ಅರವಿಂದ್ ಕೇಜ್ರಿವಾಲ್ ಮಾಡಿದ ‘ಕರ್ಮ’ ಇದು: ಪ್ರಣಬ್ ಮುಖರ್ಜಿ ಪುತ್ರಿ ಶರ್ಮಿಷ್ಠಾ

ಅರವಿಂದ್ ಕೇಜ್ರಿವಾಲ್ ಮತ್ತು ಅಣ್ಣಾ ಹಜಾರೆ ಗ್ಯಾಂಗ್ ಕಾಂಗ್ರೆಸ್ ಮತ್ತು ಶೀಲಾ ದೀಕ್ಷಿತ್ ಅವರ ವಿರುದ್ಧ ಅತ್ಯಂತ ಬೇಜವಾಬ್ದಾರಿ, ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಮಾಡಿದ್ದು, ಅವರ ವಿರುದ್ಧ ರಾಶಿ ರಾಶಿ ಸಾಕ್ಷ್ಯಗಳಿವೆ ಎಂದು ಹೇಳಿದ್ದರು. ಆದರೆ ಇದುವರೆಗೆ ಯಾರೂ 'ಆ ರಾಶಿಯನ್ನು' ಅನ್ನು ನೋಡಿಲ್ಲ. ಮಾಡಿದ್ದುಣ್ಣೋ ಮಾರಾಯ! ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಶರ್ಮಿಷ್ಠಾ .

ಅರವಿಂದ್ ಕೇಜ್ರಿವಾಲ್ ಮಾಡಿದ 'ಕರ್ಮ' ಇದು: ಪ್ರಣಬ್ ಮುಖರ್ಜಿ ಪುತ್ರಿ ಶರ್ಮಿಷ್ಠಾ
ಶರ್ಮಿಷ್ಠಾ ಮುಖರ್ಜಿ
Follow us
|

Updated on:Mar 22, 2024 | 1:26 PM

ದೆಹಲಿ ಮಾರ್ಚ್ 22:  ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ (Delhi excise policy case) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal )ಅವರನ್ನು ಬಂಧಿಸಿದ ನಂತರ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (Pranab Mukherjee) ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ (Sharmistha Mukherjee) ಅವರು ಶುಕ್ರವಾರ ಕೇಜ್ರಿವಾಲ್ ಮತ್ತು ಅಣ್ಣಾ ಹಜಾರೆ ಗುಂಪು ದೆಹಲಿಯ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್ ಅವರ ಬಗ್ಗೆ ‘ಬೇಜವಾಬ್ದಾರಿ, ಆಧಾರರಹಿತ ಆರೋಪಗಳನ್ನು ಮಾಡಿದ್ದರು ಎಂದಿದ್ದಾರೆ.  ಶೀಲಾ ದೀಕ್ಷಿತ್ ವಿರುದ್ಧ ಸಿಕ್ಕಾಪಟ್ಟೆ ಪುರಾವೆಗಳಿವೆ ಎಂದು ಅವರು ಹೇಳಿಕೊಂಡಿದ್ದರೂ, ಅಂತಹ ಯಾವುದೇ ಪುರಾವೆಗಳನ್ನು ಸಾರ್ವಜನಿಕರಿಗೆ ಪ್ರಸ್ತುತಪಡಿಸಲಾಗಿಲ್ಲ. ಮಾಡಿದ್ದುಣ್ಣೋ ಮಾರಾಯ!’ ಎಂದು ಶರ್ಮಿಷ್ಠಾ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ. ಆಧಾರರಹಿತ ಆರೋಪಗಳನ್ನು ಮಾಡಿದವರು ಈಗ ಅವರ ಕರ್ಮಗಳ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ ಎಂದು ಸೂಚಿಸುತ್ತದೆ.

“ಅವರು ಮತ್ತು ಅಣ್ಣಾ ಹಜಾರೆ ಗ್ಯಾಂಗ್ ಕಾಂಗ್ರೆಸ್ ಮತ್ತು ಶೀಲಾ ದೀಕ್ಷಿತ್ ಅವರ ವಿರುದ್ಧ ಅತ್ಯಂತ ಬೇಜವಾಬ್ದಾರಿ, ಆಧಾರರಹಿತ ಮತ್ತು ಸುಳ್ಳು ಆರೋಪಗಳನ್ನು ಮಾಡಿದ್ದು, ಅವರ ವಿರುದ್ಧ ರಾಶಿ ರಾಶಿ ಸಾಕ್ಷ್ಯಗಳಿವೆ ಎಂದು ಹೇಳಿದ್ದರು. ಆದರೆ ಇದುವರೆಗೆ ಯಾರೂ ‘ಆ ರಾಶಿಯನ್ನು’ ಅನ್ನು ನೋಡಿಲ್ಲ. ಮಾಡಿದ್ದುಣ್ಣೋ ಮಾರಾಯ! ಎಂದು ಅವರು X ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಶರ್ಮಿಷ್ಠಾ ಅವರ ಪೋಸ್ಟ್

ಇತ್ತೀಚೆಗೆ ಪಕ್ಷ ಮತ್ತು ಅದರ ನಾಯಕತ್ವವನ್ನು ಟೀಕಿಸಿದ್ದಕ್ಕಾಗಿ “ಕಾಂಗ್ರೆಸ್ ಬೆಂಬಲಿಗರಿಂದ ಸಾಮಾಜಿಕ ಮಾಧ್ಯಮದಲ್ಲಿ ಕೆಟ್ಟದಾಗಿ ಟ್ರೋಲ್ ಮಾಡಲಾಗಿದೆ” ಎಂದು ಶರ್ಮಿಷ್ಠಾ ಹೇಳಿದ್ದಾರೆ.

“ನನ್ನ ತಂದೆಯ ಪುಸ್ತಕ ಪ್ರಕಟವಾದಂದಿನಿಂದ ನಾನು ಅವರ ದಿನಚರಿಗಳಿಂದ ರಾಹುಲ್ ಗಾಂಧಿ ಅವರ ಬಗ್ಗೆ ಕೆಲವು ಅವಲೋಕಗಳನ್ನು ಕಂಡುಕೊಂಡಿದ್ದೇನೆ. ಪ್ರಣಬ್ ಅವರು ರಾಹುಲ್ ಇನ್ನೂ ರಾಜಕೀಯವಾಗಿ ಪ್ರಬುದ್ಧರಾಗಿಲ್ಲ ಮತ್ತು ಅವರು ಗಂಭೀರವಾಗಿರುವಂತೆ ತೋರುತ್ತಿಲ್ಲ ಎಂದು ಹೇಳಿದ್ದರು. ಪದೇ ಪದೇ ಗೈರುಹಾಜರಾಗುತ್ತಾರೆ. ಕಾಂಗ್ರೆಸ್ ಬಗ್ಗೆ ಸಾಕಷ್ಟು ಹೊಗಳಿಕೆ ಇದೆ, ಆದರೆ ಎಲ್ಲವನ್ನೂ ನಿರ್ಲಕ್ಷಿಸಲಾಗಿದೆ.

ಕಾಂಗ್ರೆಸ್ ಸಾಮಾಜಿಕ ಮಾಧ್ಯಮಗಳು ಮತ್ತು ಕೆಲವು ಕಾಂಗ್ರೆಸ್ ನಾಯಕರು ಕೂಡ ವಿರುದ್ಧ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ಮಾಧ್ಯಮಗಳು ನನ್ನನ್ನು ಕೆಟ್ಟದಾಗಿ ಟ್ರೋಲ್ ಮಾಡುತ್ತಿವೆ ಎಂದು ಎಎನ್ಐ ಜತೆ ಮಾತನಾಡಿದ ಶರ್ಮಿಷ್ಠಾ ಹೇಳಿದ್ದಾರೆ.

ಶರ್ಮಿಷ್ಠಾ ಮುಖರ್ಜಿ ಅವರು ಕಾಂಗ್ರೆಸ್‌ನ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಪಕ್ಷದ ಬಗ್ಗೆ ಚಿಂತಿತರಾಗಿದ್ದಾರೆ. ”ಕೆಲವು ದಿನಗಳ ಹಿಂದೆ, ಜೈಪುರ ಸಾಹಿತ್ಯೋತ್ಸವದ ವೇಳೆ, ನಾನು ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದೇನೆ. ಅದರ ಬಗ್ಗೆ ನನ್ನ ಅಭಿಪ್ರಾಯಗಳನ್ನು ಕೇಳಲಾಯಿತು. ಕಾಂಗ್ರೆಸ್, ನಾನು ಕಾಂಗ್ರೆಸ್ಸಿಗ, ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ಕಾಂಗ್ರೆಸ್ ಇನ್ನೂ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಆದರೆ ಕಾಂಗ್ರೆಸ್ ಗಾಂಧಿ-ನೆಹರು ಕುಟುಂಬದ ನಾಯಕತ್ವವನ್ನು ಮೀರಿ ನೋಡಬೇಕು ಎಂದು ಹೇಳಿದ್ದೆ ಎಂದಿದ್ದಾರೆ ಅವರು.

ಕಳೆದ ಎರಡು ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪಕ್ಷದ ನಾಯಕರಾಗಿದ್ದಾಗ ಪಕ್ಷವು ಹೀನಾಯವಾಗಿ ಸೋತಿದ್ದು, ಯಾರನ್ನು ತನ್ನ ಮುಖವನ್ನಾಗಿ ಬಿಂಬಿಸಬೇಕೆಂದು ಕಾಂಗ್ರೆಸ್ ಯೋಚಿಸಬೇಕು ಎಂದು ಶರ್ಮಿಷ್ಠಾ ಮುಖರ್ಜಿ ಹೇಳಿದ್ದರು.

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯದ ತಂಡ ಗುರುವಾರ ಕೇಜ್ರಿವಾಲ್ ಅವರ ನಿವಾಸಕ್ಕೆ ಬಂದಿತ್ತು. ದೆಹಲಿ ಹೈಕೋರ್ಟ್‌ನಿಂದ ಮದ್ಯ ನೀತಿ ಪ್ರಕರಣದಲ್ಲಿ ಬಂಧನದಿಂದ ಮಧ್ಯಂತರ ರಕ್ಷಣೆ ಪಡೆಯಲು ಎಎಪಿ ಸಂಚಾಲಕರು ವಿಫಲರಾದ ಕಾರಣ, ಅವರ ನಿವಾಸದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ನಾಟಕೀಯ ಸನ್ನಿವೇಶಗಳ ನಡುವೆ ಕೇಜ್ರಿವಾಲ್ ಅವರನ್ನು ಬಂಧಿಸಲಾಯಿತು. ನಂತರ ಜಾರಿ ನಿರ್ದೇಶನಾಲಯ ಅವರನ್ನು ಏಜೆನ್ಸಿಯ ಕೇಂದ್ರ ಕಚೇರಿಗೆ ಕರೆದೊಯ್ದಿದೆ. ಇಡಿ ಕಚೇರಿಗೂ ವೈದ್ಯಕೀಯ ತಂಡ ಆಗಮಿಸಿದೆ.

ಎಎಪಿ ಕಾರ್ಯಕರ್ತರು ಮತ್ತು ಮುಖಂಡರು ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇಂಡಿಯಾ ಬ್ಲಾಕ್‌ನ ನಾಯಕರು ಕೂಡ ಎಎಪಿ ನಾಯಕನಿಗೆ ತಮ್ಮ ಬೆಂಬಲವನ್ನು ನೀಡಿದರು. ಬಿಜೆಪಿ ನಾಯಕರು ದೆಹಲಿ ಮುಖ್ಯಮಂತ್ರಿ ವಿರುದ್ಧದ ಇಡಿ ಕ್ರಮಗಳಿಗೆ ಬೆಂಬಲ ನೀಡಿದ್ದು “ಸತ್ಯವು ಮೇಲುಗೈ ಸಾಧಿಸಬೇಕು” ಎಂದು ಒತ್ತಿ ಹೇಳಿದರು.

ಇಬ್ಬರು ಪ್ರತಿಪಕ್ಷಗಳ ಮುಖ್ಯಮಂತ್ರಿಗಳ ಬಂಧನ ಮತ್ತು ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವುದರ ಬಗ್ಗೆ ಮಾತನಾಡಿದ ದೆಹಲಿ ಸಚಿವೆ ಮತ್ತು ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ, ಬಿಜೆಪಿಯು ಜಾರಿ ನಿರ್ದೇಶನಾಲಯ ಬಳಸಿ ರಾಜಕೀಯ ಮಾಡುವುದನ್ನು ನಿಲ್ಲಿಸುವಂತೆ ಕೇಳಿಕೊಂಡರು.

ಇದನ್ನೂ ಓದಿ: ತನ್ನ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ್ ಕೇಜ್ರಿವಾಲ್

ಬಿಜೆಪಿಯು ಪ್ರಜಾಸತ್ತಾತ್ಮಕವಲ್ಲದ ವಿಧಾನಗಳ ಮೂಲಕ ಚುನಾವಣೆಗಳನ್ನು ಗೆಲ್ಲಲು ಪ್ರಯತ್ನಿಸುತ್ತಿದೆ. ಇಡಿಯನ್ನು ತಮ್ಮ ರಾಜಕೀಯ ಕಾರ್ಯಸೂಚಿಗೆ ಸಾಧನವಾಗಿ ಅಥವಾ ಅಸ್ತ್ರವಾಗಿ ಬಳಸುವುದಕ್ಕಿಂತ ನ್ಯಾಯಯುತ ರಾಜಕೀಯ ಸ್ಪರ್ಧೆಯಲ್ಲಿ ತೊಡಗಿಸಿಕೊಳ್ಳುವಂತೆ ಅವರು ಒತ್ತಾಯಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:25 pm, Fri, 22 March 24

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ