AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರದಲ್ಲಿ ತರಬೇತಿ ವಿಮಾನ ಪತನಗೊಂಡು ಉಡುಪಿ ಮೂಲದ ಪೈಲಟ್ ಸೇರಿ ಇಬ್ಬರು ಸಾವು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಗುರುವಾರ ತರಬೇತಿ ವಿಮಾನ ಪತನಗೊಂಡು ಮೃತಪಟ್ಟವರಲ್ಲಿ ಕರ್ನಾಟಕದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಸಹ ಒಬ್ಬರು ಎಂಬುದು ತಿಳಿದುಬಂದಿದೆ. ಗುಜರಾತ್ ಮೂಲದ ಬೋಧಕ ಪೈಲಟ್ ಸಚಿನ್ ಭಾಟಿಯಾ ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗಂಗಾ ಬ್ಯಾರೇಜ್ ಬಳಿಯ ಹೊಲದಲ್ಲಿ ವಿಮಾನ ಪತನಗೊಂಡಿದ್ದು, ಅಪಘಾತದ ಕಾರಣ ತಿಳಿಯಬೇಕಿದೆ.

ಕಾನ್ಪುರದಲ್ಲಿ ತರಬೇತಿ ವಿಮಾನ ಪತನಗೊಂಡು ಉಡುಪಿ ಮೂಲದ ಪೈಲಟ್ ಸೇರಿ ಇಬ್ಬರು ಸಾವು
ಪತನಗೊಂಡ ವಿಮಾನದ ಅವಶೇಷಗಳುImage Credit source: PTI
ಗಣಪತಿ ಶರ್ಮಾ
|

Updated on:Aug 29, 2026 | 8:15 AM

Share

ಮುಖ್ಯಾಂಶಗಳು

  • ಕಾನ್ಪುರ ವಿಮಾನ ಪತನದಲ್ಲಿ ಕರ್ನಾಟಕದ ಪೈಲಟ್ ಸಾವು
  • ತರಬೇತಿ ವಿಮಾನ ಅಪಘಾತದಲ್ಲಿ ಇಬ್ಬರು ಮೃತ್ಯು
  • ವಿಮಾನ ಪತನದ ಕಾರಣ ಇನ್ನೂ ನಿಗೂಢ

ಕಾನ್ಪುರ, ಆಗಸ್ಟ್ 28: ಉತ್ತರ ಪ್ರದೇಶದ (Uttar Pradesh) ಕಾನ್ಪುರದಲ್ಲಿ ಗುರುವಾರ ಸಂಭವಿಸಿದ ತರಬೇತಿ ವಿಮಾನ ಅಪಘಾತದಲ್ಲಿ ಕರ್ನಾಟಕದ (Karnataka) ತರಬೇತಿ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಗಂಗಾ ನದಿ ಬಳಿಯ ನತ್ತುಪುರವಾ ಗ್ರಾಮದ ಸಮೀಪದ ಗಂಗಾ ಬ್ಯಾರೇಜ್ ಪ್ರದೇಶದಲ್ಲಿ ಡಬಲ್ ಎಂಜಿನ್ ವಿಮಾನ ಪತನಗೊಂಡಿದೆ. ಮೃತರನ್ನು ಗುಜರಾತ್ ಮೂಲದ ಬೋಧಕ ಪೈಲಟ್ ಸಚಿನ್ ಭಾಟಿಯಾ ಹಾಗೂ ಕರ್ನಾಟಕದ ಅಭಿಷೇಕ್ ಪೂಜಾರಿ ಎಂದು ಗುರುತಿಸಲಾಗಿದೆ.

ಪೊಲೀಸ್ ಆಯುಕ್ತ ರಘುಬೀರ್ ಲಾಲ್ ನೀಡಿರುವ ಮಾಹಿತಿಯಂತೆ, ವಿಮಾನವು ಬೆಳಗ್ಗೆ ಸುಮಾರು 11.30ಕ್ಕೆ ತರಬೇತಿ ಕೇಂದ್ರದಿಂದ ಹಾರಾಟ ಆರಂಭಿಸಿತ್ತು. ತರಬೇತಿ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಸುಮಾರು 20 ನಿಮಿಷಗಳ ಬಳಿಕ ವಿಮಾನ ಪತನಗೊಂಡಿದೆ. ಅಪಘಾತದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಪತನಗೊಂಡ ಅವಳಿ ಎಂಜಿನ್‌ನ ಟೆಕ್ನಮ್ ವಿಮಾನವನ್ನು 2023ರಲ್ಲಿ ತರಬೇತಿ ಉದ್ದೇಶಕ್ಕಾಗಿ ಫ್ಲೈಟ್ ಟ್ರೈನಿಂಗ್ ಶಾಲೆಗೆ ತರಲಾಗಿತ್ತು. ಬೋಧಕ ಪೈಲಟ್ ಸಚಿನ್ ಭಾಟಿಯಾ ಅವರಿಗೆ ಸುಮಾರು 3,000 ಗಂಟೆಗಳ ಹಾರಾಟದ ಅನುಭವವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನವು ಪ್ರದೇಶದ ಹೊಲವೊಂದಕ್ಕೆ ಅಪ್ಪಳಿಸಿದ್ದು, ಅದರ ಅವಶೇಷಗಳು ಸುತ್ತಮುತ್ತ ಚದುರಿಕೊಂಡಿವೆ. ವಿಮಾನ ಪತನದ ವೇಳೆ ದೊಡ್ಡ ಶಬ್ದ ಕೇಳಿಬಂದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA)ಗೆ ಮಾಹಿತಿ ನೀಡಲಾಗಿದೆ. ವಿಮಾನ ಪತನಕ್ಕೆ ಕಾರಣವೇನು ಎಂಬುದನ್ನು ತಾಂತ್ರಿಕ ತನಿಖೆಯ ಮೂಲಕ ಪತ್ತೆಹಚ್ಚಲಾಗುತ್ತದೆ ಎಂದು ಡಿಜಿಸಿಎ ತಿಳಿಸಿದೆ.

ಉಡುಪಿ ಮೂಲದ ಅಭಿಷೇಕ್ ಪೂಜಾರಿ

ಅಭಿಷೇಕ್ ಪೂಜಾರಿ ಉಡುಪಿಯ ಹಿರಿಯಡ್ಕದ ಕಣಜಾರ ಗ್ರಾಮದ ಕಡೆ ಬೆರ್ಕೆ ಮೂಲದವರು. ಸುಮಾರು ಎರಡೂವರೆ ವರ್ಷಗಳಿಂದ ಕಾನ್ಪುರದಲ್ಲಿ ತರಬೇತಿ ಪಡೆಯುತ್ತಿದ್ದರು. ಖಾಸಗಿ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು. ಅಭಿಷೇಕ್ ಅವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಮುಂಬೈ ನಿವಾಸಿಗಳು. ಅಭಿಷೇಕ್ ಆಗಾಗ ಉಡುಪಿಯ ಹಿರಿಯಡ್ಕದ ಮೂಲ ಮನೆಗೆ ಬರುತ್ತಿದ್ದರು.

ತರಬೇತಿ ವಿಮಾನ ಅಪಘಾತ: ಈ ವರ್ಷದ ಮೂರನೇ ಘಟನೆ

ಈ ವರ್ಷದ ಜೂನ್‌ನಲ್ಲಿ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ಎರಡು ಆಸನಗಳ ತರಬೇತಿ ವಿಮಾನವೊಂದು ಹೊಲಕ್ಕೆ ಪತನಗೊಂಡಿತ್ತು. ಅಲೀಗಢ ವಿಮಾನ ನಿಲ್ದಾಣದಿಂದ ತರಬೇತಿ ಹಾರಾಟಕ್ಕೆ ತೆರಳಿದ್ದ ವಿಮಾನವು ಕಾಸ್ಗಂಜ್ ಪ್ರದೇಶದಲ್ಲಿ ಪತನವಾಗುವ ಮುನ್ನ ಹೈಟೆನ್ಷನ್ ವಿದ್ಯುತ್ ತಂತಿಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಮಹಾರಾಷ್ಟ್ರ ಮೂಲದ ತರಬೇತಿ ಪೈಲಟ್ ಕೈನಾತ್ ಖಾನ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದರು. ಪ್ರಾಥಮಿಕ ತನಿಖೆಯಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಸಾಧ್ಯತೆ ವ್ಯಕ್ತವಾಗಿತ್ತು.

ಇದಕ್ಕೂ ಮೊದಲು ಮೇ 13ರಂದು ಮಹಾರಾಷ್ಟ್ರದ ಬಾರಾಮತಿಯಲ್ಲಿ ರೆಡ್‌ಬರ್ಡ್ ಫ್ಲೈಟ್ ಟ್ರೈನಿಂಗ್ ಅಕಾಡೆಮಿಗೆ ಸೇರಿದ ತರಬೇತಿ ವಿಮಾನ ಲ್ಯಾಂಡಿಂಗ್ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದು ತುರ್ತು ರೀತಿಯಲ್ಲಿ ಇಳಿದಿತ್ತು. ವಿಮಾನದಲ್ಲಿದ್ದ ತರಬೇತಿ ಪೈಲಟ್ ಸುರಕ್ಷಿತವಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Fri, 28 August 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ