ಬೆಂಗಳೂರು: ಗಡಿ ವಿವಾದ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಸಚಿವರ ಹೇಳಿಕೆಗೆ ಸಂಬಂಧಿಸಿ, ಗಡಿ ರಕ್ಷಣಾ ಆಯೋಗದ ಅಧ್ಯಕ್ಷ ನ್ಯಾ.ಕೆ.ಎಲ್.ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ರಾಜ್ಯದ ಮುಖ್ಯಮಂತ್ರಿ, ಇತರ ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಗಡಿ ವಿವಾದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಬಾರದು. ಈ ಕುರಿತು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಯಾವುದೇ ರಾಜ್ಯದ ಮುಖ್ಯಮಂತ್ರಿ ಅಥವಾ ಸಚಿವರು ಭಾವನೆ ಕೆರಳಿಸುವ ರೀತಿ ಹೇಳಿಕೆ ಕೊಡಬಾರದು. ಇದಕ್ಕೆ ಸಂಬಂಧಿಸಿ, ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ, ಸುಪ್ರೀಂ ಕೋರ್ಟ್ನಲ್ಲಿರುವ ಗಡಿ ರಕ್ಷಣಾ ಆಯೋಗದ ವಕೀಲರಿಗೆ, ಆಯೋಗದ ಅಧ್ಯಕ್ಷ ಜಸ್ಟೀಸ್ ಕೆ.ಎಲ್. ಮಂಜುನಾಥ್ ಸೂಚನೆ ನೀಡಿದ್ದಾರೆ. ಇದಕ್ಕೂ ಮುನ್ನ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಜೊತೆ ಜಸ್ಟೀಸ್ ಮಂಜುನಾಥ್ ಚರ್ಚಿಸಿರುವ ಮಾಹಿತಿ ಲಭ್ಯವಾಗಿದೆ.
Published On - 7:12 pm, Mon, 18 January 21