G20 Summit: ಜಿ20 ಔತಣಕೂಟಕ್ಕೆ ಹೋಗದಿರಲು ಸಿಎಂ ಸಿದ್ದರಾಮಯ್ಯ ನಿರ್ಧಾರ

| Updated By: ಆಯೇಷಾ ಬಾನು

Updated on: Sep 09, 2023 | 7:38 AM

ಕೆಲವು ಕಾರಣಗಳನ್ನು ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯನವರು G20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಅಧಿಕೃತವಾಗಿ ತಿಳಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳಿಂದ ತಿಳಿದುಬಂದಿದೆ. ಆದರೆ ವಾಸ್ತವದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಅತಿಥಿಗಳ ಪಟ್ಟಿಯಲ್ಲಿ ಇಲ್ಲ ಎಂಬ ಕಾರಣಕ್ಕೆ ಅಸಮಾಧಾನ ಇರುವುದರಿಂದ ಔತಣಕೂಟಕ್ಕೆ ಹೋಗದಿರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

G20 Summit: ಜಿ20 ಔತಣಕೂಟಕ್ಕೆ ಹೋಗದಿರಲು ಸಿಎಂ ಸಿದ್ದರಾಮಯ್ಯ ನಿರ್ಧಾರ
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು, ಸೆ.09: ಇಂದಿನಿಂದ 2ದಿನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜಿ20 ಶೃಂಗಸಭೆ(G20 Summit) ನಡೆಯಲಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಅವರು ಶನಿವಾರ ನವದೆಹಲಿಯಲ್ಲಿ ಆಯೋಜಿಸಿರುವ ಜಿ20 ಔತಣಕೂಟದಲ್ಲಿ ಪಾಲ್ಗೊಳ್ಳದಿರಲು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ನಿರ್ಧರಿಸಿದ್ದಾರೆ. ಹಾಘೂ ಮಾಜಿ ಪ್ರಧಾನಿಗಳು ಮತ್ತು ವಿರೋಧ ಪಕ್ಷಗಳು ಆಡಳಿತದಲ್ಲಿರುವ ಕೆಲವು ಮುಖ್ಯಮಂತ್ರಿಗಳು ಗೈರಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಸಿಕ್ಕಿದೆ.

ಕೆಲವು ಕಾರಣಗಳನ್ನು ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯನವರು G20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಅಧಿಕೃತವಾಗಿ ತಿಳಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳಿಂದ ತಿಳಿದುಬಂದಿದೆ. ಆದರೆ ವಾಸ್ತವದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಅತಿಥಿಗಳ ಪಟ್ಟಿಯಲ್ಲಿ ಇಲ್ಲ ಎಂಬ ಕಾರಣಕ್ಕೆ ಅಸಮಾಧಾನ ಇರುವುದರಿಂದ ಔತಣಕೂಟಕ್ಕೆ ಹೋಗದಿರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ದೆಹಲಿಯ ಪ್ರಗತಿ ಮೈದಾನದಲ್ಲಿರುವ ಭಾರತ ವಾಣಿಜ್ಯ ಉತ್ತೇಜನಾ ಸಂಸ್ಥೆ ಸಂಕೀರ್ಣವಾದ ಭಾರತ ಮಂಟಪದ ಬಹುಕಾರ್ಯ ಸಭಾಂಗಣದಲ್ಲಿ ರಾಷ್ಟ್ರಪತಿಗಳು ಆಯೋಜಿಸಿದ್ದ ಭೋಜನಕೂಟಕ್ಕೆ ಖರ್ಗೆ ಅವರು ಅಧಿಕೃತ ಆಹ್ವಾನವನ್ನು ಇಲ್ಲಿಯವರೆಗೆ ಸ್ವೀಕರಿಸಿಲ್ಲ ಎಂದು ಬೆಂಗಳೂರಿನಲ್ಲಿರುವ ಖರ್ಗೆ ಅವರ ಗೃಹ ಕಚೇರಿಯ ಆಪ್ತ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:  ವಿಡಿಯೋ: G20 ಭಾರತ್ ಮಂಟಪದ ಕಲರ್​ಫುಲ್ ಕಾರಂಜಿ ಚಿತ್ತಾರ ಇಲ್ಲಿದೆ ನೋಡಿ

ಇನ್ನು ಅನಾರೋಗ್ಯದ ಹಿನ್ನೆಲೆ ಮಾಜಿ ಪ್ರಧಾನಿಗಳಾದ ಹೆಚ್​ಡಿ ದೇವೇಗೌಡ ಮತ್ತು ಮನಮೋಹನ್ ಸಿಂಗ್ ಅವರು ಔತಣಕೂಟದಲ್ಲಿ ಭಾಗವಹಿಸುತ್ತಿಲ್ಲ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ(ಹಿಂದಿನ ಟ್ವಿಟರ್) ಪೋಸ್ಟ್ ಮಾಡಿ ದೇವೇಗೌಡ ಅವರು ಜಿ20 ಶೃಂಗಸಭೆ ಯಶಸ್ಸಿಗೆ ಶುಭ ಹಾರೈಸಿದ್ದಾರೆ.

ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಔತಣಕೂಟದಲ್ಲಿ ಭಾಗವಹಿಸುವುದಾಗಿ ಖಚಿತಪಡಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಜಿ20 ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ರಾಷ್ಟ್ರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ