ಹರ್ಯಾಣ: ಪಾಕಿಸ್ತಾನದೊಂದಿಗೆ ನಂಟು ಹೊಂದಿರುವ ನಾಲ್ವರು ಶಂಕಿತ ಖಲಿಸ್ತಾನಿ ಭಯೋತ್ಪಾದಕರ ಬಂಧನ

ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ ಫಿರೋಜ್‌ಪುರದಿಂದ ಮೂವರು ಮತ್ತು ಲುಧಿಯಾನದಿಂದ ಒಬ್ಬ ಸೇರಿದಂತೆ 4 ಭಯೋತ್ಪಾದಕ ಶಂಕಿತರನ್ನು ಬಸ್ತಾರಾ ಟೋಲ್ ಪ್ಲಾಜಾ ಬಳಿ ಬಂಧಿಸಲಾಗಿದೆ ಅವರಿಂದ ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳೊಂದಿಗೆ...

ಹರ್ಯಾಣ: ಪಾಕಿಸ್ತಾನದೊಂದಿಗೆ ನಂಟು ಹೊಂದಿರುವ ನಾಲ್ವರು ಶಂಕಿತ ಖಲಿಸ್ತಾನಿ ಭಯೋತ್ಪಾದಕರ ಬಂಧನ
ವಶಪಡಿಸಿಕೊಂಡ ಶಸ್ತ್ರಾಸ್ತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 05, 2022 | 3:25 PM

ದೆಹಲಿ: ಹರ್ಯಾಣದ (Haryana) ಕರ್ನಾಲ್ ಪೊಲೀಸರು (Karnal Police )ಗುರುವಾರ ಜಿಲ್ಲೆಯ ಬಸ್ತಾರಾ ಟೋಲ್ ಪ್ಲಾಜಾದಿಂದ (Bastara toll plaza)  ನಾಲ್ವರು ‘ಖಾಲಿಸ್ತಾನಿ’ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಗಂಗಾ ರಾಮ್ ಪುನಿಯಾ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ ಫಿರೋಜ್‌ಪುರದಿಂದ ಮೂವರು ಮತ್ತು ಲುಧಿಯಾನದಿಂದ ಒಬ್ಬ ಸೇರಿದಂತೆ 4  ಶಂಕಿತ ಭಯೋತ್ಪಾದಕರನ್ನು ಬಸ್ತಾರಾ ಟೋಲ್ ಪ್ಲಾಜಾ ಬಳಿ ಬಂಧಿಸಲಾಗಿದೆ. ಅವರಿಂದ ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳೊಂದಿಗೆ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳನ್ನು ಗುರುಪ್ರೀತ್, ಅಮನದೀಪ್ ಪರ್ಮಿಂದರ್ ಮತ್ತು ಭೂಪಿಂದರ್ ಎಂದು ಗುರುತಿಸಲಾಗಿದೆ ಎಂದು ಕರ್ನಾಲ್ ಎಸ್ ಪಿ ಹೇಳಿದ್ದಾರೆ. ಬಂಧಿತ ವ್ಯಕ್ತಿಗಳು ಪಂಜಾಬ್‌ ಮೂಲದವರಾಗಿದ್ದು ಕೊರಿಯರ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಇನ್ನೋವಾ ವಾಹನದಲ್ಲಿ ಸಾಗಿಸುತ್ತಿದ್ದರು. ಇವರು ತೆಲಂಗಾಣದ ಆದಿಲಾಬಾದ್‌ಗೆ ಹೋಗುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿ ಸೂಚಿಸುತ್ತದೆ ಎಂದು ಕರ್ನಾಲ್ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಸತೇಂದರ್ ಕುಮಾರ್ ಗುಪ್ತಾ ಹೇಳಿದ್ದಾರೆ.

ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ನಂತರ ವಿವರವಾಗಿ ವಿಚಾರಣೆ ನಡೆಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ
Image
Unemployment: ಭಾರತದಲ್ಲಿ ಏಪ್ರಿಲ್ ತಿಂಗಳ ನಿರುದ್ಯೋಗ ದರ ಶೇ 7.83ಕ್ಕೆ ಏರಿಕೆ, ಪಟ್ಟಿಯ ಮೊದಲ ಸ್ಥಾನದಲ್ಲಿ ಹರ್ಯಾಣ

“ವಾಹನದಿಂದ ಆರ್‌ಡಿಎಕ್ಸ್, ಬಂದೂಕು, ಪಿಸ್ತೂಲ್ ಮತ್ತು 31 ಸುತ್ತಿನ ಲೈವ್ ಕಾರ್ಟ್ರಿಡ್ಜ್‌ಗಳನ್ನು ಒಳಗೊಂಡಿರುವ ಶಂಕಿತ ಮೂರು ಕಂಟೈನರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಗುಪ್ತಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಪೊಲೀಸರು ಪಿಸ್ತೂಲ್ ಮತ್ತು 21 ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಪಾಕಿಸ್ತಾನದ ಫಿರೋಜ್‌ಪುರ ಜಿಲ್ಲೆಯಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ಜಿಂದರ್ ಸಿಂಗ್ ರಿಂಡಾ ಅವರು ಡ್ರೋನ್ ಬಳಸಿ ಶಸ್ತ್ರಾಸ್ತ್ರಗಳನ್ನು ಗಾಳಿಯಲ್ಲಿ ಬೀಳಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಿಂಡಾ ಆದಿಲಾಬಾದ್‌ನ ಸ್ಥಳಕ್ಕೆ ಅಪ್ಲಿಕೇಶನ್ ಬಳಸಿ ಶಸ್ತ್ರಾಸ್ತ್ರ ಕಳುಹಿಸಿದ್ದರು. ಆರೋಪಿಗಳು ಈ ಹಿಂದೆ ಫಿರೋಜ್‌ಪುರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆದಿದ್ದರು.ಕರ್ನಾಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶಿಸಿದ್ದಾರೆ.

ಹರ್ಜಿಂದರ್ ಸಿಂಗ್ ಭಯೋತ್ಪಾದಕನಾಗಿದ್ದು ಹೇಗೆ? ಹರ್ಜಿಂದರ್ ಸಿಂಗ್ ಪಂಜಾಬ್‌ನ ತರನ್ ತಾರನ್ ಜಿಲ್ಲೆಯವರು. 11 ನೇ ವಯಸ್ಸಿನಲ್ಲಿ, ರಿಂಡಾ ತನ್ನ ಕುಟುಂಬದೊಂದಿಗೆ ಮಹಾರಾಷ್ಟ್ರದ ನಾಂದೇಡ್ ಸಾಹಿಬ್‌ಗೆ ಸ್ಥಳಾಂತರಗೊಂಡರು. ಪೊಲೀಸ್ ದಾಖಲೆಗಳ ಪ್ರಕಾರ ರಿಂಡಾ, 18 ನೇ ವಯಸ್ಸಿನಲ್ಲಿ ಕೌಟುಂಬಿಕ ಕಲಹದಲ್ಲಿ ತರನ್ ತಾರನ್​​ನಲ್ಲಿ ತನ್ನ ಸಂಬಂಧಿಕರೊಬ್ಬರನ್ನು ಹತ್ಯೆ ಮಾಡಿದ್ದನು.

ನಾಂದೇಡ್ ಸಾಹಿಬ್‌ನಲ್ಲಿ ರಿಂಡಾ ಸ್ಥಳೀಯ ವ್ಯಾಪಾರಿಗಳಿಂದ ಹಣವನ್ನು ಸುಲಿಗೆ ಮಾಡಲು ಪ್ರಾರಂಭಿಸಿ ಅಲ್ಲಿ ಇಬ್ಬರನ್ನು ಕೊಂದಿದ್ದರು. ಒಂದು ಕಾಲದಲ್ಲಿ ವಿದ್ಯಾರ್ಥಿ ನಾಯಕರಾಗಿದ್ದ, ಪ್ರಸ್ತುತ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಹರ್ಜಿಂದರ್ ಸಿಂಗ್ ಅಕಾ ರಿಂಡಾ ಸಂಧು, ಕೊಲೆ, ಕೊಲೆ ಯತ್ನ, ಸುಲಿಗೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಸೇರಿದಂತೆ ನಾಲ್ಕು ಕ್ರಿಮಿನಲ್ ಪ್ರಕರಣಗಳಲ್ಲಿ ಚಂಡೀಗಢ ಪೊಲೀಸರಿಗೆ ವಾಟೆಂಡ್ ವ್ಯಕ್ತಿ ಆಗಿದ್ದಾರೆ. . ಈ ಪ್ರಕರಣಗಳು 2016 ಮತ್ತು 2018 ರ ನಡುವೆ ದಾಖಲಾಗಿವೆ. ರಿಂಡಾ ಅವರು ನಕಲಿ ಭಾರತೀಯ ಪಾಸ್‌ಪೋರ್ಟ್ ಬಳಸಿ ನೇಪಾಳದ ಮೂಲಕ ಪಾಕಿಸ್ತಾನಕ್ಕೆ ಪ್ರವೇಶಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಇದರ ಜತೆಗೆ ರಿಂಡಾ ಪಂಜಾಬ್ ಮತ್ತು ಮಹಾರಾಷ್ಟ್ರದಲ್ಲಿ ಹತ್ತಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

ಮೂಲಗಳ ಪ್ರಕಾರ ಲಾಹೋರ್‌ನಲ್ಲಿರುವ 35 ವರ್ಷದ ಐಎಸ್‌ಐ ಗೂಂಡಾ ರಿಂಡಾ ಕಳೆದ ವರ್ಷ ನವೆಂಬರ್ 8 ರಂದು ನವನ್‌ಶಹರ್ ಅಪರಾಧ ತನಿಖಾ ಸಂಸ್ಥೆ (ಸಿಐಎ) ಕಟ್ಟಡದಲ್ಲಿ ಭಯೋತ್ಪಾದಕ ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:52 pm, Thu, 5 May 22

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ