Kargil Vijay Diwas ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಜನಾಥ್ ಸಿಂಗ್

| Updated By: ರಶ್ಮಿ ಕಲ್ಲಕಟ್ಟ

Updated on: Jul 26, 2022 | 3:24 PM

ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪುಷ್ಪಾರ್ಚನೆ ಮಾಡಿದ್ದಾರೆ.

Kargil Vijay Diwas  ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
Follow us on

ದೆಹಲಿ: ಕಾರ್ಗಿಲ್ ಯುದ್ಧದಲ್ಲಿ (Kargil Vijay Diwas) ಪಾಕಿಸ್ತಾನದ ವಿರುದ್ಧದ ವಿಜಯದ 23 ನೇ ವರ್ಷವನ್ನು ಭಾರತ ಮಂಗಳವಾರ ಆಚರಿಸುತ್ತಿದ್ದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) 1999 ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕಾರ್ಗಿಲ್ ಯುದ್ಧದ ಸಮಯದಲ್ಲಿ ಪ್ರಾಣ ಅರ್ಪಿಸಿದ ಸೈನಿಕರ ಶೌರ್ಯ ಮತ್ತು ತ್ಯಾಗವನ್ನು ಗೌರವಿಸಲು ಪ್ರತಿ ವರ್ಷ ಕಾರ್ಗಿಲ್ ವಿಜಯ್ ದಿವಸ್ ಅನ್ನು ಜುಲೈ 26 ರಂದು ಆಚರಿಸಲಾಗುತ್ತದೆ. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪುಷ್ಪಾರ್ಚನೆ ಮಾಡಿದ್ದಾರೆ.


ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಕಾರ್ಗಿಲ್ ವಿಜಯ್ ದಿವಸ್ ದೇಶಕ್ಕೆ ಹೆಮ್ಮೆ ಮತ್ತು ವೈಭವದ ಸಂಕೇತವಾಗಿದೆ ಎಂದು ಹೇಳಿದ ಮೋದಿ ತಮ್ಮ ಮಾತೃಭೂಮಿಗಾಗಿ ಧೈರ್ಯದಿಂದ ಹೋರಾಡಿದ ಸೈನಿಕರಿಗೆ ಗೌರವ ಸಲ್ಲಿಸಿದರು.

“ಕಾರ್ಗಿಲ್ ವಿಜಯ್ ದಿವಸ್ ಮಾ ಭಾರತಿಯ ಹೆಮ್ಮೆ ಮತ್ತು ವೈಭವದ ಸಂಕೇತವಾಗಿದೆ. ಈ ಸಂದರ್ಭದಲ್ಲಿ, ಮಾತೃಭೂಮಿಯ ರಕ್ಷಣೆಯಲ್ಲಿ ತಮ್ಮ ಶೌರ್ಯವನ್ನು ಸಾಧಿಸಿದ ದೇಶದ ಎಲ್ಲಾ ವೀರ ಪುತ್ರರಿಗೆ ನನ್ನ ವಂದನೆಗಳು. ಜೈ ಹಿಂದ್! ಎಂದು ಮೋದಿ ಟ್ವೀಟ್ ಮಾಡಿದ್ದಾರೆ.