ದೆಹಲಿಗೆ ತೆರಳಿ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ವಿಷಯಗಳ ಕುರಿತು ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ.

ದೆಹಲಿಗೆ ತೆರಳಿ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದ ಸಿಎಂ ಬಸವರಾಜ ಬೊಮ್ಮಾಯಿ
ದೆಹಲಿಗೆ ತೆರಳಿ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದ ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಆಯೇಷಾ ಬಾನು

Updated on: Jul 30, 2021 | 3:21 PM

ದೆಹಲಿ: ಜುಲೈ 28ರಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮರು ದಿನವೇ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿದರು. ಮತ್ತು ಇಂದು (ಜುಲೈ 30) ಬಿಜೆಪಿ ವರಿಷ್ಠರಿಗೆ ಧನ್ಯವಾದ ತಿಳಿಸಲು ದೆಹಲಿ ಪ್ರವಾಸ ಕೈಗೊಂಡಿದ್ದು ಕೇಂದ್ರದ ನಾಯಕರನ್ನ ಭೇಟಿ ಮಾಡಿದ್ದಾರೆ.

ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.10ಕ್ಕೆ ಏರ್ ಇಂಡಿಯಾ ವಿಮಾನದ ಮೂಲಕ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದು 9.30ರ ಒಳಗೆ ದೆಹಲಿ ತಲುಪಿದ್ದರು. ಬಳಿಯ ಸಿಎಂ ಆಗಿ ಮೊದಲ ಬಾರಿ ದೆಹಲಿಗೆ ಕಾಲಿಟ್ಟ ಬೊಮ್ಮಾಯಿ ಮೊದಲು ಕರ್ನಾಟಕ ಭವನಕ್ಕೆ ಆಗಮಿಸಿದ್ರು. ಅಲ್ಲಿ ಸಂಸದರಾದ ಶಿವಕುಮಾರ್ ಉದಾಸಿ, ಶಾಸಕ ಎಂ.ಪಿ ಕುಮಾರಸ್ವಾಮಿ, ಸಂಸದ ರಾಘವೇಂದ್ರ ಸೇರಿದಂತೆ ಕೆಲವರನ್ನು ಭೇಟಿ ಮಾಡಿದ್ರು.

ಸಂಜೆ 4 ಗಂಟೆಗೆ ಪ್ರಧಾನಿ, ಸಿಎಂ ಭೇಟಿ ಇನ್ನು ಈ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಿಎಂ ಆದ ಬಳಿಕ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ್ದೇನೆ. ಇಂದು ರಕ್ಷಣಾ ಸಚಿವರು, ಗೃಹ ಸಚಿವರು ಮತ್ತು ಸಂಜೆ 4 ಗಂಟೆಗೆ ಪ್ರಧಾನಿಯವರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

ಬಳಿಕ ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ರಕ್ಷಣಾ ಸಚಿವರ ನಿವಾಸಕ್ಕೆ ತೆರಳಿ ರಾಜನಾಥ್ ಸಿಂಗ್ರನ್ನು ಭೇಟಿ ಮಾಡಿದರು. ಸಿಎಂ ಬಸವರಾಜ ಬೊಮ್ಮಾಯಿ ಮೈಸೂರು ಪೇಟಾ ತೊಡಿಸಿ ರಾಜನಾಥ್ ಸಿಂಗ್ರನ್ನು ಸನ್ಮಾನಿಸಿದರು.

Basavaraj Bommai

ಮೈಸೂರು ಪೇಟಾ ತೊಡಿಸಿ ರಾಜನಾಥ್ ಸಿಂಗ್ ಸನ್ಮಾನಿಸಿದ ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದ ನೀರಾವರಿ ವಿಷಯಗಳ ಕುರಿತು ಸಿಎಂ ಚರ್ಚೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ವಿಷಯಗಳ ಕುರಿತು ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಂಸದರಾದ ಶಿವಕುಮಾರ್ ಉದಾಸಿ ಮತ್ತು ಡಾ. ಉಮೇಶ್ ಜಾಧವ್, ಮಾಜಿ ಸಚಿವರಾದ ಆರ್. ಅಶೋಕ್, ಉಮೇಶ್ ವಿ. ಕತ್ತಿ ಜೊತೆಗಿದ್ದರು. ಇದಾದ ಬಳಿಕ ಸಂಸತ್ ಭವನಕ್ಕೆ ತೆರಳಿದ ಸಿಎಂ, ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ್ದಾರೆ. ಸಿಎಂ ಸ್ಥಾನಕ್ಕೆ ಪರಿಗಣಿಸಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ. ಇದೆಲ್ಲಾ ಆದ ಬಳಿಕ ಕರ್ನಾಟಕ ರಾಜ್ಯ ಸಂಸದರ ಜೊತೆ ಸಭೆ ನಡೆಸಿದ್ದಾರೆ.

basavaraj bommai

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿಯಲ್ಲಿ ರಾಜ್ಯ ಸಂಸದರ ಜೊತೆ ಸಿಎಂ ಸಭೆ ದೆಹಲಿಯಲ್ಲಿ ರಾಜ್ಯ ಸಂಸದರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ. ಸಭೆಗೆ ಕೇಂದ್ರ ಸಚಿವ ಭಗವಂತ್ ಖೂಬಾ, ನಾರಾಯಣ ಸ್ವಾಮಿ, ಸಂಸದರಾದ ಪಿ.ಸಿ.ಗದ್ದಿಗೌಡರ್, ರಮೇಶ್ ಜಿಗಜಿಗಣಿ, ಬಚ್ಚೇಗೌಡ, ಈರಣ್ಣ ಕಡಾಡಿ, ಕರಡಿ ಸಂಗಣ್ಣ, ದೇವೇಂದ್ರಪ್ಪ, ನಳಿನ್ ಕುಮಾರ್ ಕಟೀಲ್, ಜಿ.ಎಂ.ಸಿದ್ದೇಶ್ವರ್, ಜಿ.ಎಸ್.ಬಸವರಾಜು, ಅಮರೇಶ್ವರ್ ನಾಯಕ್, ಸಚಿವ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಆದ್ರೆ ಸಿಎಂ ಬೊಮ್ಮಾಯಿ ಸಭೆಗೆ ವಿಪಕ್ಷ ಸಂಸದರು ಗೈರಾಗಿದ್ದಾರೆ. ಲೋಕಸಭಾ ಸದಸ್ಯರಾದ ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣ, ರಾಜ್ಯಸಭಾ ಸದಸ್ಯರಾದ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ, ಜಿ‌.ಸಿ.ಚಂದ್ರಶೇಖರ್, ನಾಸಿರ್ ಹುಸೇನ್ ಸಭೆಗೆ ಗೈರಾಗಿದ್ದಾರೆ.

Basavaraj Bommai sumalatha

ದೆಹಲಿಯಲ್ಲಿ ರಾಜ್ಯ ಸಂಸದರ ಜೊತೆ ಸಿಎಂ ಸಭೆ

Basavaraj Bommai joshi

ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ರಾಜ್ಯವನ್ನು ಆಳುತ್ತಿರುವ ಬಿಜೆಪಿಗೆ ಮೇಕೆದಾಟು ಯೋಜನೆಯಲ್ಲಿ ಬದ್ಧತೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರಲಿ: ಹೆಚ್​.ಡಿ. ಕುಮಾರಸ್ವಾಮಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ