Mamata Banerjee: 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ನಮ್ಮ ಬೆಂಬಲ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ(Mamata Banerjee) ಅವರು ತಮ್ಮ ಪಕ್ಷವು 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

Mamata Banerjee: 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ನಮ್ಮ ಬೆಂಬಲ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿImage Credit source: NDTV
Follow us
ನಯನಾ ರಾಜೀವ್
|

Updated on: May 16, 2023 | 7:41 AM

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ(Mamata Banerjee) ಅವರು ತಮ್ಮ ಪಕ್ಷವು 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಮುಂಬರುವ ಚುನಾವಣಾ ಕದನದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟಿನ ಸಂಭಾವ್ಯ ಕಾರ್ಯತಂತ್ರದ ಕುರಿತು ತೃಣಮೂಲ ಕಾಂಗ್ರೆಸ್‌ನ ನಿಲುವಿನ ಬಗ್ಗೆ ಬ್ಯಾನರ್ಜಿ ಅವರು ಮೊದಲ ಬಾರಿಗೆ ಸ್ಪಷ್ಟಪಡಿಸಿದ್ದಾರೆ. ನಾನು ಮಾಂತ್ರಿಕಳೂ ಅಲ್ಲ, ಜ್ಯೋತಿಷಿಯೂ ಅಲ್ಲ, ಭವಿಷ್ಯದಲ್ಲಿ ಏನಾಗುತ್ತದೆ? ಇದನ್ನು ಹೇಳಲು ಸಾಧ್ಯವಿಲ್ಲ ಆದರೆ ನಾನು ಒಂದು ಮಾತನ್ನು ಹೇಳಬಲ್ಲೆ, ಎಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷ ಬಲಿಷ್ಠವಾಗಿದೆಯೋ ಅಲ್ಲಿ ಬಿಜೆಪಿ ಹೋರಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಎಲ್ಲೆಲ್ಲಿ ಪ್ರಬಲವಾಗಿದೆಯೋ ಅಲ್ಲಿ ಅವರು ಹೋರಾಡಲಿ, ನಾವು ಅವರನ್ನು ಬೆಂಬಲಿಸುತ್ತೇವೆ, ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಅವರು ಇತರ ರಾಜಕೀಯ ಪಕ್ಷಗಳನ್ನೂ ಬೆಂಬಲಿಸಬೇಕಾಗುತ್ತದೆ. ಆದರೆ, ಬೆಂಬಲ ಪಡೆಯಲು ಕಾಂಗ್ರೆಸ್ ಇತರ ಪಕ್ಷಗಳ ಬೆಂಬಲವನ್ನೂ ಪಡೆಯಬೇಕಾಗುತ್ತದೆ ಎಂದು ಹೇಳಿದರು.

ಮತ್ತಷ್ಟು ಓದಿ: Salman Khan: ಮಮತಾ ಬ್ಯಾನರ್ಜಿ ಜತೆ ಕೈ ಜೋಡಿಸಿದ ಸಲ್ಮಾನ್​ ಖಾನ್​; ರಾಜಕೀಯದ ಮುನ್ಸೂಚನೆಯೇ?

ತೃಣಮೂಲ ಕಾಂಗ್ರೆಸ್ ವರಿಷ್ಠರು ಸಹ ಸೀಟು ಹಂಚಿಕೆ ಸೂತ್ರವು ಪ್ರಾದೇಶಿಕ ಪಕ್ಷಗಳು ಪ್ರಬಲವಾಗಿರುವ ಪ್ರದೇಶಗಳಲ್ಲಿ ಆದ್ಯತೆ ನೀಡಲು ನಿರ್ಧರಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಬಲ ಪ್ರಾದೇಶಿಕ ಪಕ್ಷಗಳಿಗೆ ಆದ್ಯತೆ ನೀಡಬೇಕು ಎಂದರು. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ನಂತರ ಬ್ಯಾನರ್ಜಿ ಈ ಹಿಂದೆ ಕರ್ನಾಟಕದ ಜನತೆಗೆ ಸೆಲ್ಯೂಟ್ ಹೊಡೆದಿದ್ದರು.

ಇತ್ತೀಚಿನ ವರ್ಷಗಳಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆ ನಡೆಯುತ್ತಿದೆ. ಎಲ್ಲೆಲ್ಲಿ ಯಾವುದೇ ಪ್ರಾದೇಶಿಕ ರಾಜಕೀಯ ಪಕ್ಷ ಬಲಿಷ್ಠವಾಗಿದೆಯೋ ಅಲ್ಲಿ ಬಿಜೆಪಿ ಹೋರಾಡಲು ಸಾಧ್ಯವಿಲ್ಲ ಎಂದರು.

ನಿರ್ದಿಷ್ಟ ಪ್ರದೇಶದಲ್ಲಿ ಪ್ರಬಲವಾಗಿರುವ ಪಕ್ಷಗಳು ಒಟ್ಟಾಗಿ ಹೋರಾಡಬೇಕು. ನಾನು ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಿದ್ದೇನೆ, ಆದರೆ ಬಂಗಾಳದಲ್ಲಿ ನನ್ನ ವಿರುದ್ಧ ಬರಬಾರದು ಎಂದರು. 2024 ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ಕುರಿತು ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಮಾತನಾಡಿ, ಪಶ್ಚಿಮ ಬಂಗಾಳದಲ್ಲಿ ನನ್ನನ್ನು ಬೆಂಬಲಿಸಿದರೆ ಬೇರೆ ಕಡೆಗಳಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಲು ಸಿದ್ಧ ಎಂದು ಹೇಳಿದರು.

ಎಲ್ಲೆಲ್ಲಿ ಕಾಂಗ್ರೆಸ್ ತನ್ನದೇ ಆದ 200 ಸ್ಥಾನಗಳಲ್ಲಿ ಪ್ರಬಲವಾಗಿದೆಯೋ ಅಲ್ಲಿ ಅವರು ಹೋರಾಡಲಿ, ನಾವು ಅವರನ್ನು ಬೆಂಬಲಿಸುತ್ತೇವೆ. ಆದರೆ ಅವರು ಇತರ ರಾಜಕೀಯ ಪಕ್ಷಗಳಿಗೂ ಬೆಂಬಲ ನೀಡಬೇಕು. ಒಳ್ಳೆಯದನ್ನು ಸಾಧಿಸಬೇಕಾದರೆ ಕೆಲವು ಕ್ಷೇತ್ರಗಳಲ್ಲಿ ತ್ಯಾಗ ಮಾಡಬೇಕು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್