Jammu and Kashmir: ಗಡಿ ನಿಯಂತ್ರಣ ರೇಖೆ ಬಳಿ ಅಕ್ರಮವಾಗಿ ಒಳನುಸುಳಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿದ ಅಪರಿಚಿತ ಮಹಿಳೆಯನ್ನು ಭದ್ರತಾ ಪಡೆಗಳು ಸೋಮವಾರ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

Jammu and Kashmir: ಗಡಿ ನಿಯಂತ್ರಣ ರೇಖೆ ಬಳಿ ಅಕ್ರಮವಾಗಿ ಒಳನುಸುಳಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ
ಭದ್ರತಾ ಪಡೆ
Image Credit source: India TV

Updated on: May 16, 2023 | 9:09 AM

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿದ ಅಪರಿಚಿತ ಮಹಿಳೆಯನ್ನು ಭದ್ರತಾ ಪಡೆಗಳು  ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮಹಿಳೆ ಪಾಕ್ ಆಕ್ರಮಿತ ಕಾಶ್ಮೀರದಿಂದ ಬಂದವರಾಗಿದ್ದರು ಎಂದು ನಂಬಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಮಲ್‌ಕೋಟೆ ಪ್ರದೇಶದಲ್ಲಿ ಎಲ್‌ಒಸಿ ದಾಟಿ ಗಡಿ ಬೇಲಿಯ ಸಮೀಪ ಬರುತ್ತಿದ್ದಾಗ ಸೈನಿಕರು ಆಕೆಯನ್ನು ಪ್ರಶ್ನೆ ಮಾಡಿದ್ದರು, ಆದರೆ ಆಕೆ ಯಾವುದೇ ಉತ್ತರವನ್ನು ನೀಡಿಲ್ಲ, ಮುಂದೆ ಸಾಗುತ್ತಲೇ ಇದ್ದಳು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಂತರ ಪಡೆಗಳು ಮಹಿಳೆಯ ಮೇಲೆ ಗುಂಡು ಹಾರಿಸಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Pakistani Intruder: ಪಂಜಾಬ್​ನ ಅಮೃತಸರದಲ್ಲಿ ಪಾಕಿಸ್ತಾನಿ ಒಳನುಸುಳುಕೋರನ ಬಂಧನ

ಗಡಿಯಲ್ಲಿ ಒಳನುಸುಳುವಿಕೆ, ಮಾದಕ ವಸ್ತುಗಳು, ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಹಾಗೂ ಡ್ರೋನ್​ಗಳ ಬೆದರಿಕೆಯನ್ನು ತಡೆಯುವಲ್ಲಿ ಗಡಿ ಭದ್ರತಾಪಡೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ.
ಜನವರಿಯಲ್ಲಿ ಪಂಜಾಬ್​ನ ಭಾರತ-ಪಾಕಿಸ್ತಾನದ ಗಡಿಯಲ್ಲಿ ಇಬ್ಬರು ಸಶಸ್ತ್ರ ಒಳನುಸುಳುಕೋರರನ್ನು ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us