ಜನಾಕ್ರೋಶ ಬಳಿಕ ಕೃಷಿ ಕಾನೂನು ಬಗ್ಗೆ ಹೇಳಿದ್ದ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಿದ ಬಿಜೆಪಿ ಸಂಸದೆ ಕಂಗನಾ ರಣಾವತ್

“ಕೃಷಿ ಕಾನೂನನ್ನು ಪ್ರಸ್ತಾಪಿಸಿದಾಗ, ನಮ್ಮಲ್ಲಿ ಅನೇಕರು ಅದನ್ನು ಬೆಂಬಲಿಸಿದರು. ಆದರೆ ನಮ್ಮ ಪ್ರಧಾನಿ ಅದನ್ನು ಬಹಳ ಸೂಕ್ಷ್ಮತೆ ಮತ್ತು ಸಹಾನುಭೂತಿಯಿಂದ ಹಿಂತೆಗೆದುಕೊಂಡರು.ಅವರ ಮಾತಿನ ಘನತೆಯನ್ನು ಗೌರವಿಸುವುದು ನಮ್ಮೆಲ್ಲ ಕಾರ್ಮಿಕರ ಕರ್ತವ್ಯವಾಗಿದೆ. ಇದನ್ನು ನಾನು ಸಹ ನೆನಪಿನಲ್ಲಿಟ್ಟುಕೊಳ್ಳಬೇಕು. ನಾನು ಕಲಾವಿದೆಯಲ್ಲ. ನಾನು ಬಿಜೆಪಿ ಕಾರ್ಯಕರ್ತೆ ಎಂದಿದ್ದಾರೆ ಕಂಗನಾ.

ಜನಾಕ್ರೋಶ ಬಳಿಕ ಕೃಷಿ ಕಾನೂನು ಬಗ್ಗೆ ಹೇಳಿದ್ದ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಿದ ಬಿಜೆಪಿ ಸಂಸದೆ ಕಂಗನಾ ರಣಾವತ್
ಕಂಗನಾ ರಣಾವತ್
Follow us
ರಶ್ಮಿ ಕಲ್ಲಕಟ್ಟ
|

Updated on: Sep 25, 2024 | 2:16 PM

ದೆಹಲಿ ಸೆಪ್ಟೆಂಬರ್ 25:2021 ರಲ್ಲಿ ರದ್ದುಗೊಳಿಸಲಾದ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು (Farm laws) ಮರಳಿ ತರಲು ಕರೆ ನೀಡಿದ್ದ ಹೇಳಿಕೆಗಳನ್ನು ಬುಧವಾರ ಹಿಂತೆಗೆದುಕೊಂಡ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) , ಅದು ನನ್ನ ವೈಯಕ್ತಿಕ ಅಭಿಪ್ರಾಯ. ಪಕ್ಷದಲ್ಲ ಎಂದು ಹೇಳಿದ್ದಾರೆ. ವಿವಾದಾತ್ಮಕ ಕಾನೂನುಗಳ ಬಗ್ಗೆ ತಮ್ಮ ಹೇಳಿಕೆಯಿಂದ ಅನೇಕರಿಗೆ ಬೇಸರವಾಗಿರಬಹುದು, ಅದಕ್ಕಾಗಿ ವಿಷಾದಿಸುತ್ತೇನೆ ಎಂದಿದ್ದಾರೆ ಕಂಗನಾ .

“ಕಳೆದ ಕೆಲವು ದಿನಗಳಲ್ಲಿ ಮಾಧ್ಯಮಗಳು ಕೃಷಿ ಕಾನೂನಿನ ಬಗ್ಗೆ ನನಗೆ ಕೆಲವು ಪ್ರಶ್ನೆಗಳನ್ನು ಕೇಳಿದವು. ನಾನು ಕಾನೂನನ್ನು ಮರಳಿ ತರಲು ರೈತರು ಪ್ರಧಾನಿ ಮೋದಿಯವರಿಗೆ ಮನವಿ ಮಾಡಬೇಕು ಎಂದು ಸಲಹೆ ನೀಡಿದ್ದೆ. ನನ್ನ ಹೇಳಿಕೆಯಿಂದ ಅನೇಕರಿಗೆ ನೋವಾಗಿದೆ ಎಂದು ಕಂಗನಾ ರಣಾವತ್ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಕೃಷಿ ಕಾನೂನನ್ನು ಪ್ರಸ್ತಾಪಿಸಿದಾಗ, ನಮ್ಮಲ್ಲಿ ಅನೇಕರು ಅದನ್ನು ಬೆಂಬಲಿಸಿದರು. ಆದರೆ ನಮ್ಮ ಪ್ರಧಾನಿ ಅದನ್ನು ಬಹಳ ಸೂಕ್ಷ್ಮತೆ ಮತ್ತು ಸಹಾನುಭೂತಿಯಿಂದ ಹಿಂತೆಗೆದುಕೊಂಡರು.ಅವರ ಮಾತಿನ ಘನತೆಯನ್ನು ಗೌರವಿಸುವುದು ನಮ್ಮೆಲ್ಲ ಕಾರ್ಮಿಕರ ಕರ್ತವ್ಯವಾಗಿದೆ. ಇದನ್ನು ನಾನು ಸಹ ನೆನಪಿನಲ್ಲಿಟ್ಟುಕೊಳ್ಳಬೇಕು. ನಾನು ಕಲಾವಿದೆಯಲ್ಲ. ನಾನು ಬಿಜೆಪಿ ಕಾರ್ಯಕರ್ತೆ. ನನ್ನ ಅಭಿಪ್ರಾಯಗಳು ನನ್ನದೇ ಆಗುವ ಬದಲು ಪಕ್ಷದ ನಿಲುವಾಗಬೇಕು. ಹಾಗಾಗಿ ನನ್ನ ಮಾತುಗಳು ಮತ್ತು ನನ್ನ ಚಿಂತನೆಯಿಂದ ನಾನು ಯಾರನ್ನಾದರೂ ನೋಯಿಸಿದ್ದರೆ ನಾನು ಕ್ಷಮೆಯಾಚಿಸುತ್ತೇನೆ. ನನ್ನ ಮಾತನ್ನು ನಾನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ ಎಂದು ಬಿಜೆಪಿ ಮಂಡಿ ಸಂಸದರು ಹೇಳಿದ್ದಾರೆ.

ನಟ-ರಾಜಕಾರಣಿಯ ಹೇಳಿಕೆಗಳು ಪ್ರತಿಪಕ್ಷಗಳನ್ನು ಕೆರಳಿಸಿದ್ದರಿಂದ, ಪಕ್ಷದ ಪರವಾಗಿ ಇಂತಹ ಹೇಳಿಕೆಗಳನ್ನು ನೀಡಲು ಕಂಗನಾ ರಣಾವತ್ ಅವರಿಗೆ “ಅಧಿಕಾರವಿಲ್ಲ” ಎಂದು ಹೇಳುವ ಮೂಲಕ ಬಿಜೆಪಿ ಆಕೆಯಿಂದ ಅಂತರ ಕಾಪಾಡಿತ್ತು.

ವಿಡಿಯೊ ಸಂದೇಶದಲ್ಲಿ ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಅವರು, ಹೇಳಿಕೆಗಳು ಕಂಗನಾಳ ವೈಯಕ್ತಿಕ ಹೇಳಿಕೆಯಾಗಿದೆ. ಇದು ಕೃಷಿ ಮಸೂದೆಗಳ ಬಗ್ಗೆ ಪಕ್ಷದ ದೃಷ್ಟಿಕೋನವನ್ನು ಬಿಂಬಿಸುವುದಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಹಿಂಪಡೆದಿರುವ ಕೃಷಿ ಮಸೂದೆಗಳ ಕುರಿತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಹೇಳಿಕೆ ಆಕೆಯ ವೈಯಕ್ತಿಕ ಹೇಳಿಕೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಬಿಜೆಪಿ ಪರವಾಗಿ ಇಂತಹ ಹೇಳಿಕೆ ನೀಡಲು ಕಂಗನಾ ರಣಾವತ್ ಅವರಿಗೆ ಅಧಿಕಾರವಿಲ್ಲ. ಇದು ಕೃಷಿ ಮಸೂದೆಗಳ ಬಗ್ಗೆ ಬಿಜೆಪಿಯ ದೃಷ್ಟಿಕೋನವನ್ನು ಬಿಂಬಿಸುವುದಿಲ್ಲ. ಈ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ ಎಂದು ಗೌರವ್ ಭಾಟಿಯಾ ಹೇಳಿದ್ದಾರೆ.

ಬಿಜೆಪಿ ವಕ್ತಾರರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಂಗನಾ ರಣಾವತ್, ಇದು ತನ್ನ ವೈಯಕ್ತಿಕ ಅಭಿಪ್ರಾಯ ಎಂದು ಒಪ್ಪಿಕೊಂಡಿದ್ದಾರೆ. ಕೃಷಿ ಕಾನೂನುಗಳ ಬಗ್ಗೆ ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿವೆ. ನನ್ನ ಹೇಳಿಕೆಗಳು ಮಸೂದೆಗಳಲ್ಲಿ ಪಕ್ಷದ ನಿಲುವನ್ನು ಪ್ರತಿನಿಧಿಸುವುದಿಲ್ಲ. ಧನ್ಯವಾದಗಳು, ”ಎಂದು ಕಂಗನಾ ರಣಾವತ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಬರೆದಿದ್ದಾರೆ.

ಕಂಗನಾ ರಣಾವತ್ ಹೇಳಿದ್ದೇನು?

ಮಂಗಳವಾರ ಮಂಡಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಟ-ರಾಜಕಾರಣಿ, ಮೂರು ಕೃಷಿ ಕಾನೂನುಗಳು ಕೆಲವು ರಾಜ್ಯಗಳಲ್ಲಿ ಮಾತ್ರ ಪ್ರತಿಭಟನೆಗಳನ್ನು ಎದುರಿಸುತ್ತಿವೆ.

ಇದನ್ನೂ ಓದಿ: Rahul Gandhi’s Citizenship: ರಾಹುಲ್ ಗಾಂಧಿ ಪೌರತ್ವ ಬಗ್ಗೆ ಸಿಬಿಐ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟ್

“ಭಾರತದ ಪ್ರಗತಿಯಲ್ಲಿ ರೈತರು ಶಕ್ತಿಯ ಆಧಾರ ಸ್ತಂಭವಾಗಿದ್ದಾರೆ. ಕೆಲವು ರಾಜ್ಯಗಳಲ್ಲಿ ಮಾತ್ರ ಅವರು ಕೃಷಿ ಕಾನೂನುಗಳನ್ನು ವಿರೋಧಿಸಿದ್ದಾರೆ. ರೈತರ ಹಿತದೃಷ್ಟಿಯಿಂದ ಕೃಷಿ ಕಾನೂನುಗಳನ್ನು ಮರಳಿ ತರಬೇಕು ಎಂದು ನಾನು ಕೈ ಜೋಡಿಸಿ ಮನವಿ ಮಾಡುತ್ತೇನೆ”. ದೇಶವು ಪ್ರಗತಿಯ ಹಾದಿಯಲ್ಲಿದೆ ಮತ್ತು ಕೃಷಿ ಕಾನೂನುಗಳನ್ನು ಮರುಸ್ಥಾಪಿಸುವುದು ಉತ್ತಮ ಆರ್ಥಿಕ ಸ್ಥಿರತೆ ಮತ್ತು ರೈತರಿಗೆ ಬೆಳವಣಿಗೆಯನ್ನು ಖಚಿತಪಡಿಸುತ್ತದೆ, ಅಂತಿಮವಾಗಿ ಕೃಷಿ ಕ್ಷೇತ್ರಕ್ಕೆ ಪ್ರಯೋಜನವನ್ನು ನೀಡುತ್ತದೆ.”ಈ ಹೇಳಿಕೆಯು ವಿವಾದಾತ್ಮಕವಾಗಬಹುದು ಎಂದು ನನಗೆ ತಿಳಿದಿದೆ, ಆದರೆ ಮೂರು ಕೃಷಿ ಕಾನೂನುಗಳನ್ನು ಮರಳಿ ತರಬೇಕು. ರೈತರೇ ಒತ್ತಾಯಿಸಬೇಕು’ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ