ದೆಹಲಿ ಆಗಸ್ಟ್ 22: ಕೋಲ್ಕತ್ತಾ ಪ್ರಕರಣದ ಕುರಿತು ಸುಪ್ರೀಂಕೋರ್ಟ್‌ನಲ್ಲಿ (Supreme Court) ಗುರುವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಕಪಿಲ್ ಸಿಬಲ್ (Kapil Sibal)ನಕ್ಕಿದ್ದು, ಸಾಲಿಸಿಟರ್ ಜನರಲ್ (SG) ತುಷಾರ್ ಮೆಹ್ತಾ ಇದಕ್ಕೆ ಕಟು ಪ್ರತಿಕ್ರಿಯೆ ನೀಡಿದ್ದಾರೆ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಏಪ್ರಿಲ್ 9 ರಂದು ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ ಬಗ್ಗೆ ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಸಿಬಲ್ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದರೆ, ಮೆಹ್ತಾ ಅವರು ಕಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪರವಾಗಿ ಹಾಜರಾಗಿದ್ದಾರೆ.
ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್ (SCBA) ಅಧ್ಯಕ್ಷ ಸಿಬಲ್ ಮತ್ತು ಮೆಹ್ತಾ ನಡುವೆ ವಾದ ನಡೆಯುತ್ತಿರುವಾಗ ಹಿರಿಯ ವಕೀಲರು ನಕ್ಕ ಘಟನೆ ಸಂಭವಿಸಿದೆ. ಸರ್ಕಾರಿ ವಕೀಲರು ಪೊಲೀಸರಿಂದ ಎಫ್‌ಐಆರ್‌ನ ದಾಖಲಾತಿಯಲ್ಲಿನ ‘ಅಂತರ’ಗಳನ್ನು ಎತ್ತಿ ತೋರಿಸುತ್ತಿದ್ದರು. “ಆದ್ದರಿಂದ ಇದು ಜನರಲ್ ಎಂಟ್ರಿ” ಎಂದು ಮೆಹ್ತಾ ಹೇಳಿದಾಗ ಕಪಿಲ್ ಸಿಬಲ್ ನಕ್ಕಿದ್ದಾರೆ.
Complete insensitivity on display. Like Mamata Banerjee, the legal team representing WB Govt, led by former Congressman Kapil Sibal, showed no remorse, whatsoever, for having killed the young doctor twice…
Solicitor General Tushar Mehta had to remind Kapil Sibal ‘not to laugh’. pic.twitter.com/bwtJBqeSBb
— Amit Malviya (@amitmalviya) August 22, 2024
ಇದಕ್ಕೆ ಸಿಟ್ಟುಗೊಂಡ ಮೆಹ್ತಾ, ಒಂದು ಹುಡುಗಿ ತನ್ನ ಪ್ರಾಣವನ್ನು ಅತ್ಯಂತ ಅಮಾನವೀಯ ರೀತಿಯಲ್ಲಿ ಕಳೆದುಕೊಂಡಿದ್ದಾಳೆ. ಯಾರೋ ಸತ್ತಿದ್ದಾರೆ. ನಗಬೇಡಿ ಎಂದು ಹೇಳಿದ್ದಾರೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣ: ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ ಬಂಗಾಳದ ವೈದ್ಯರು
32 ಸೆಕೆಂಡ್ ಅವಧಿಯ ಕ್ಲಿಪ್ ಅನ್ನು ಹಂಚಿಕೊಂಡ ಬಿಜೆಪಿಯ ಅಮಿತ್ ಮಾಳವಿಯಾ, ಸಿಬಲ್ ಅವರ ವರ್ತನೆಯನ್ನು ತರಾಟೆಗೆ ತೆಗೆದುಕೊಂಡರು.
“ಮಾಜಿ ಕಾಂಗ್ರೆಸ್ಸಿಗ ಕಪಿಲ್ ಸಿಬಲ್ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುವ ಕಾನೂನು ತಂಡ (ಪಶ್ಚಿಮ ಬಂಗಾಳ ಸಿಎಂ) ಮಮತಾ ಬ್ಯಾನರ್ಜಿ ಅವರಂತೆ, ವೈದ್ಯೆಯನ್ನು ಎರಡು ಬಾರಿ ಕೊಂದಿದ್ದಕ್ಕಾಗಿ ಯಾವುದೇ ಪಶ್ಚಾತ್ತಾಪವನ್ನು ತೋರಿಸಲಿಲ್ಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕಪಿಲ್ ಸಿಬಲ್ ಅವರಲ್ಲಿ ನಗಬೇಡಿ ಎಂದು ನೆನಪಿಸಬೇಕಾಗಿ ಬಂತು ಎಂದು ಮಾಳವಿಯಾ ಎಕ್ಸ್ ನಲ್ಲಿ ಬರೆದಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ