Kangana Ranaut: ಪಕ್ಷದ ನೀತಿ ಬಗ್ಗೆ ಮಾತನಾಡಲು ಕಂಗನಾ ರಣಾವತ್‌ಗೆ ಅಧಿಕಾರವಿಲ್ಲ; ಬಿಜೆಪಿ ಎಚ್ಚರಿಕೆ

|

Updated on: Aug 26, 2024 | 7:34 PM

ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ. ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ರೈತರ ಪ್ರತಿಭಟನೆಯು ಬಾಂಗ್ಲಾದೇಶದಂತಹ ಬಿಕ್ಕಟ್ಟಿನ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ. ಈ ಹೇಳಿಕೆಯ ಬಳಿಕ ಬಿಜೆಪಿ ಕಂಗನಾ ರಣಾವತ್ ಅವರಿಂದ ಅಂತರ ಕಾಯ್ದುಕೊಂಡಿದೆ.

Kangana Ranaut: ಪಕ್ಷದ ನೀತಿ ಬಗ್ಗೆ ಮಾತನಾಡಲು ಕಂಗನಾ ರಣಾವತ್‌ಗೆ ಅಧಿಕಾರವಿಲ್ಲ; ಬಿಜೆಪಿ ಎಚ್ಚರಿಕೆ
ಕಂಗನಾ ರಣಾವತ್
Follow us on

ನವದೆಹಲಿ: ರೈತರ ಪ್ರತಿಭಟನೆ ಕುರಿತು ಕಂಗನಾ ರಣಾವತ್ ಅವರ ಹೇಳಿಕೆಗೆ ಅಸಮ್ಮತಿ ವ್ಯಕ್ತಪಡಿಸಿರುವ ಭಾರತೀಯ ಜನತಾ ಪಕ್ಷವು, ಭವಿಷ್ಯದಲ್ಲಿ ಇಂತಹ ಹೇಳಿಕೆಗಳನ್ನು ನೀಡದಂತೆ ಮಂಡಿಯ ಲೋಕಸಭಾ ಸಂಸದೆ ಕಂಗನಾಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದೆ. ರೈತರ ಚಳವಳಿಯ ಸಂದರ್ಭದಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್ ನೀಡಿರುವ ಹೇಳಿಕೆ ಪಕ್ಷದ ಅಭಿಪ್ರಾಯವಲ್ಲ. ಕಂಗನಾ ರಣಾವತ್ ಹೇಳಿಕೆಗೆ ಭಾರತೀಯ ಜನತಾ ಪಕ್ಷವು ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸುತ್ತದೆ ಎಂದು ಬಿಜೆಪಿ ಹೇಳಿದೆ.

ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ರೈತರ ಪ್ರತಿಭಟನೆಗಳು ಬಾಂಗ್ಲಾದೇಶದಂತಹ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ನೀಡಿರುವ ಹೇಳಿಕೆಯಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ದೂರ ಉಳಿದಿದೆ. ಭವಿಷ್ಯದಲ್ಲಿ ಇಂತಹ ಹೇಳಿಕೆಗಳನ್ನು ನೀಡದಂತೆ ಬಾಲಿವುಡ್ ನಟಿ-ರಾಜಕಾರಣಿ ಕಂಗನಾಗೆ ಪಕ್ಷವು ಸೂಚನೆ ನೀಡಿದೆ.


ಇದನ್ನೂ ಓದಿ: ರಾಹುಲ್​ ಗಾಂಧಿಯ ತಿರುಚಿದ ಫೋಟೋ ಹಂಚಿಕೊಂಡ ಕಂಗನಾ ಮೇಲೆ 40 ಕೋಟಿ ರೂ. ಮಾನನಷ್ಟ ಕೇಸ್

ತಮ್ಮ ಪಕ್ಷದ ನೀತಿಗಳ ಬಗ್ಗೆ ಮಾತನಾಡಲು ನಟಿ ಕಂಗನಾ ರಣಾವತ್ ಅವರಿಗೆ ಅನುಮತಿ ಇಲ್ಲ ಅಥವಾ ಅಧಿಕಾರ ಇಲ್ಲ ಎಂದು ಬಿಜೆಪಿ ನೋಟಿಸ್ ನೀಡಿದೆ. ಭವಿಷ್ಯದಲ್ಲಿ ಇಂತಹ ಹೇಳಿಕೆಗಳನ್ನು ನೀಡದಂತೆ ಕಂಗನಾಗೆ ಬಿಜೆಪಿ ಸೂಚಿಸಿದೆ. ಬಿಜೆಪಿ “ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್” (ಎಲ್ಲರನ್ನು ಒಳಗೊಂಡ ಅಭಿವೃದ್ಧಿ) ಮತ್ತು ಸಾಮಾಜಿಕ ಸಾಮರಸ್ಯದ ತತ್ವಗಳಿಗೆ ತನ್ನ ಬದ್ಧತೆಯನ್ನು ಪುನರುಚ್ಚರಿಸಿದೆ.


ಮಂಡಿ ಸಂಸದೆ ಕಂಗನಾ ರಣಾವತ್ ಎಕ್ಸ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಈಗ ರದ್ದಾದ 3 ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಸಂದರ್ಭದಲ್ಲಿ “ರೈತರ ಹೆಸರಿಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಶವಗಳು ನೇತಾಡುತ್ತಿವೆ ಮತ್ತು ಅತ್ಯಾಚಾರಗಳು ನಡೆಯುತ್ತಿವೆ” ಎಂದು ಕಂಗನಾ ಆರೋಪಿಸಿದ್ದಾರೆ. ರೈತರ ಚಳವಳಿಯ ಕುರಿತು ಬಿಜೆಪಿ ಸಂಸದೆ ಕಂಗನಾ ರಣಾವತ್ ನೀಡಿರುವ ಹೇಳಿಕೆ ಪಕ್ಷದ ಅಭಿಪ್ರಾಯವಲ್ಲ, ಅದು ಆಕೆಯ ವೈಯಕ್ತಿಕ ಅಭಿಪ್ರಾಯ. ಕಂಗನಾ ರಣಾವತ್ ನೀಡಿರುವ ಈ ಹೇಳಿಕೆಗೆ ಭಾರತೀಯ ಜನತಾ ಪಕ್ಷವು ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸುತ್ತದೆ ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ‘ಟೀಕೆಗೆಳಿಗೆ ತಕ್ಕ ಉತ್ತರ ಕೊಟ್ಟರು’; ಇಂದಿರಾ ಗಾಂಧಿ ಬಗ್ಗೆ ಮೆಚ್ಚುಗೆ ಸೂಚಿಸಿದ ಕಂಗನಾ ರಣಾವತ್

ಇನ್ನೊಂದೆಡೆ, ಕಂಗನಾ ರಣಾವತ್ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿದೇಶಿ ಶಕ್ತಿಗಳು ನಮ್ಮ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿವೆ ಎಂದು ಮೋದಿ ಸರ್ಕಾರಕ್ಕೆ ಅನಿಸಿದರೆ, ಇದನ್ನು ಪರಿಹರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ? ಎಂದು ಸುಪ್ರಿಯಾ ಪ್ರಶ್ನಿಸಿದ್ದಾರೆ. ಬಿಜೆಪಿ ನಾಯಕರು ರೈತರ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸುತ್ತಿದ್ದಾರೆ ಎಂದು ಟೀಕಿಸಿದ ಅವರು ಕಂಗನಾ ಅವರ ಹೇಳಿಕೆಗಳನ್ನು ಖಂಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ