AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಚಕ ಮಾಂಸ ತಿನ್ನುವ ಫೋಟೋ ವೈರಲ್​: ದೇವಾಲಯದಿಂದ ಹೊರ ಎಳೆದು ಥಳಿಸಿದ ಗುಂಪು

ಉತ್ತರ ಪ್ರದೇಶದ ಕಾನ್ಪುರದಲ್ಲಿ ದೇವಾಲಯದ ಅರ್ಚಕರೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಮಾಂಸಾಹಾರ ಸೇವನೆಯ ವೈರಲ್ ಫೋಟೋದಿಂದ ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಆರೋಪಿಸಲಾಗಿದೆ. ಅರ್ಚಕರು ಇದು ಎಡಿಟ್ ಮಾಡಿದ ಫೋಟೋ, ತಮ್ಮನ್ನು ಹೊರಹಾಕುವ ಸಂಚು ಎಂದಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿ ಅರ್ಚಕರನ್ನು ರಕ್ಷಿಸಿದ್ದಾರೆ, ಈ ಘಟನೆ ಕಾನ್ಪುರದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಅರ್ಚಕ ಮಾಂಸ ತಿನ್ನುವ ಫೋಟೋ ವೈರಲ್​: ದೇವಾಲಯದಿಂದ ಹೊರ ಎಳೆದು ಥಳಿಸಿದ ಗುಂಪು
ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Mar 09, 2026 | 5:38 PM

Share

ಕಾನ್ಪುರ, ಮಾ.9: ಉತ್ತರ ಪ್ರದೇಶದ ಕಾನ್ಪುರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೇವಾಲಯದ ಅರ್ಚಕರೊಬ್ಬರನ್ನು ಜನರ ಗುಂಪು ಮನಬಂದಂತೆ ಥಳಿಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಹೋಟೆಲ್‌ವೊಂದರಲ್ಲಿ ಅರ್ಚಕರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಹಿಂಸಾಚಾರ ನಡೆದಿದೆ.

ಕಾನ್ಪುರದ ಭೂತೇಶ್ವರ ದೇವಾಲಯದ ಅರ್ಚಕ ಪ್ರಶಾಂತ್ ಗಿರಿ  ಮೇಲೆ ಸುಮಾರು 50 ರಿಂದ 60 ಜನರ ಗುಂಪೊಂದು ದಾಳಿ ನಡೆಸಿದೆ. ಅರ್ಚಕರನ್ನು ಅವರ ಕೊಠಡಿಯಿಂದ ಹೊರಗೆ ಎಳೆದುಕೊಂಡು ಬಂದು ರಸ್ತೆಯಲ್ಲಿ ಧರಧರನೆ ಎಳೆದಾಡಿ ಹಿಗ್ಗಾಮುಗ್ಗಾ ಥಳಿಸಲಾಗಿದೆ.

ಇಲ್ಲಿದೆ ನೋಡಿ ವಿಡಿಯೋ:

ಈ ವೇಳೆ ದೇವಾಲಯದಲ್ಲಿದ್ದ ಕೆಲವು ಮಹಿಳೆಯರು ಅರ್ಚಕರನ್ನು ಕಾಪಾಡಲು ಮುಂದಾದರು. ಅರ್ಚಕರ ಸುತ್ತಲೂ ಕುಳಿತು ಗುರಾಣಿಯಂತೆ ರಕ್ಷಣೆ ನೀಡಲು ಪ್ರಯತ್ನಿಸಿದರು. ಆದರೆ, ಉದ್ರಿಕ್ತ ಗುಂಪು ಅರ್ಚಕರನ್ನು ಉಳಿಸಲು ಬಂದ ಮಹಿಳೆಯರ ಮೇಲೆ ಕೂಡ ಹಲ್ಲೆ ನಡೆಸಿ, ಅವರನ್ನು ದೂಡಿ ಹಾಕಿ ಅರ್ಚಕನಿಗೆ ಹೊಡೆದಿದ್ದಾರೆ.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗುಂಪಿನಿಂದ ಅರ್ಚಕರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಶಾಲೆಯಲ್ಲಿ ಅಡುಗೆ ಮಾಡುವ ಮಹಿಳಾ ಕುಕ್​​ ಜತೆ ಹೆಡ್​​ ಮಾಸ್ಟರ್​ ಕುಚ್ ಕುಚ್: ಗ್ರಾಮಸ್ಥರಿಂದ ಬಿತ್ತು ಗೂಸ

ಗಾಯಗೊಂಡಿರುವ ಅರ್ಚಕರು ಈ ಬಗ್ಗೆ ದೂರು ನೀಡಿದ್ದು, “ತನ್ನನ್ನು ದೇವಾಲಯದಿಂದ ಹೊರಹಾಕಲು ನಡೆದ ಪಿತೂರಿ ಇದಾಗಿದೆ. ರೆಸ್ಟೋರೆಂಟ್‌ವೊಂದರಲ್ಲಿ ನಾನು ಕುಳಿತಿದ್ದ ಹಳೆಯ ಫೋಟೋವನ್ನು ಎಡಿಟ್ ಮಾಡಿ, ಅಲ್ಲಿ ಮಾಂಸಾಹಾರ ಇರುವಂತೆ ಬಿಂಬಿಸಲಾಗಿದೆ” ಎಂದು ಆರೋಪಿಸಿದ್ದಾರೆ. ಪೊಲೀಸರು ವೈರಲ್ ವಿಡಿಯೋ ಆಧರಿಸಿ ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!