Evening Digest | ಇಂದು ನೀವು ಮಿಸ್ ಮಾಡಿಕೊಳ್ಳದೇ ಗಮನಿಸಬೇಕಾದ 9 ಪ್ರಮುಖ ಸುದ್ದಿ, ಬೆಳವಣಿಗೆಗಳಿವು

Kannada News Today: ದಿನವಿಡೀ ಹರಿದುಬರುವ ಸುದ್ದಿ ಪ್ರವಾಹದಲ್ಲಿ ಅತಿಮುಖ್ಯ ಸುದ್ದಿ / ಬೆಳವಣಿಗೆ ನಿಮ್ಮ ಕಣ್ತಪ್ಪಬಾರದು. ಹೀಗಾಗಿಯೇ 9 ಪ್ರಮುಖ ಸುದ್ದಿಗಳನ್ನು ನಿಮ್ಮ ಮುಂದಿಡುವ ಪ್ರಯತ್ನ ಟಿವಿ9 ಡಿಜಿಟಲ್ ತಂಡ ಮಾಡಿದೆ.

Evening Digest | ಇಂದು ನೀವು ಮಿಸ್ ಮಾಡಿಕೊಳ್ಳದೇ ಗಮನಿಸಬೇಕಾದ 9 ಪ್ರಮುಖ ಸುದ್ದಿ, ಬೆಳವಣಿಗೆಗಳಿವು
ಪಂಚಮಸಾಲಿ ಸಮಾವೇಶದ ವೇದಿಕೆಯಲ್ಲಿ ನಾಯಕರು.
Follow us
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 21, 2021 | 8:57 PM

ಇಂದು ನೀವು ಮಿಸ್ ಮಾಡಿಕೊಳ್ಳದೇ ಗಮನಿಸಬೇಕಾದ 9 ಪ್ರಮುಖ ಸುದ್ದಿ / ಬೆಳವಣಿಗೆಗಳ ಮಾಹಿತಿ ಇಲ್ಲಿದೆ. ದೇಶ-ವಿದೇಶಗಳಿಂದ ನಾಲ್ಕು ದಿಕ್ಕಿನಿಂದ ಸಾವಿರಾರು ಸುದ್ದಿ ಹರಿದಾಡುತ್ತಿರುತ್ತವೆ. ಕ್ಷಣಾರ್ಧದಲ್ಲಿ ಬಹುತೇಕ ಸುದ್ದಿಗಳನ್ನು ನಿಮಗೆ ತಲುಪಿಸುವ ಕಾರ್ಯ ಟಿವಿ9 ವೆಬ್​ಸೈಟ್​​ ಮಾಡುತ್ತಿದೆ. ದಿನವಿಡೀ ಹರಿದುಬರುವ ಸುದ್ದಿ ಪ್ರವಾಹದಲ್ಲಿ ಅತಿಮುಖ್ಯ ಸುದ್ದಿ / ಬೆಳವಣಿಗೆ ನಿಮ್ಮ ಕಣ್ತಪ್ಪಬಾರದು. ಹೀಗಾಗಿಯೇ 9 ಪ್ರಮುಖ ಸುದ್ದಿಗಳನ್ನು ನಿಮ್ಮ ಮುಂದಿಡುವ ಪ್ರಯತ್ನ ಟಿವಿ9 ಡಿಜಿಟಲ್ ತಂಡ ಮಾಡಿದೆ.

1) ಮಾರ್ಚ್ 4ರವರೆಗೆ ನಿರಂತರ ಧರಣಿ: ಜಯಮೃತ್ಯುಂಜಯಶ್ರೀ ಸ್ವಾಮೀಜಿ ಬೆಂಗಳೂರಿನಲ್ಲಿ ಇಂದು ಮೀಸಲಾತಿಗೆ ಒತ್ತಾಯಿಸಿ ನಡೆದ ಪಂಚಮಸಾಲಿ ಸಮುದಾಯದ ಸಮಾವೇಶದಲ್ಲಿ ಹೋರಾಟವನ್ನು ಮುಂದುವರೆಸುವ ಮಾತುಗಳು ಕೇಳಿಬಂದವು. ಸಮಾವೇಶದ ನಂತರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟವರನ್ನು ಪೊಲೀಸರು ತಡೆದದ್ದನ್ನು ಹೋರಾಟಗಾರರು ಆಕ್ಷೇಪಿಸಿದರು. Link: ಬೇಡಿಕೆಗೆ ಸ್ಪಂದಿಸದಿದ್ರೆ ಅಮರಣಾಂತ ಸತ್ಯಾಗ್ರಹ

2) ಆಸ್ಟ್ರೇಲಿಯಾ ಓಪನ್ ಫೈನಲ್‌ನಲ್ಲಿ ಜೊಕೊವಿಕ್ ವಿಜಯ ವಿಶ್ವದ ನಂಬರ್ ಒನ್ ಟೆನ್ನಿಸ್​ ಆಟಗಾರ ನೊವಾಕ್ ಜೊಕೊವಿಕ್ ರಷ್ಯಾದ ಡೇನಿಲ್ ಮೆಡ್ವೆಡೆವ್ ಅವರನ್ನು ಸೋಲಿಸುವ ಮೂಲಕ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದರು. Link: Australian Open 2021: 9ನೇ ಬಾರಿಗೆ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿ ಗೆದ್ದ ನೊವಾಕ್ ಜೊಕೊವಿಕ್

3) ಹೋರಾಟದ ಮನೋಭಾವ ಇರುವವರನ್ನು ಕಾಂಗ್ರೆಸ್​ಗೆ ಸ್ವಾಗತಿಸಿದ ಡಿಕೆಶಿ ಹೋರಾಡುವ ಸಾಮರ್ಥ್ಯವಿರುವ ಪ್ರಮುಖರನ್ನು ಗುರುತಿಸಿ ಟಿಕೆಟ್ ನೀಡುತ್ತೇವೆ. ಪಕ್ಷ ಬಿಟ್ಟು ಹೋದವರಿಗೂ ಮತ್ತೆ ಸೇರ್ಪಡೆಗೆ ಅವಕಾಶ ನೀಡುತ್ತೇವೆ. ಕಾಂಗ್ರೆಸ್ ಪಕ್ಷ ಸೇರಬಯಸುವ ಇತರರಿಗೂ ಮುಕ್ತ ಆಹ್ವಾನ ಎಂದು ಕೆಪಿಸಿಸಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. Link: ಕಾಂಗ್ರೆಸ್​ ಸೇರಲು ಆಹ್ವಾನ ನೀಡಿದ ಕೆಪಿಸಿಸಿ ಅಧ್ಯಕ್ಷ

4) ಖಾಸಗಿ ಕ್ಷೇತ್ರದ ಮಹತ್ವ ತಿಳಿಸಿದ ನಿರ್ಮಲಾ ಸೀತಾರಾಮನ್ ಬೆಂಗಳೂರು ಕೈಗಾರಿಕೆ ಮತ್ತು ವಾಣಿಜ್ಯ ಒಕ್ಕೂಟ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಹಣಕಾಸು  ನಿರ್ಮಲಾ ಸೀತಾರಾಮನ್ ದೇಶದ ಪ್ರಗತಿಯಲ್ಲಿ ಖಾಸಗಿ ಕ್ಷೇತ್ರದ ಮಹತ್ವದ ಬಗ್ಗೆ ವಿವರಿಸಿದರು. Link: ಭಾರತದ ಆಕಾಂಕ್ಷೆಯ ಭಾಗವಾಗಬೇಕು ಖಾಸಗಿ ಕ್ಷೇತ್ರ

5) ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಹೇಳನ: ಆರೋಪ ಪೊಗರು ಚಿತ್ರದ ನಿರ್ದೇಶಕ, ನಿರ್ಮಾಪಕರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ವಾಣಿಜ್ಯ ಮಂಡಳಿಗೆ ದೂರು ನೀಡಲಾಗುವುದು ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಚ್ಚಿದಾನಂದ‌ಮೂರ್ತಿ ಹೇಳಿದ್ದಾರೆ. Link: ಬ್ರಾಹ್ಮಣರನ್ನು ಅವಹೇಳನ ಮಾಡಲಾಗಿದೆ ಎಂದ ಸಚ್ಚಿದಾನಂದ‌ಮೂರ್ತಿ

6) ಪಿಎಚ್​ಡಿ ಮಾಡಿದ ದಂಪತಿಗಳ ಟೀ ವ್ಯಾಪಾರ ಓದಿಗೆ ತಕ್ಕ ಕೆಲಸ ಬೇಕು ಎಂದು ಅಹಂ ಪಡದೇ ಸಂಸಾರದ ನೌಕೆ ಸಾಗಿಸುವುದಕ್ಕೆ ಕಳೆದ ಎಂಟು ವರ್ಷಗಳ ಹಿಂದೆ ಟೀ ವ್ಯಾಪಾರ ಆರಂಭಿಸಿದ್ದಾರೆ ಈ ದಂಪತಿ. Link: ಪಿಎಚ್​ಡಿ ಪದವೀಧರರ ‘ಆಮ್ ಆದ್ಮಿ ಟೀ ಟೈಂ’

7) ನೊಟೀಸ್ ಕೊಟ್ರೆ ನನ್ನ ಬಾಯಿ ಬಂದ್ ಆಗಲ್ಲ ನೊಟೀಸ್ ಕೊಟ್ಟರೆ ಅಂಜುವ ಮಗ ಅಲ್ಲ. 3B ಮೀಸಲಾತಿ ಎಲ್ಲಾ ಲಿಂಗಾಯತರಿಗೆ ಕೊಟ್ಟಿದ್ದಾರೆ. 2A ಮೀಸಲಾತಿ  ಬಗ್ಗೆ ಮಾತಾಡಲಿ. Link: ಮೀಸಲಾತಿ ಪಡೆದೇ ಹೋಗುತ್ತೇವೆ: ಬಸನಗೌಡ ಪಾಟೀಲ ಯತ್ನಾಳ್

8) ಅವಿತಕವಿತೆಯಲ್ಲಿ ಕಮಲಾಕರ ಕಡವೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬರವಣಿಗೆ, ಅನುವಾದದಲ್ಲಿ ತೊಡಗಿಕೊಂಡಿರುವ ಕಮಲಾಕರ ಕಡವೆ ಅವರ ಎರಡು ಕವಿತೆಗಳನ್ನು ಇಲ್ಲಿ ಆಸ್ವಾದಿಸಿ. Link: ಅವರದೇ ಎದೆಯೊಳಗಿನ ಹಕ್ಕಿಯೊಂದು ಸೊರಗತೊಡಗಿತು

9) ಮದುವೆಗೆ ಪೆಟ್ರೋಲ್ ಬಾಟಲಿ ಗಿಫ್ಟ್ ಮೈಸೂರಿನಲ್ಲಿ ನಡೆದ ಮದುವೆಯಲ್ಲಿ ನಗರಪಾಲಿಕೆ ಸದಸ್ಯೆಯೊಬ್ಬರು ನವ ಜೋಡಿಗೆ ಉಡುಗೊರೆಯಾಗಿ 5 ಲೀಟರ್​ ಪೆಟ್ರೋಲ್​  ನೀಡಿ ಶುಭ ಹಾರೈಸಿದ್ದಾರೆ. Link: ನವ ದಂಪತಿಗೆ ಪೆಟ್ರೋಲ್ ಗಿಫ್ಟ್ ನೀಡಿದ ಮಹಾನಗರ ಪಾಲಿಕೆ ಸದಸ್ಯೆ

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ https://tv9kannada.com ನೋಡುತ್ತಿರಿ.

Published On - 7:06 pm, Sun, 21 February 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್