Kannur Train Fire: ಧಗೆ ಧಗನೆ ಹೊತ್ತಿ ಉರಿದ ಆಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್​ಪ್ರೆಸ್​ ರೈಲು

ಕೇರಳದ ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಭಾರಿ ಅನಾಹುತ ಸಂಭವಿಸಿದೆ, ಆಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್​ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

Kannur Train Fire: ಧಗೆ ಧಗನೆ ಹೊತ್ತಿ ಉರಿದ ಆಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್​ಪ್ರೆಸ್​ ರೈಲು
ಬೆಂಕಿಗಾಹುತಿಯಾದ ರೈಲ್ವೆ ಬೋಗಿ

Updated on: Jun 01, 2023 | 12:11 PM

ಕೇರಳದ ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಭಾರಿ ಅನಾಹುತ ಸಂಭವಿಸಿದೆ, ಆಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್​ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಡರಾತ್ರಿ 1.25ಕ್ಕೆ ಈ ಅವಘಡ ಸಂಭವಿಸಿದೆ, ಅಪಘಾತ ಸಂಭವಿಸಿದಾಗ ರೈಲು ನಿಲ್ದಾಣದ ಮೂರನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ದಳದ ವಾಹನಗಳು ಕೂಡಲೇ ಸ್ಥಳಕ್ಕೆ ತೆರಳಿದವು. , ಮೂರು ಅಗ್ನಿಶಾಮಕ ದಳದ ತಂಡಗಳು ಬೆಂಕಿ ನಂದಿಸಲು ಗಂಟೆಗಳ ಕಾಲ ಪ್ರಯತ್ನಿಸಿದರೂ ಕೋಚ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಸ್ವಲ್ಪ ಸಮಯದ ನಂತರ ಬೆಂಕಿ ಹತೋಟಿಗೆ ತರಲಾಯಿತು.

ಆದರೆ, ಈ ಘಟನೆಯಿಂದ ಭಾರೀ ಅಹಿತಕರ ಘಟನೆ ತಪ್ಪಿದೆ. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಘಟನೆಯ ಕುರಿತು ರೈಲ್ವೇ ಇಲಾಖೆ ತನಿಖೆಗೆ ಆದೇಶಿಸಿದ್ದು, ಬೆಂಕಿಗೆ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ.

ರೈಲಿನ ಇತರ ಭಾಗಗಳಿಗೆ ಬೆಂಕಿ ಹರಡುವುದನ್ನು ತಡೆಯಲು, ಅಧಿಕಾರಿಗಳು ಇತರ ಬೋಗಿಗಳನ್ನು ಪ್ರತ್ಯೇಕಿಸಲು ನಿರ್ಧರಿಸಿದರು. ಈ ಕ್ರಮದಿಂದ ಇಡೀ ರೈಲು ಬೆಂಕಿಗೆ ಆಹುತಿಯಾಗಿಲ್ಲ. ರೈಲು ಬೆಳಗ್ಗೆ 5.10ಕ್ಕೆ ಹೊರಡಬೇಕಿತ್ತು.

ಮತ್ತಷ್ಟು ಓದಿ: BMTC ಬಸ್​​ನಲ್ಲಿ ಅಗ್ನಿ ದುರಂತ, ಮಲಗಿದ್ದ ಕಂಡಕ್ಟರ್​​ ಸಜೀವ ದಹನ, ಡ್ರೈವರ್ ಪಾರು

ಅದೇ ಸಮಯದಲ್ಲಿ, ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಘಟನೆಯ ಮೊದಲು ಅಪರಿಚಿತ ವ್ಯಕ್ತಿಯೊಬ್ಬರು ಕ್ಯಾನ್‌ನೊಂದಿಗೆ ರೈಲಿಗೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ. ಆದರೆ, ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ.

ಮಹಾರಾಷ್ಟ್ರದ ರತ್ನಗಿರಿ ರೈಲು ನಿಲ್ದಾಣದಿಂದ ಅದೇ ರೈಲಿನಲ್ಲಿ ಶಾರುಖ್ ಸೈಫಿ ಎಂಬ ವ್ಯಕ್ತಿ ಸಹ-ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಎರಡು ತಿಂಗಳ ನಂತರ ಅಲಪ್ಪುಳ-ಕಣ್ಣೂರು ಎಕ್ಸಿಕ್ಯುಟಿವ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:57 am, Thu, 1 June 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us