AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dubai-Amritsar Flight: ದುಬೈ-ಅಮೃತಸರ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಪ್ರಯಾಣಿಕನಿಂದ ಗಗನಸಖಿಗೆ ಕಿರುಕುಳ, ಬಂಧನ

ಇತ್ತೀಚೆಗೆ ವಿಮಾನ(Flight) ಕುಡಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ದುಬೈ-ಅಮೃತಸರ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಗಗನಸಖಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Dubai-Amritsar Flight: ದುಬೈ-ಅಮೃತಸರ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಪ್ರಯಾಣಿಕನಿಂದ ಗಗನಸಖಿಗೆ ಕಿರುಕುಳ, ಬಂಧನ
ವಿಮಾನ
ನಯನಾ ರಾಜೀವ್
|

Updated on: May 15, 2023 | 3:03 PM

Share

ಇತ್ತೀಚೆಗೆ ವಿಮಾನ(Flight) ಕುಡಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ದುಬೈ-ಅಮೃತಸರ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಗಗನಸಖಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಜಾಬ್‌ನ ಜಲಂಧರ್‌ನ ಕೋಟ್ಲಿ ಗ್ರಾಮದವರಾದ ರಾಜಿಂದರ್ ಸಿಂಗ್ ಅವರು ಗಗನಸಖಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದಿದ್ದರು ಹಾಗೆಯೇ ಅವರಿಗೆ ಕಿರುಕುಳ ನೀಡಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ.

ಈ ಘಟನೆಯನ್ನು ಗಗನಸಖಿ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ, ಆರೋಪಿಯು ಕುಡಿದ ಅಮಲಿನಲ್ಲಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಸಿಬ್ಬಂದಿ ಸದಸ್ಯರು ಅಮೃತಸರ ನಿಯಂತ್ರಣ ಕೊಠಡಿಗೆ ವಿಷಯದ ಬಗ್ಗೆ ಮಾಹಿತಿ ನೀಡಿದರು ಮತ್ತು ಏರ್‌ಲೈನ್‌ನ ಸಹಾಯಕ ಭದ್ರತಾ ವ್ಯವಸ್ಥಾಪಕರು ದೂರು ದಾಖಲಿಸಿದ್ದಾರೆ.

ಮತ್ತಷ್ಟು ಓದಿ: Indigo Airlines: ಕುಡಿದ ಮತ್ತಿನಲ್ಲಿ ವಿದೇಶಿ ಪ್ರಜೆ ಇಂಡಿಗೋ ಏರ್‌ಲೈನ್ಸ್ ಗಗನಸಖಿಗೆ ಕಿರುಕುಳ, ಸಹ ಪ್ರಯಾಣಿಕನ ಮೇಲೆ ಹಲ್ಲೆ

ಇಲ್ಲಿನ ಶ್ರೀ ಗುರು ರಾಮದಾಸ್ ಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಳಿಕ ಆರೋಪಿಯನ್ನು ಬಂಧಿಸಲಾಯಿತು ಎಂದು ಅವರು ತಿಳಿಸಿದ್ದಾರೆ. ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು ಸೆಕ್ಷನ್ 509 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ