Kamal Haasan: ತಮಿಳುನಾಡು ಚುನಾವಣೆ: ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಮಲ್ ಹಾಸನ್ ನಾಮಪತ್ರ

Tamilnadu Assembly Elections: ಕಮಲ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಶೇ 3.75ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿತ್ತು. ಎಂಎನ್​ಎಂ ನೇತೃತ್ವದ ಮೂರು ಪಕ್ಷಗಳ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿರುವ ಕಮಲ್ ಹಾಸನ್ ಕೇಂದ್ರ ವಲಯದ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

Kamal Haasan: ತಮಿಳುನಾಡು ಚುನಾವಣೆ: ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಮಲ್ ಹಾಸನ್ ನಾಮಪತ್ರ
ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ ಕಮಲ್ ಹಾಸನ್
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 15, 2021 | 10:17 PM

ಕೊಯಮತ್ತೂರು: ಮಕ್ಕಳ್ ನೀಧಿ ಮೈಯಮ್ (ಎಂಎನ್​ಎಂ) ಪಕ್ಷದ ಸ್ಥಾಪಕ ಕಮಲ್ ಹಾಸನ್ ಸೋಮವಾರ ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಏಪ್ರಿಲ್ 6ರಂದು ನಡೆಯಲಿರುವ ಚುನಾವಣೆಯಲ್ಲಿ ಕಮಲ್ ಹಾಸನ್ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಎದುರಿಸಲಿದ್ದಾರೆ. ತಮಿಳುನಾಡಿನ ಪ್ರಮುಖ ರಾಜಕೀಯ ಪಕ್ಷಗಳಾದ ಎಐಎಡಿಎಂಕೆ ಮತ್ತು ಡಿಎಂಕೆ ಈ ಕ್ಷೇತ್ರವನ್ನು ಬಿಜೆಪಿ ಮತ್ತು ಕಾಂಗ್ರೆಸ್​ಗೆ ಬಿಟ್ಟುಕೊಟ್ಟಿವೆ ಎಂಬುದು ಗಮನಾರ್ಹ ಸಂಗತಿ.

ಕಮಲ್ ಹಾಸನ್ ಫೆಬ್ರುವರಿ 2018ರಲ್ಲಿಯೇ ಎಂಎನ್​ಎಂ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ತಾವು ಸ್ವತಃ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸಿರಲಿಲ್ಲ. 2019ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಅಭ್ಯರ್ಥಿಗಳನ್ನು ನಿಲ್ಲಿಸಿದ್ದರು. ಕಮಲ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಶೇ 3.75ರಷ್ಟು ಮತಗಳನ್ನು ತನ್ನದಾಗಿಸಿಕೊಂಡಿತ್ತು. ಎಂಎನ್​ಎಂ ನೇತೃತ್ವದ ಮೂರು ಪಕ್ಷಗಳ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿರುವ ಕಮಲ್ ಹಾಸನ್ ಕೇಂದ್ರ ವಲಯದ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಎಐಎಡಿಎಂಕೆಯ ಅಮ್ಮಾನ್ ಕೆ.ಅರ್ಜುನನ್ ಈ ಮೊದಲು ಕೊಯಮತ್ತೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಈ ಸಲ ಎಐಎಡಿಎಂಕೆ ಈ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟಿದೆ. ಅರ್ಜುನನ್ ಕೊಯಮತ್ತೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ಕಮಲ್ ಹಾಸನ್ ಎದುರು ಬಿಜೆಪಿಯ ವನತಿ ಶ್ರೀನಿವಾಸನ್ ಮತ್ತು ಕಾಂಗ್ರೆಸ್​ನ ಮಯೂರ ಎಸ್.ಜಯಕುಮಾರ್ ಸ್ಪರ್ಧಿಸಲಿದ್ದಾರೆ. ಬಿಜೆಪಿ ಹುರಿಯಾಳಾಗಿರುವ ವನತಿ, ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರೂ ಹೌದು.

ತಮಿಳುನಾಡಿನ ಜನಪ್ರಿಯ ನಟ ಕಮಲ್ ಹಾಸನ್ ಡಿಎಂಕೆ ಮತ್ತು ಎಐಎಡಿಎಂಕೆ ನಡೆಗಳನ್ನು ಸತತ ಟೀಕಿಸುತ್ತಿದ್ದರು. ಭ್ರಷ್ಟಾಚಾರ ಮುಕ್ತ ಉತ್ತಮ ಆಡಳಿತದ ಬಗ್ಗೆ ಸದಾ ಮಾತನಾಡುತ್ತಿದ್ದರು. ತಮಿಳುನಾಡಿನಲ್ಲಿ 234 ಕ್ಷೇತ್ರಗಳಿದ್ದರೂ ತನ್ನ ಹೃದಯಕ್ಕೆ ಹತ್ತಿರ ಎಂಬ ಕಾರಣಕ್ಕೆ ಕೊಯಮತ್ತೂರು ಕ್ಷೇತ್ರವನ್ನು ಆರಿಸಿಕೊಂಡಿದ್ದಾಗಿ ಕಮಲ್ ಹಾಸನ್ ಹೇಳಿದ್ದರು. ಕೆಲ ಪಟ್ಟಭದ್ರ ಹಿತಾಸಕ್ತಿಗಳು ನಗರದಲ್ಲಿ ಕೋಮುದಳ್ಳುರಿ ಹಬ್ಬಿಸಲು ಯತ್ನಿಸುತ್ತಿವೆ. ಇಂಥ ಪ್ರಯತ್ನಗಳಿಗೆ ತಮ್ಮ ಪಕ್ಷ ಕಡಿವಾಣ ಹಾಕಲಿದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.

‘ಹೊರಗಿನವನು’ ಎಂಬ ಆರೋಪ ಗೆಲುವಿನ ಸಾಧ್ಯತೆಯನ್ನು ಕಡಿಮೆ ಮಾಡಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ‘ಇವೆಲ್ಲವೂ ಸಾಮಾಜಿಕ ಮಾಧ್ಯಮಗಳು ಮತ್ತು ಕೆಲ ರಾಜಕೀಯ ಪಕ್ಷಗಳ ಸೃಷ್ಟಿ. ನನಗೆ ಇಂಥ ಸಮಸ್ಯೆ ಎದುರಾಗಿಲ್ಲ’ ಎಂದು ಹೇಳಿದರು.

ರಸ್ತೆ ನಿರ್ಮಾಣ, ಕುಡಿಯುವ ನೀರು ಸರಬರಾಜು ಮತ್ತು ವಿಮಾನ ನಿಲ್ದಾಣ ವಿಸ್ತರಣೆ ಸೇರಿದಂತೆ ಹಲವು ಯೋಜನೆಗಳನ್ನು ಪೂರ್ಣಗೊಳಿಸುವ ಭರವಸೆಯನ್ನು ಕಮಲ್ ಹಾಸನ್ ನೀಡಿದ್ದಾರೆ. ‘ಕೊಯಮತ್ತೂರನ್ನು ಕೇವಲ ಭಾರತದ ಅತ್ಯುತ್ತಮ ನಗರವನ್ನಾಗಿ ಅಲ್ಲ, ವಿಶ್ವದ ಅತ್ಯುತ್ತಮ ನಗರವನ್ನಾಗಿ ರೂಪಿಸುವ ಆಸೆ ನನಗಿದೆ. ಇತರರಂತೆ ರಾಜಕಾರಣ ನನ್ನ ವೃತ್ತಿ ಅಲ್ಲ. ರಾಜಕಾರಣ ನನ್ನ ಕರ್ತವ್ಯ. ನಾನಿದನ್ನು ಬದ್ಧತೆಯಿಂದ ನಿರ್ವಹಿಸುತ್ತೇನೆ’ ಎಂದು ಕಮಲ್ ಹೇಳಿದರು.

ಇದನ್ನೂ ಓದಿ: ಬಿಜೆಪಿಯಿಂದ ಕೇರಳ, ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಅಣ್ಣಾಮಲೈ, ಖುಷ್ಬೂಗೆ ಅವಕಾಶ

ಇದನ್ನೂ ಓದಿ: ತಮಿಳುನಾಡು ವಿಧಾನಸಭೆ ಚುನಾವಣೆ: ‘ಕರ್ನಾಟಕದ ಸಿಂಗಂ’ ಅಣ್ಣಾ ಮಲೈ ಸ್ಪರ್ಧಿಸುತ್ತಿರುವ ಕ್ಷೇತ್ರ ಯಾವುದು? ಆ ಕ್ಷೇತ್ರದ ಮಹಿಮೆ ಏನು?

ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು
ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು