ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ನಾಳೆ ಬೀಳ್ಕೊಡುಗೆ; ಔತಣಕೂಟದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಭಾಗಿ
ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಔತಣಕೂಟ ಏರ್ಪಡಿಸಿದ್ದಾರೆ.
ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಮುಗಿಯಲಿದೆ. ಜುಲೈ 25ರಂದು ನೂತನ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ, ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ಅವರಿಗೆ ನಾಳೆ ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿದೆ. ಈ ಔತಣಕೂಟದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕೂಡ ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಔತಣಕೂಟ ಏರ್ಪಡಿಸಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಔತಣಕೂಟ ಏರ್ಪಡಿಸಲಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಕೂಡ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಮಧ್ಯಾಹ್ನ 2.55ಕ್ಕೆ ಬೆಂಗಳೂರಿನಿಂದ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇದನ್ನೂ ಓದಿ: Presidential Election Results 2022 Live: ಭಾರತದ 15ನೇ ರಾಷ್ಟ್ರಪತಿ ಯಾರಾಗಲಿದ್ದಾರೆ?; ಮತ ಎಣಿಕೆ ಕಾರ್ಯ ಆರಂಭ
ನಾಳೆ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ರಾತ್ರಿ ಔತಣಕೂಟದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಬೆಳಗ್ಗೆ 10.50ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
ಈಗಾಗಲೇ ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಇಂದು ಸಂಜೆಯ ವೇಳೆಗೆ ಚುನಾವಣಾ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಈ ಬಾರಿಯ ರಾಷ್ಟ್ರಪತಿ ಚುನಾವಣಾ ಕಣದಲ್ಲಿ ದ್ರೌಪದಿ ಮುರ್ಮು ಮತ್ತು ಯಶವಂತ್ ಸಿನ್ಹಾ ಇದ್ದಾರೆ. ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಬಹುತೇಕ ಪಕ್ಕಾ ಆಗಿದೆ.
Published On - 1:59 pm, Thu, 21 July 22