Kalyan Singh: ಉತ್ತರ ಪ್ರದೇಶದ ಮಾಜಿ ಸಿಎಂ, ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ನಿಧನ

ಕಲ್ಯಾಣ್ ಸಿಂಗ್ ನಿಧನ: 89 ವರ್ಷದ ಕಲ್ಯಾಣ್ ಸಿಂಗ್ ಅವರ ದೇಹ ಇದ್ದಕ್ಕಿದ್ದಂತೆ ಊದಿಕೊಂಡು, ಪ್ರಜ್ಞಾ ಹೀನರಾದ ಹಿನ್ನೆಲೆಯಲ್ಲಿ ಜುಲೈ 4ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Kalyan Singh: ಉತ್ತರ ಪ್ರದೇಶದ ಮಾಜಿ ಸಿಎಂ, ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ನಿಧನ
ಕಲ್ಯಾಣ್ ಸಿಂಗ್
Follow us
TV9 Web
| Updated By: guruganesh bhat

Updated on:Aug 21, 2021 | 10:43 PM

ದೆಹಲಿ: ಬಿಜೆಪಿ ಹಿರಿಯ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (Kalyan Singh) ಬಹು ಅಂಗಾಂಗ ವೈಫಲ್ಯದಿಂದ ದೆಹಲಿಯ ಸಂಜಯ್ ಗಾಂಧಿ ಪೋಸ್ಟ್​ ಗ್ರಾಜುಯೇಟ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್​ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  89 ವರ್ಷದ ಕಲ್ಯಾಣ್ ಸಿಂಗ್ ಅವರ ದೇಹ ಇದ್ದಕ್ಕಿದ್ದಂತೆ ಊದಿಕೊಂಡು, ಪ್ರಜ್ಞಾ ಹೀನರಾದ ಹಿನ್ನೆಲೆಯಲ್ಲಿ ಜುಲೈ 4ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಬಾರಿ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ   ಕಲ್ಯಾಣ್ ಸಿಂಗ್  ಸೇವೆ ಸಲ್ಲಿಸಿದ್ದರು. ಅವರ ಆರೋಗ್ಯದ ಬಗ್ಗೆ ತಜ್ಞ ವೈದ್ಯರ ತಂಡ ನಿರಂತರವಾಗಿ ಗಮನ ಹರಿಸುತ್ತಿತ್ತು. ಕಾರ್ಡಿಯಾಲಜಿ, ನೆಫ್ರಾಲಜಿ, ನ್ಯೂರಾಲಜಿ, ಎಂಡೋಕ್ರಿನಾಲಜಿ ವೈದ್ಯರು ಸಿಂಗ್ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಇಟ್ಟಿದ್ದರು. ಆನಂತರ ಮೂತ್ರ ವಿಸರ್ಜನೆಯಾಗದ ಹಿನ್ನೆಲೆಯಲ್ಲಿ ಡಯಾಲಿಸಿಸ್​ನಲ್ಲಿ ಇರಿಸಲಾಗಿತ್ತು. 

1991, ಜೂನ್ ತಿಂಗಳಿಂದ 1992 ಡಿಸೆಂಬರ್​ವರೆಗೆ ಮತ್ತು 1997 ಸೆಪ್ಟೆಂಬರ್​ನಿಂದ 1999 ನವೆಂಬರ್​ವರೆಗೆ ಅವರು ಎರಡು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಮೊದಲ ಅಧಿಕಾರಾವಧಿಯಲ್ಲಿ ಅಯೋಧ್ಯಾದ ಬಾಬ್ರೀ ಮಸೀದಿಯನ್ನು ಕರ ಸೇವಕರು ನಾಶಪಡಿಸಿದ ಘಟನೆಯೂ ನಡೆದಿತ್ತು. ಬಾಬ್ರೀ ಮಸೀದಿ ಧ್ವಂಸಗೊಂಡ ದಿನವೇ ಕಲ್ಯಾಣ್ ಸಿಂಗ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು. ಈ ಕಾರಣದಿಂದಲೇ ಕಲ್ಯಾಣ್ ಸಿಂಗ್​ರನ್ನು ಇಂದಿಗೂ ಹಲವರು ನೆನಪಿಸಿಕೊಳ್ಳುತ್ತಾರೆ.

ಕಲ್ಯಾಣ್ ಸಿಂಗ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹಲವು ಬಿಜೆಪಿ ನಾಯಕರು ಕಲ್ಯಾಣ್ ಸಿಂಗ್ ಅವರ ಅಂತಿಮ ದರ್ಶನಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ, ಮಾಯಾವತಿ, ಅಖಿಲೇಶ್ ಯಾದವ್ ಮತ್ತು ಹಲವು ಗಣ್ಯರು ಕಲ್ಯಾಣ್ ಸಿಂಗ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಮೂರು ದಿನ ಶೋಕಾಚರಣೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಆದೇಶಿಸಿದ್ದಾರೆ.

ಇದನ್ನೂ ಓದಿ: 

Kalyan Singh Health: ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ; ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ 

ಉತ್ತರ ಪ್ರದೇಶದ ಮಾಜಿ ಸಿಎಂ, ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ; ಶೀಘ್ರ ಗುಣಮುಖರಾಗಲು ಮೋದಿ ಪ್ರಾರ್ಥನೆ

(Kalyan Singh Former Uttar Pradesh CM died at 89)

Published On - 10:10 pm, Sat, 21 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ