ಮೋದಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ?

ದೆಹಲಿ: ಜೆ.ಎನ್.ಯು ಮಾಜಿ ವಿದ್ಯಾರ್ಥಿ ಮುಖಂಡ, ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಸರ್ಕಾರ ದಿಢೀರ್ ರದ್ದುಗೊಳಿಸಿದ್ದಕ್ಕೆ ಕನ್ಹಯ್ಯ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಅಣ್ಣನ ಮಗಳ ಪರ್ಸ ಕಳ್ಳರು ಕದ್ದಿದ್ದ ವಿಚಾರ ಪ್ರಸ್ತಾಪಿಸಿದ ಕನ್ಹಯ್ಯ ಕುಮಾರ್ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಣ್ಣನ ಮಗಳ ಪರ್ಸ ಕಳೆದ್ರೆ ಏಳು […]

ಮೋದಿ ಅಣ್ಣನ ಮಗಳ ಪರ್ಸ್ ಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ?
ಸಾಧು ಶ್ರೀನಾಥ್​

Updated on: Oct 15, 2019 | 4:44 PM

ದೆಹಲಿ: ಜೆ.ಎನ್.ಯು ಮಾಜಿ ವಿದ್ಯಾರ್ಥಿ ಮುಖಂಡ, ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಸರ್ಕಾರ ದಿಢೀರ್ ರದ್ದುಗೊಳಿಸಿದ್ದಕ್ಕೆ ಕನ್ಹಯ್ಯ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕಳೆದ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಅಣ್ಣನ ಮಗಳ ಪರ್ಸ ಕಳ್ಳರು ಕದ್ದಿದ್ದ ವಿಚಾರ ಪ್ರಸ್ತಾಪಿಸಿದ ಕನ್ಹಯ್ಯ ಕುಮಾರ್ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಣ್ಣನ ಮಗಳ ಪರ್ಸ ಕಳೆದ್ರೆ ಏಳು ನೂರು ಪೊಲೀಸರು ಶೋಧ ಮಾಡಿ ಅದನ್ನು ಹುಡುಕಿ ಕೊಟ್ಟಿದ್ದಾರೆ, ಆದ್ರೆ JNU ವಿದ್ಯಾರ್ಥಿ ನಜೀಬ್ ನಾಪತ್ತೆಯಾಗಿ ವರ್ಷಗಳೇ ಕಳೆದ್ರೂ ಹುಡುಕುವ ಕೆಲಸ ಆಗುತ್ತಿಲ್ಲ. ಆ ವಿದ್ಯಾರ್ಥಿ ತಾಯಿ ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೋದಿ ಅಣ್ಣನ ಮಗಳ ಪರ್ಸಗೆ ಇರುವ ಬೆಲೆ ವಿದ್ಯಾರ್ಥಿಯ ಜೀವಕ್ಕೆ ಇಲ್ವಾ ? ಎಂದು ತಮ್ಮ ಆಕ್ರೋಶವನ್ನು ಹೊರಹಾಕುತ್ತ ಮೋದಿ ವಿರುದ್ಧ ಮಾತನಾಡುವವರ ಮೇಲೆ ಸಿಬಿಐ ದಾಳಿ ನಡೆಸುತ್ತಾರೆ. ಆದ್ರೆ ನಾಪತ್ತೆಯಾದ ವಿದ್ಯಾರ್ಥಿ ಬಗ್ಗೆ ಸಿಬಿಐ ಏನು ಮಾಡುತ್ತಿದೆ. ನನ್ನ ವಿರುದ್ಧ ಮೋದಿ ಸಿಬಿಐ ದಾಳಿ ನಡೆಸಲಿ, ಇಡಿ , ಐಟಿ ದಾಳಿ ನಡೆಸಲಿ ಎಂದು ಹರಿಹಾಯ್ದಿದಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us