ವೇತನ ಸಹಿತ ಮುಟ್ಟಿನ ರಜೆ: ಸ್ಮೃತಿ ಇರಾನಿ ಹೇಳಿಕೆ ಬೆಂಬಲಿಸಿದ ನಟಿ ಕಂಗನಾ

ಮುಟ್ಟು ಎಂಬುದು ಹೆಣ್ಣಿನ ದೇಹದಲ್ಲಾಗುವ ಸಹಜ ಪ್ರಕ್ರಿಯೆ ಅದೊಂದು ರೋಗವಲ್ಲ ಹೀಗಾಗಿ ಹೆಣ್ಣುಮಕ್ಕಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಅಗತ್ಯವಿಲ್ಲ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್(Kangana Ranaut) ಹೇಳಿದ್ದಾರೆ. ನಿನ್ನೆಯಷ್ಟೇ ಈ ಕುರಿತು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಮಾತನಾಡಿ, ಮುಟ್ಟು ಎಂಬುದು ಅಂಗವೈಕಲ್ಯವಲ್ಲ ಸಹಜ ಪ್ರಕ್ರಿಯೆ ಹೀಗಾಗಿ ವೇತನ ಸಹಿತ ಮುಟ್ಟಿನ ರಜೆ ನೀಡುವ ಪ್ರಸ್ತಾಪವೇ ಇಲ್ಲ ಎಂದಿದ್ದರು.

ವೇತನ ಸಹಿತ ಮುಟ್ಟಿನ ರಜೆ: ಸ್ಮೃತಿ ಇರಾನಿ ಹೇಳಿಕೆ ಬೆಂಬಲಿಸಿದ ನಟಿ ಕಂಗನಾ
ಸ್ಮೃತಿ ಇರಾನಿ-ಕಂಗನಾImage Credit source: ABP Live
Follow us
ನಯನಾ ರಾಜೀವ್
|

Updated on: Dec 15, 2023 | 12:27 PM

ಮುಟ್ಟು(Menstruation) ಎಂಬುದು ಹೆಣ್ಣಿನ ದೇಹದಲ್ಲಾಗುವ ಸಹಜ ಪ್ರಕ್ರಿಯೆ ಅದೊಂದು ರೋಗವಲ್ಲ ಹೀಗಾಗಿ ಹೆಣ್ಣುಮಕ್ಕಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಅಗತ್ಯವಿಲ್ಲ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್(Kangana Ranaut) ಹೇಳಿದ್ದಾರೆ. ನಿನ್ನೆಯಷ್ಟೇ ಈ ಕುರಿತು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಮಾತನಾಡಿ, ಮುಟ್ಟು ಎಂಬುದು ಅಂಗವೈಕಲ್ಯವಲ್ಲ ಸಹಜ ಪ್ರಕ್ರಿಯೆ ಹೀಗಾಗಿ ವೇತನ ಸಹಿತ ಮುಟ್ಟಿನ ರಜೆ ನೀಡುವ ಪ್ರಸ್ತಾಪವೇ ಇಲ್ಲ ಎಂದಿದ್ದರು.

ಇದೀಗ ಕಂಗನಾ ಕೂಡ ಸ್ಮೃತಿ ಇರಾನಿ ಹೇಳಿಕೆಗೆ ದನಿಗೂಡಿಸಿದ್ದಾರೆ. ಕಂಗನಾ ಯಾವಾಗಲೂ ತನ್ನ ನಿಲುವು, ಅಭಿಪ್ರಾಯವನ್ನು ಹೇಳಲು ಹಿಂಜರಿಯುವುದಿಲ್ಲ. ಮಾನವ ಇತಿಹಾಸದಲ್ಲಿ ಕೆಲಸ ಮಾಡದ ಮಹಿಳೆ ಇಲ್ಲ, ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವುದರಿಂದ ಹಿಡಿದು ಮನೆಯನ್ನು, ಮಕ್ಕಳನ್ನು ನೋಡಿಕೊಳ್ಳುವವರೆಗೆ ಎಲ್ಲವನ್ನೂ ಆಕೆ ಮಾಡುತ್ತಾಳೆ ಎಂದಿದ್ದಾರೆ.

ಸ್ಮೃತಿ ಇರಾನಿ ಸದನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ಮಹಿಳೆಗೆ ಮುಟ್ಟು ಎಂಬುದು ಎಂದೂ ಕೆಲಸಕ್ಕೆ ಅಡ್ಡಿ ಮಾಡಿಲ್ಲ. ಅದು ಆಕೆಯ ಜೀವನ ಪಯಣದ ಒಂದು ಭಾಗವಾಗಿರುತ್ತದೆ. ದುಡಿಯುವ ಮಹಿಳೆ ಮುಟ್ಟಿನ ಹೆಸರಿನಲ್ಲಿ ರಜೆ ಹಾಕುವುದು ಅರ್ಥಹೀನ, ಇದೀಗ ಮಹಿಳೆಗೂ ಸಮಾನ ಹಕ್ಕು ಬೇಕೆಂದು ಹೋರಾಟ ನಡೆಯುತ್ತಿರುವ ಸಮಯದಲ್ಲಿ ಈ ರಜೆಯು ತಾರತಮ್ಯಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಮುಟ್ಟು ಎಂಬುದು ಅಂಗವೈಕಲ್ಯವಲ್ಲ, ಹೆಣ್ಣುಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ: ಸ್ಮೃತಿ ಇರಾನಿ

ಋತುಚಕ್ರವು ಮಹಿಳೆಯರ ಕೆಲಸಕ್ಕೆ ಎಂದೂ ಅಡ್ಡಿಯಾಗುವುದಿಲ್ಲ, ಅದು ಅಂಗವೈಕಲ್ಯವಲ್ಲ, ಇದು ಮಹಿಳೆಯರ ಜೀವನದ ಒಂದು ಭಾಗ ಹಾಗೂ ಸಹಜ ಪ್ರಕ್ರಿಯೆ ಎಂದು ಹೇಳಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ಸಿದ್ಧಪಡಿಸಿದೆ ಎಂದರು. 10-19 ವಯೋಮಾನದ ಬಾಲಕಿಯರಲ್ಲಿ ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸಲು ಕೇಂದ್ರವು ಈಗಾಗಲೇ ಯೋಜನೆಯನ್ನು ಜಾರಿಗೊಳಿಸುತ್ತಿದೆ ಎಂದು ಅವರು ಸದನಕ್ಕೆ ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್