AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ ರಾಜ್ಯ ಬಿಜೆಪಿ ಸಂಸದರು

ಕೇಂದ್ರದ ಕೆಲವು ಸಚಿವರು ರಾಜೀನಾಮೆ, ನಿಧನದಿಂದ ಕೇಂದ್ರದ ಸಚಿವ ಸ್ಥಾನಗಳು ತೆರವಾಗಿವೆ. ರಾಮ್ ವಿಲಾಸ್ ಪಾಸ್ವಾನ್, ಸುರೇಶ್ ಅಂಗಡಿ ನಿಧನದಿಂದಾಗಿ ಸಚಿವ ಸ್ಥಾನಗಳು ತೆರವಾಗಿವೆ. ಹಾಗೂ ಶಿರೋಮಣಿ ಅಕಾಲಿದಳ, ಶಿವಸೇನೆ NDAಗೆ ಗುಡ್‌ಬೈ ಹೇಳಿದ್ದಾರೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ಸ್ಥಾನಗಳು ಖಾಲಿಯಾಗಿವೆ. ಕೆಲ ರಾಜ್ಯಗಳ ಬಿಜೆಪಿ ನಾಯಕರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವುದಕ್ಕೆ ತಯಾರಿ ನಡೆಯುತ್ತಿದೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ ರಾಜ್ಯ ಬಿಜೆಪಿ ಸಂಸದರು
ಕೇಂದ್ರ ಗೃಹ ಸಚಿವ ಅಮಿತ್ ಶಾ
TV9 Web
| Edited By: |

Updated on: Jun 15, 2021 | 1:29 PM

Share

ದೆಹಲಿ: ಸದ್ಯದಲ್ಲಿಯೇ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ಸುಮಾರು 25 ರಾಜ್ಯ ಬಿಜೆಪಿ ಸಂಸದರು ಸದ್ಯದಲ್ಲೇ ಕೇಂದ್ರದ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ.

ಕೇಂದ್ರದ ಕೆಲವು ಸಚಿವರು ರಾಜೀನಾಮೆ, ನಿಧನದಿಂದ ಕೇಂದ್ರದ ಸಚಿವ ಸ್ಥಾನಗಳು ತೆರವಾಗಿವೆ. ರಾಮ್ ವಿಲಾಸ್ ಪಾಸ್ವಾನ್, ಸುರೇಶ್ ಅಂಗಡಿ ನಿಧನದಿಂದಾಗಿ ಸಚಿವ ಸ್ಥಾನಗಳು ತೆರವಾಗಿವೆ. ಹಾಗೂ ಶಿರೋಮಣಿ ಅಕಾಲಿದಳ, ಶಿವಸೇನೆ NDAಗೆ ಗುಡ್‌ಬೈ ಹೇಳಿದ್ದಾರೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ಸ್ಥಾನಗಳು ಖಾಲಿಯಾಗಿವೆ. ಕೆಲ ರಾಜ್ಯಗಳ ಬಿಜೆಪಿ ನಾಯಕರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವುದಕ್ಕೆ ತಯಾರಿ ನಡೆಯುತ್ತಿದೆ. ಹೀಗಾಗಿ ಕೆಲ ನಾಯಕರಿಗೆ ರಾಜ್ಯಮಟ್ಟದಲ್ಲಿ ಜವಾಬ್ದಾರಿ ನೀಡಿಲ್ಲ. ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನಾವಾಲ, ಸುಶೀಲ್ ಕುಮಾರ್ ಮೋದಿ, ಅನುಪ್ರಿಯಾ ಪಟೇಲ್ ಸೇರಿ ಅನೇಕರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇದೆ. ಜೆಡಿಯು ಪಕ್ಷಕ್ಕೂ ಕೇಂದ್ರದ ಕ್ಯಾಬಿನೆಟ್‌ನಲ್ಲಿ ಸ್ಥಾನ ಸಿಕ್ಕಿಲ್ಲ. ಈಗ 3 ಕೇಂದ್ರ ಸಚಿವ ಸ್ಥಾನಕ್ಕೆ ಜೆಡಿಯು ಬೇಡಿಕೆ ಇಟ್ಟಿದೆ. ಕೇಂದ್ರದಲ್ಲಿ ಅದಕ್ಷ ಸಚಿವರ ಖಾತೆ ಬದಲಾವಣೆಯಾಗುವ ಸಾಧ್ಯತೆ ಇದೆ.

ಕಳೆದ ಕೆಲ ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಡುವೆ ಬಿರುಸಿನ ಸಮಾಲೋಚನೆ ನಡೆದಿತ್ತು. ನಡ್ಡಾ ಅವರು ಒಂದು ತಿಂಗಳಿಂದ ಪ್ರಧಾನಿ ನಿವಾಸಕ್ಕೆ ಹಲವು ಬಾರಿ ಭೇಟಿ ನೀಡಿದ್ದರು. ಸದ್ಯ ಸಂಭವನೀಯ ಪಟ್ಟಿ ಬಹುತೇಕ ಅಂತಿಮಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ವಾರದಲ್ಲಿ 5ನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಸಭೆ ಒಂದು ವಾರದಲ್ಲಿ ಐದನೇ ಬಾರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಲೋಕ್ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಸಂಜೆ 7 ಗಂಟೆಗೆ ಸಭೆ ನಡೆದಿರುವ ಬಗ್ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅದರಂತೆ, ರಕ್ಷಣಾ ಸಚಿವ ರಾಜ್ನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ, ರಸಗೊಬ್ಬರ ಸಚಿವ ಸದಾನಂದ ಗೌಡ ಸಭೆಯಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕೂಡ ಹಾಜರಿದ್ದರು ಎಂದು ತಿಳಿದುಬಂದಿದೆ.

ಬಿಜೆಪಿ ಪಕ್ಷದ ಆಡಳಿತ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಸಚಿವರೊಂದಿಗೆ ಹೀಗೆ ಪ್ರತ್ಯೇಕ ಮೀಟಿಂಗ್ಗಳನ್ನು ನಡೆಸಿ ಕೈಗೊಂಡಿರುವ ಕೆಲಸಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಕೊರೊನಾ ಎರಡನೇ ಅಲೆಯ ಕಾರಣದಿಂದ ಸವಾಲಿನ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಚಿವರು ತಮ್ಮ ಕಾರ್ಯದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದೂ ಮಾಹಿತಿ ಕೇಳಿಬಂದಿದೆ.

ಸಭೆಯು ಸುಮಾರು ಮೂರರಿಂದ ಐದು ಗಂಟೆಗಳ ಕಾಲ ನಡೆದಿದೆ. ಕ್ಯಾಬಿನೆಟ್ ದರ್ಜೆ ಸಚಿವರು ಹಾಗೂ ರಾಜ್ಯ ಸಚಿವರು ಕೂಡ ಸಭೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಕೃಷಿ, ಗ್ರಾಮೀಣಾಭಿವೃದ್ಧಿ, ಪಶು ಸಂಗೋಪನೆ, ಮೀನುಗಾರಿಕೆ, ಬುಡಕಟ್ಟು ಜನಾಂಗ, ನಗರಾಭಿವೃದ್ಧಿ, ಸಂಸ್ಕೃತಿ, ನಾಗರಿಕ ಸೇವೆ, ರೈಲ್ವೇ, ಆಹಾರ, ಜಲಶಕ್ತಿ, ಇಂಧನ, ಪರಿಸರ ಹೀಗೆ ಮುಂತಾದ ಸಚಿವರು ಕಳೆದ ವಾರದಿಂದ ನಡೆಯುತ್ತಿರುವ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ ಗುಮಾನಿ ನಡುವೆ ವಾರದಲ್ಲಿ 5ನೇ ಬಾರಿ ಪ್ರಧಾನಿ ನರೇಂದ್ರ ಮೋದಿ ಸಭೆ; ಪ್ರಮುಖ ಸಚಿವರೊಂದಿಗೆ ಮಾತುಕತೆ