AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮೇ10 ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ

ಕರ್ನಾಟಕ ವಿಧಾನಸಭಾ  ಚುನಾವಣೆ(Karnataka Assembly Elections) ಯ ದೃಷ್ಟಿಯಿಂದ ಗೋವಾ ಸರ್ಕಾರವು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ.

Karnataka Assembly Elections 2023: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮೇ10 ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ
ಪ್ರಮೋದ್ ಸಾವಂತ್
ನಯನಾ ರಾಜೀವ್
|

Updated on: May 09, 2023 | 9:23 AM

Share

ಕರ್ನಾಟಕ ವಿಧಾನಸಭಾ  ಚುನಾವಣೆ(Karnataka Assembly Elections) ಯ ದೃಷ್ಟಿಯಿಂದ ಗೋವಾ ಸರ್ಕಾರವು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ. ಇದು ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಿಗೂ ಅನ್ವಯವಾಗಲಿದೆ. ಈ ನಿರ್ಧಾರದಿಂದ ಗೋವಾದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ತೆರಳಿ ಮತದಾನ ಮಾಡಲು ನೆರವಾಗಲಿದೆ. ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಕಾರಣದಿಂದಾಗಿ ಅಂದು ಗೋವಾ ಸರ್ಕಾರ ರಜೆ ಘೋಷಿಸಿದೆ. ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳು ಮೂರ್ಖ ನಿರ್ಧಾರ ಎಂದು ಕರೆದಿದ್ದಾರೆ.

ಈ ರಜೆಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಾಗಬಹುದು ಎಂದು ಗೋವಾ ರಾಜ್ಯ ಕೈಗಾರಿಕೆಗಳ ಸಂಘ ಹೇಳಿದೆ. ವಾಸ್ತವವಾಗಿ, ಗೋವಾ ಸರ್ಕಾರವು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾರಣ ಮೇ 10 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸೋಮವಾರ ಅಧಿಸೂಚನೆಯನ್ನು ಹೊರಡಿಸಿತು.

ಮತ್ತಷ್ಟು ಓದಿ:ಮೇ 10ರ ಮತದಾನದಂದು ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ, ಮತ ಹಾಕಿದವರಿಗೆ ಮಾತ್ರ ವಾಹನದಲ್ಲಿ ಪರ್ಮಿಷನ್

ಮೇ 10 ರಂದು ಎಲ್ಲಾ ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ ಎಂದು ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಗೋವಾ ಫಾರ್ವರ್ಡ್ ಪಾರ್ಟಿ ಟ್ವೀಟ್ ಮಾಡುವ ಮೂಲಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದೆ.

ಗೋವಾ ರಾಜ್ಯ ಕೈಗಾರಿಕಾ ಸಂಘದ ಅಧ್ಯಕ್ಷ ದಾಮೋದರ್ ಕೋಚ್ಕರ್, ರಾಜ್ಯ ಸರ್ಕಾರದ ಈ ನಿರ್ಧಾರ ಮೂರ್ಖತನ ಎಂದು ಬಣ್ಣಿಸಿದ್ದಾರೆ. ಇದಲ್ಲದೆ, ಆಮ್ ಆದ್ಮಿ ಪಕ್ಷದ ಗೋವಾ ಘಟಕದ ಅಧ್ಯಕ್ಷ ಅಮಿತ್ ಪಾಲೇಕರ್ ರಾಜ್ಯ ಸರ್ಕಾರವನ್ನು ಟೀಕಿಸಿದರು ಮತ್ತು ಈ ನಿರ್ಧಾರವನ್ನು ಮೂರ್ಖ ನಿರ್ಧಾರ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ