Rajasthan Political Crisis: ಸೋನಿಯಾ ಭೇಟಿ ಮಾಡಲಿರುವ ಕಮಲ್ ನಾಥ್, ರಾಜಸ್ಥಾನ ರಾಜಕೀಯ ಬಿಕ್ಕಟಿನ ಮಧ್ಯಸ್ಥಿಕೆ ವಹಿಸುವ ಸಾಧ್ಯತೆ

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ರಾಜಸ್ಥಾನದಲ್ಲಿನ ಬಿಕ್ಕಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯಿದೆ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

Rajasthan Political Crisis: ಸೋನಿಯಾ ಭೇಟಿ ಮಾಡಲಿರುವ ಕಮಲ್ ನಾಥ್, ರಾಜಸ್ಥಾನ ರಾಜಕೀಯ ಬಿಕ್ಕಟಿನ ಮಧ್ಯಸ್ಥಿಕೆ ವಹಿಸುವ ಸಾಧ್ಯತೆ
Kamal Nath
TV9kannada Web Team

| Edited By: ಅಕ್ಷಯ್​ ಕುಮಾರ್​​

Sep 26, 2022 | 5:25 PM

ದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ರಾಜಸ್ಥಾನದಲ್ಲಿನ ಬಿಕ್ಕಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುವ ಸಾಧ್ಯತೆಯಿದೆ ಮತ್ತು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ರಾಜಸ್ಥಾನದ ತೊಂಬತ್ತೆರಡು ಶಾಸಕರು ನಿನ್ನೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿರುವ ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಬಯಸುವುದಾಗಿ ಹೇಳಿದ್ದಾರೆ. ಈ ವಿಚಾರವನ್ನು ರಾಹುಲ್ ಗಾಂಧಿ ನಿರಾಕರಿಸಿದ್ದು, ಪಕ್ಷವು ಒಬ್ಬ ವ್ಯಕ್ತಿ ಒಂದು ಹುದ್ದೆ ನಿಯಮಕ್ಕೆ ಪಾಲಿಸುತ್ತದೆ ಎಂದು ಹೇಳಿದ್ದಾರೆ. ಶಾಸಕರು ಗೆಹ್ಲೋಟ್‌ರ ಮೊದಲ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರನ್ನು ಉನ್ನತ ಹುದ್ದೆಯಿಂದ ಹೊರಗಿಡಲು ಬಯಸುತ್ತಿದ್ದರೆ ಎಂದು ಹೇಳಿದ್ದಾರೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada