AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಸೇರಿದಂತೆ ಈ 4 ರಾಜ್ಯಗಳಿಂದ ಯಾರೂ ಬರುವಂತಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ಕಾಟದಿಂದಾಗಿ ಕೇಂದ್ರದ ಮಾರ್ಗಸೂಚಿಯಂತೆ 4ನೇ ಹಂತದ ಲಾಕ್‌ಡೌನ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಇತರೆ ಕೆಲ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಅದಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಾಗಿ 4 ರಾಜ್ಯಗಳಿಂದ ಯಾರೂ ಕರ್ನಾಟಕದೊಳಕ್ಕೆ ಬರುವುದು ಬೇಡ ಎಂದಿದ್ದಾರೆ. ಅಕಸ್ಮಾತ್ ಬಂದರೂ ತಪ್ಪದೇ ಕ್ವಾರಂಟೈನ್​ಗೆ ಒಳಪಡಲೇಬೇಕು ಎಂದಿದ್ದಾರೆ. ಮೇ 31 ರವರೆಗೂ ಯಾರೂ ಬರಬೇಡಿ: ಸೋಂಕು ಜಾಸ್ತಿಯಿರುವ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು […]

ಗುಜರಾತ್ ಸೇರಿದಂತೆ ಈ 4 ರಾಜ್ಯಗಳಿಂದ ಯಾರೂ ಬರುವಂತಿಲ್ಲ: ಸಿಎಂ ಯಡಿಯೂರಪ್ಪ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 18, 2020 | 8:34 PM

Share

ಬೆಂಗಳೂರು: ಕೊರೊನಾ ಕಾಟದಿಂದಾಗಿ ಕೇಂದ್ರದ ಮಾರ್ಗಸೂಚಿಯಂತೆ 4ನೇ ಹಂತದ ಲಾಕ್‌ಡೌನ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಇತರೆ ಕೆಲ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಅದಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಾಗಿ 4 ರಾಜ್ಯಗಳಿಂದ ಯಾರೂ ಕರ್ನಾಟಕದೊಳಕ್ಕೆ ಬರುವುದು ಬೇಡ ಎಂದಿದ್ದಾರೆ. ಅಕಸ್ಮಾತ್ ಬಂದರೂ ತಪ್ಪದೇ ಕ್ವಾರಂಟೈನ್​ಗೆ ಒಳಪಡಲೇಬೇಕು ಎಂದಿದ್ದಾರೆ.

ಮೇ 31 ರವರೆಗೂ ಯಾರೂ ಬರಬೇಡಿ: ಸೋಂಕು ಜಾಸ್ತಿಯಿರುವ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಂದ ಜನ ಬರುವುದು ಬೇಡ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇದು ಲಾಕ್​ಡೌನ್​ 4 ಮುಗಿಯುವವರೆಗೂ ಅಂದ್ರೆ ಮೇ 31 ರವರೆಗೂ ಈ ನಿಯಮ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Published On - 2:35 pm, Mon, 18 May 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು