ಅಕ್ರಮ ಮದ್ಯ ಮಾರಾಟದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪಿಐಎಲ್ ಕೋರಿದೆ.
ಕಳೆದ ವರ್ಷ ವಿಲ್ಲುಪುರಂನ ಮರಕಾನಂನಲ್ಲಿ ನಡೆದ ಇಂತಹುದೇ ಘಟನೆಯ ಹಿನ್ನೆಲೆಯಲ್ಲಿ ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತದ ಬಗ್ಗೆ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ವರದಿಯಲ್ಲಿ ಇರಬೇಕು ಎಂದು ನ್ಯಾಯಪೀಠ ಹೇಳಿದೆ.
ಈ ಪ್ರಕರಣವು ಜನರ ಜೀವನಕ್ಕೆ ಸಂಬಂಧಿಸಿದ್ದು ಎಂದು ಮೌಖಿಕವಾಗಿ ಗಮನಿಸಿದ ಪೀಠವು, ಕಳೆದ 1 ವರ್ಷದಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಯಲು ಪೊಲೀಸರು ಏನು ಕ್ರಮ ಕೈಗೊಂಡಿದ್ದಾರೆ ಮತ್ತು ಎಷ್ಟು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಸೂಚಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ