Kalyan Singh Health: ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ; ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ

| Updated By: ಸುಷ್ಮಾ ಚಕ್ರೆ

Updated on: Aug 20, 2021 | 4:30 PM

Kalyan Singh Health: ಕಲ್ಯಾಣ್ ಸಿಂಗ್ ಅವರ ರಕ್ತದೊತ್ತಡ ಕಡಿಮೆಯಾಗಿದ್ದು, ಮೂತ್ರ ವಿಸರ್ಜನೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Kalyan Singh Health: ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ; ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ
ಕಲ್ಯಾಣ್ ಸಿಂಗ್
Follow us on

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅನಾರೋಗ್ಯದಿಂದ ಲಕ್ನೋದಲ್ಲಿರುವ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದ್ದು, ಡಯಾಲಿಸಿಸ್​ನಲ್ಲಿ ಇರಿಸಲಾಗಿದೆ. ಕಲ್ಯಾಣ್ ಸಿಂಗ್ ಅವರ ರಕ್ತದೊತ್ತಡ ಕಡಿಮೆಯಾಗಿದ್ದು, ಮೂತ್ರ ವಿಸರ್ಜನೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಕಳೆದ ಹಲವು ದಿನಗಳಿಂದಲೂ ಕಲ್ಯಾಣ್ ಸಿಂಗ್ ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನಿನ್ನೆ ಆಸ್ಪತ್ರೆಗೆ ತೆರಳಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಕಲ್ಯಾಣ್ ಸಿಂಗ್ ಅವರನ್ನು ಮೊದಲು ದೆಹಲಿಯ ಆರ್​ಎಮ್​ಎಲ್ ಇನ್​ಸ್ಟಿಟ್ಯೂಟ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಲಕ್ನೋದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್​ನಲ್ಲಿಟ್ಟು ಕಲ್ಯಾಣ್ ಸಿಂಗ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

89 ವರ್ಷದ ಕಲ್ಯಾಣ್ ಸಿಂಗ್ ಅವರ ದೇಹ ಇದ್ದಕ್ಕಿದ್ದಂತೆ ಊದಿಕೊಂಡು, ಪ್ರಜ್ಞಾ ಹೀನರಾದ ಹಿನ್ನೆಲೆಯಲ್ಲಿ ಜುಲೈ 4ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಲ್ಯಾಣ್ ಸಿಂಗ್ ಅವರ ಆರೋಗ್ಯದ ಬಗ್ಗೆ ತಜ್ಞ ವೈದ್ಯರ ತಂಡ ನಿರಂತರವಾಗಿ ಗಮನ ಹರಿಸುತ್ತಿದೆ. ಕಾರ್ಡಿಯಾಲಜಿ, ನೆಫ್ರಾಲಜಿ, ನ್ಯೂರಾಲಜಿ, ಎಂಡೋಕ್ರಿನಾಲಜಿ ವೈದ್ಯರು ಸಿಂಗ್ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಇಟ್ಟಿದ್ದಾರೆ. ಇದೀಗ ಮೂತ್ರ ವಿಸರ್ಜನೆಯಾಗದ ಹಿನ್ನೆಲೆಯಲ್ಲಿ ಡಯಾಲಿಸಿಸ್​ನಲ್ಲಿ ಇರಿಸಲಾಗಿದೆ. ಅವರನ್ನು ಇನ್ನೂ ವೆಂಟಿಲೇಟರ್​ನಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: Kalyan Singh Health Update: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ; ವೆಂಟಿಲೇಟರ್ ಅಳವಡಿಕೆ

ಉತ್ತರ ಪ್ರದೇಶದ ಮಾಜಿ ಸಿಎಂ, ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ; ಶೀಘ್ರ ಗುಣಮುಖರಾಗಲು ಮೋದಿ ಪ್ರಾರ್ಥನೆ

(Kalyan Singh Health Uttar Pradesh Former CM Kalyan Singh Health Condition is critical put on dialysis)