ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Elections) ಯ ದೃಷ್ಟಿಯಿಂದ ಗೋವಾ ಸರ್ಕಾರವು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ. ಇದು ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಿಗೂ ಅನ್ವಯವಾಗಲಿದೆ. ಈ ನಿರ್ಧಾರದಿಂದ ಗೋವಾದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ತೆರಳಿ ಮತದಾನ ಮಾಡಲು ನೆರವಾಗಲಿದೆ. ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಕಾರಣದಿಂದಾಗಿ ಅಂದು ಗೋವಾ ಸರ್ಕಾರ ರಜೆ ಘೋಷಿಸಿದೆ. ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳು ಮೂರ್ಖ ನಿರ್ಧಾರ ಎಂದು ಕರೆದಿದ್ದಾರೆ.
ಈ ರಜೆಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಾಗಬಹುದು ಎಂದು ಗೋವಾ ರಾಜ್ಯ ಕೈಗಾರಿಕೆಗಳ ಸಂಘ ಹೇಳಿದೆ. ವಾಸ್ತವವಾಗಿ, ಗೋವಾ ಸರ್ಕಾರವು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾರಣ ಮೇ 10 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸೋಮವಾರ ಅಧಿಸೂಚನೆಯನ್ನು ಹೊರಡಿಸಿತು.
ಮತ್ತಷ್ಟು ಓದಿ:ಮೇ 10ರ ಮತದಾನದಂದು ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ, ಮತ ಹಾಕಿದವರಿಗೆ ಮಾತ್ರ ವಾಹನದಲ್ಲಿ ಪರ್ಮಿಷನ್
ಮೇ 10 ರಂದು ಎಲ್ಲಾ ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ ಎಂದು ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಗೋವಾ ಫಾರ್ವರ್ಡ್ ಪಾರ್ಟಿ ಟ್ವೀಟ್ ಮಾಡುವ ಮೂಲಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದೆ.
ಗೋವಾ ರಾಜ್ಯ ಕೈಗಾರಿಕಾ ಸಂಘದ ಅಧ್ಯಕ್ಷ ದಾಮೋದರ್ ಕೋಚ್ಕರ್, ರಾಜ್ಯ ಸರ್ಕಾರದ ಈ ನಿರ್ಧಾರ ಮೂರ್ಖತನ ಎಂದು ಬಣ್ಣಿಸಿದ್ದಾರೆ. ಇದಲ್ಲದೆ, ಆಮ್ ಆದ್ಮಿ ಪಕ್ಷದ ಗೋವಾ ಘಟಕದ ಅಧ್ಯಕ್ಷ ಅಮಿತ್ ಪಾಲೇಕರ್ ರಾಜ್ಯ ಸರ್ಕಾರವನ್ನು ಟೀಕಿಸಿದರು ಮತ್ತು ಈ ನಿರ್ಧಾರವನ್ನು ಮೂರ್ಖ ನಿರ್ಧಾರ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ