Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಿಯ ಕೆನ್ನೆ ಹಿಂಡಿದ ಕಲ್ಯಾಣ್: ಧನ್ಖರ್​​ನ್ನು ಅನುಕರಣೆ ಮಾಡಿದ ಸಂಸದನ ಹಳೆಯ ವಿಡಿಯೋ ವೈರಲ್

ಟಿಎಂಸಿ ಸಂಸದ ಸಂಸತ್​​​​​​ನಿಂದ ಅಮಾನತುಗೊಂಡ ನಂತರ ನೂತನ ಸಂಸತ್ ಭವನದ ಮಕರ ದ್ವಾರದಲ್ಲಿ ಕೂತು ರಾಜ್ಯಸಭಾ ಸಭಾಪತಿ ಜಗದೀಪ್ ಧನ್ಖರ್ ಅವರಂತೆ ನಟಿಸಿರುವ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಈ ಬಗ್ಗೆ ಬಿಜೆಪಿ ಕಲ್ಯಾಣ್ ಬ್ಯಾನರ್ಜಿ ಹಾಗೂ ರಾಹುಲ್​​​ ಗಾಂಧಿ ವಿರುದ್ಧ ಟೀಕೆ ಮಾಡಿದೆ. ಇದೀಗ ಇದೇ ಸಮಯದಲ್ಲಿ ಕಲ್ಯಾಣ್ ಬ್ಯಾನರ್ಜಿ ಅವರ ಹಳೆ ವಿಡಿಯೋವೊಂದು ವೈರಲ್​​ ಆಗಿದೆ.

ಶಾಸಕಿಯ ಕೆನ್ನೆ ಹಿಂಡಿದ ಕಲ್ಯಾಣ್: ಧನ್ಖರ್​​ನ್ನು ಅನುಕರಣೆ ಮಾಡಿದ ಸಂಸದನ ಹಳೆಯ ವಿಡಿಯೋ ವೈರಲ್
ವೈರಲ್​ ವಿಡಿಯೋ
Follow us
ಅಕ್ಷಯ್​ ಪಲ್ಲಮಜಲು​​
|

Updated on: Dec 19, 2023 | 6:29 PM

ಇದೀಗ ಭಾರೀ ಸದ್ದು ಮಾಡುತ್ತಿರುವ ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee), ಟಿಎಂಸಿ ಸಂಸದ ಸಂಸತ್​​​​​​ನಿಂದ ಅಮಾನತುಗೊಂಡ ನಂತರ ನೂತನ ಸಂಸತ್ ಭವನದ ಮಕರ ದ್ವಾರದಲ್ಲಿ ಕೂತು ರಾಜ್ಯಸಭಾ ಸಭಾಪತಿ ಜಗದೀಪ್ ಧನ್ಖರ್ ಅವರಂತೆ ನಟಿಸಿರುವ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಈ ಬಗ್ಗೆ ಬಿಜೆಪಿ ಕಲ್ಯಾಣ್ ಬ್ಯಾನರ್ಜಿ ಹಾಗೂ ರಾಹುಲ್​​​ ಗಾಂಧಿ ವಿರುದ್ಧ ಟೀಕೆ ಮಾಡಿದೆ. ಇದೀಗ ಇದೇ ಸಮಯದಲ್ಲಿ ಕಲ್ಯಾಣ್ ಬ್ಯಾನರ್ಜಿ ಅವರ ಹಳೆ ವಿಡಿಯೋವೊಂದು ವೈರಲ್​​ ಆಗಿದೆ. ಪತ್ರಿಕಾಗೋಷ್ಠಿಯೊಂದರಲ್ಲಿ ಕಲ್ಯಾಣ್ ಬ್ಯಾನರ್ಜಿ ಮಹಿಳಾ ಶಾಸಕಿರೊಬ್ಬರ ಕೆನ್ನೆಯನ್ನು ಎಳೆಯುತ್ತಿರುವ ವಿಡಿಯೋ ವೈರಲ್​​ ಆಗಿದೆ. ಇದೀಗ ಈ ವಿಡಿಯೋ ಎಕ್ಸ್​​ನಲ್ಲಿ ಭಾರೀ ಸದ್ದು ಮಾಡುತ್ತಿದೆ.

ಬಿಜೆಪಿ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭದಲ್ಲಿ ಮಹಿಳಾ ಶಾಸಕಿಯ ಕೆನ್ನೆಯನ್ನು ಹಿಂಡಿದ್ದಾರೆ. ಈ 3 ಸೆಕೆಂಡಿನ ವಿಡಿಯೋ ಇದೀಗ ಭಾರೀ ಸದ್ದು ಮಾಡಿದೆ. ಮೇಘ್ ಅಪ್ಡೇಟ್​​​ ಎಂಬ ಎಕ್ಸ್​​​ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸಂಸತ್​​​​ ಹೊರಗೆ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಧ್ಯಕ್ಷರಾಗಿರುವ ಜಗದೀಪ್ ಧನ್ಖರ್ ಅವರಂತೆ ನಟಿಸಿದ ವಿಡಿಯೋ ವೈರಲ್​​​ ಆಗಿತ್ತು. ಈ ಸಮಯದಲ್ಲಿ ಮತ್ತೊಂದು ಹಳೆ ವಿಡಿಯೋ ವೈರಲ್​​ ಆಗಿದೆ. ಈ ಬಗ್ಗೆ ಎಕ್ಸ್​​ನಲ್ಲಿ ಅನೇಕರು ಕಮೆಂಟ್​​​ ಮಾಡಿದ್ದಾರೆ. ಇವರು ನಾಚಿಕೆಗೇಡಿನ ಸಂಸದ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಪಕ್ಷ ಸಂಸದರ ಪ್ರತಿಭಟನೆ ವೇಳೆ ಜಗದೀಪ್ ಧನ್ಖರ್​​ನ್ನು ಅನುಕರಣೆ ಮಾಡಿದ ಟಿಎಂಸಿ ಎಂಪಿ

ವೈರಲ್​​ ವಿಡಿಯೋ ಇಲ್ಲಿದೆ:

ಜಗದೀಪ್ ಧನ್ಖರ್​​ನ್ನು ಅನುಕರಣೆ ಮಾಡಿದ ಟಿಎಂಸಿ ಎಂಪಿ

ಸಂಸತ್ತಿನಲ್ಲಿ ಭಾರೀ ಭದ್ರತಾ ಲೋಪ ನಂತರ ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ 141 ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ನೂತನ ಸಂಸತ್ ಭವನದ ಮಕರ ದ್ವಾರದಲ್ಲಿ ಸಂಸದರು ಅಣಕು ಸದನದ ಕಲಾಪ ನಡೆಸಿದರು. ಜಗದೀಪ್ ಧನ್ಖರ್ ಈ ಘಟನೆಯನ್ನು “ಅಸಂಬದ್ಧ ಮತ್ತು ಸ್ವೀಕಾರಾರ್ಹವಲ್ಲ” ಎಂದಿದ್ದಾರೆ. ಈ ಬಗ್ಗೆ ಬಿಜೆಪಿ ವಿಡಿಯೊವನ್ನು ಹಂಚಿಕೊಂಡಿದ್ದು, ಉಪರಾಷ್ಟ್ರಪತಿಯನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ಬ್ಯಾನರ್ಜಿ ಮತ್ತು ರಾಹುಲ್ ಗಾಂಧಿ ಇಬ್ಬರನ್ನೂ ಟೀಕಿಸಿದೆ. ಪ್ರತಿಪಕ್ಷದ ಸಂಸದರನ್ನು ಏಕೆ ಅಮಾನತುಗೊಳಿಸಲಾಗಿದೆ ಎಂದು ದೇಶವು ಆಶ್ಚರ್ಯ ಪಡುತ್ತಿದ್ದರೆ, ಕಾರಣ ಇಲ್ಲಿದೆ. ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಲೇವಡಿ ಮಾಡಿದರು, ಆದರೆ ರಾಹುಲ್ ಗಾಂಧಿ ಅವರನ್ನು ನಗುತ್ತಾ ಹುರಿದುಂಬಿಸಿದರು. ಅವರು ಸದನದಲ್ಲಿ ಎಷ್ಟು ಅಜಾಗರೂಕ ಮತ್ತು ಉಲ್ಲಂಘನೆ ಮಾಡಿದ್ದಾರೆಂದು ಯಾರಾದರೂ ಊಹಿಸಬಹುದು ಎಂದು ವಿಡಿಯೊದ ಜತೆಗಿನ ಬರಹದಲ್ಲಿ ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ