
ಇದೀಗ ಭಾರೀ ಸದ್ದು ಮಾಡುತ್ತಿರುವ ಸಂಸದ ಕಲ್ಯಾಣ್ ಬ್ಯಾನರ್ಜಿ (Kalyan Banerjee), ಟಿಎಂಸಿ ಸಂಸದ ಸಂಸತ್ನಿಂದ ಅಮಾನತುಗೊಂಡ ನಂತರ ನೂತನ ಸಂಸತ್ ಭವನದ ಮಕರ ದ್ವಾರದಲ್ಲಿ ಕೂತು ರಾಜ್ಯಸಭಾ ಸಭಾಪತಿ ಜಗದೀಪ್ ಧನ್ಖರ್ ಅವರಂತೆ ನಟಿಸಿರುವ ವಿಡಿಯೋ ಎಲ್ಲ ಕಡೆ ವೈರಲ್ ಆಗಿದೆ. ಈ ಬಗ್ಗೆ ಬಿಜೆಪಿ ಕಲ್ಯಾಣ್ ಬ್ಯಾನರ್ಜಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಟೀಕೆ ಮಾಡಿದೆ. ಇದೀಗ ಇದೇ ಸಮಯದಲ್ಲಿ ಕಲ್ಯಾಣ್ ಬ್ಯಾನರ್ಜಿ ಅವರ ಹಳೆ ವಿಡಿಯೋವೊಂದು ವೈರಲ್ ಆಗಿದೆ. ಪತ್ರಿಕಾಗೋಷ್ಠಿಯೊಂದರಲ್ಲಿ ಕಲ್ಯಾಣ್ ಬ್ಯಾನರ್ಜಿ ಮಹಿಳಾ ಶಾಸಕಿರೊಬ್ಬರ ಕೆನ್ನೆಯನ್ನು ಎಳೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಇದೀಗ ಈ ವಿಡಿಯೋ ಎಕ್ಸ್ನಲ್ಲಿ ಭಾರೀ ಸದ್ದು ಮಾಡುತ್ತಿದೆ.
ಬಿಜೆಪಿ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭದಲ್ಲಿ ಮಹಿಳಾ ಶಾಸಕಿಯ ಕೆನ್ನೆಯನ್ನು ಹಿಂಡಿದ್ದಾರೆ. ಈ 3 ಸೆಕೆಂಡಿನ ವಿಡಿಯೋ ಇದೀಗ ಭಾರೀ ಸದ್ದು ಮಾಡಿದೆ. ಮೇಘ್ ಅಪ್ಡೇಟ್ ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸಂಸತ್ ಹೊರಗೆ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಧ್ಯಕ್ಷರಾಗಿರುವ ಜಗದೀಪ್ ಧನ್ಖರ್ ಅವರಂತೆ ನಟಿಸಿದ ವಿಡಿಯೋ ವೈರಲ್ ಆಗಿತ್ತು. ಈ ಸಮಯದಲ್ಲಿ ಮತ್ತೊಂದು ಹಳೆ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಎಕ್ಸ್ನಲ್ಲಿ ಅನೇಕರು ಕಮೆಂಟ್ ಮಾಡಿದ್ದಾರೆ. ಇವರು ನಾಚಿಕೆಗೇಡಿನ ಸಂಸದ ಎಂದು ಹೇಳಿದ್ದಾರೆ.
ಇದನ್ನೂ ಓದಿ: ವಿಪಕ್ಷ ಸಂಸದರ ಪ್ರತಿಭಟನೆ ವೇಳೆ ಜಗದೀಪ್ ಧನ್ಖರ್ನ್ನು ಅನುಕರಣೆ ಮಾಡಿದ ಟಿಎಂಸಿ ಎಂಪಿ
ಸಂಸತ್ತಿನಲ್ಲಿ ಭಾರೀ ಭದ್ರತಾ ಲೋಪ ನಂತರ ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ 141 ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ನೂತನ ಸಂಸತ್ ಭವನದ ಮಕರ ದ್ವಾರದಲ್ಲಿ ಸಂಸದರು ಅಣಕು ಸದನದ ಕಲಾಪ ನಡೆಸಿದರು. ಜಗದೀಪ್ ಧನ್ಖರ್ ಈ ಘಟನೆಯನ್ನು “ಅಸಂಬದ್ಧ ಮತ್ತು ಸ್ವೀಕಾರಾರ್ಹವಲ್ಲ” ಎಂದಿದ್ದಾರೆ. ಈ ಬಗ್ಗೆ ಬಿಜೆಪಿ ವಿಡಿಯೊವನ್ನು ಹಂಚಿಕೊಂಡಿದ್ದು, ಉಪರಾಷ್ಟ್ರಪತಿಯನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ಬ್ಯಾನರ್ಜಿ ಮತ್ತು ರಾಹುಲ್ ಗಾಂಧಿ ಇಬ್ಬರನ್ನೂ ಟೀಕಿಸಿದೆ. ಪ್ರತಿಪಕ್ಷದ ಸಂಸದರನ್ನು ಏಕೆ ಅಮಾನತುಗೊಳಿಸಲಾಗಿದೆ ಎಂದು ದೇಶವು ಆಶ್ಚರ್ಯ ಪಡುತ್ತಿದ್ದರೆ, ಕಾರಣ ಇಲ್ಲಿದೆ. ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಲೇವಡಿ ಮಾಡಿದರು, ಆದರೆ ರಾಹುಲ್ ಗಾಂಧಿ ಅವರನ್ನು ನಗುತ್ತಾ ಹುರಿದುಂಬಿಸಿದರು. ಅವರು ಸದನದಲ್ಲಿ ಎಷ್ಟು ಅಜಾಗರೂಕ ಮತ್ತು ಉಲ್ಲಂಘನೆ ಮಾಡಿದ್ದಾರೆಂದು ಯಾರಾದರೂ ಊಹಿಸಬಹುದು ಎಂದು ವಿಡಿಯೊದ ಜತೆಗಿನ ಬರಹದಲ್ಲಿ ಹೇಳಲಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ