ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಕೊರೊನಾ ಸೋಂಕು ದೃಢ

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 2 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ವರದಿ ಆಗಿದೆ. ಈ ಮಧ್ಯೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಗೂ ಕೊರೊನಾ ಪಾಸಿಟಿವ್ ಆಗಿದೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಕೊರೊನಾ ಸೋಂಕು ದೃಢ
ರಣದೀಪ್ ಸುರ್ಜೇವಾಲಾ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Jan 04, 2022 | 8:17 PM

ದೆಹಲಿ: ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಕೊರೊನಾ ಸೋಂಕು ದೃಢವಾಗಿದೆ. ಕರ್ನಾಟಕ ಅಷ್ಟೇ ಅಲ್ಲದೆ ದೇಶದ ವಿವಿಧ ರಾಜ್ಯಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದೆ. ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ, ಶಾಲಾ ಕಾಲೇಜು ಕುರಿತು, 50:50 ನಿಯಮ ಅನ್ವಯಿಸುವ ಬಗ್ಗೆ ನೂತನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 2 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ವರದಿ ಆಗಿದೆ. ಈ ಮಧ್ಯೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಗೂ ಕೊರೊನಾ ಪಾಸಿಟಿವ್ ಆಗಿದೆ.

ಒಂದೆಡೆ ಕರ್ನಾಟಕ ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಪಾದಯಾತ್ರೆ ನಡೆಸಲು ಮುಂದಾಗಿದೆ. ಈ ಬಗ್ಗೆ ಇಂದು (ಜನವರಿ 4) ಕಾಂಗ್ರೆಸ್ ಸಭೆ ಕೂಡ ನಡೆಸಿದೆ. ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಏನೇ ಆದರೂ ಮೇಕೆದಾಟು ಪಾದಯಾತ್ರೆ ನಡೆಸಿಯೇ ತೀರುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಏನೇ ಮಾಡಿದ್ರೂ ಪಾದಯಾತ್ರೆ ನಿಲ್ಲಿಸಲ್ಲ. ಕೇಸ್ ಆದ್ರೂ ದಾಖಲಿಸಲಿ, ಅರೆಸ್ಟ್ ಬೇಕಾದ್ರೂ ಮಾಡಲಿ. ಮೇಕೆದಾಟು ಜಾರಿಗಾಗಿ ಪಾದಯಾತ್ರೆ ನಡೆದೇ ನಡೆಯುತ್ತೆ. ಬಿಜೆಪಿಯವರು ಜನಾಶೀರ್ವಾದ ಯಾತ್ರೆ ಮಾಡಬಹುದು. ನಾವು ನೀರಿಗಾಗಿ ಪಾದಯಾತ್ರೆ ಮಾಡಬಾರದಾ? ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ.

ರೆಡ್​ ಅಲರ್ಟ್ ಅಡಿ ಬಂದಿರುವ ಬೆಂಗಳೂರು ಮಹಾನಗರ ಬೆಂಗಳೂರಿನಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ ಬೆಂಗಳೂರು ಮಹಾನಗರ ರೆಡ್​ ಅಲರ್ಟ್ ಅಡಿ ಬಂದಿದೆ. ಕರ್ನಾಟಕ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ ಆಗುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬೆಂಗಳೂರಿನ ಪಾಸಿಟಿವಿಟಿ ರೇಟ್, ಜಿಲ್ಲೆಗಳ ಪಾಸಿಟಿವಿಟಿ ರೇಟ್​ ಬಗ್ಗೆ ಪವರ್ ಪಾಯಿಂಟ್ ಪ್ರೆಸೆಂಟೇಷನ್​ ಮೂಲಕ ಸಿಎಂಗೆ ವಿವರಣೆ ನೀಡಲಾಗಿದೆ. ಬೆಂಗಳೂರಿನ ವಲಯವಾರು ಪಾಸಿಟಿವಿಟಿ ರೇಟ್​ ಬಗ್ಗೆ ವಿವರಣೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ರಾಜ್ಯದಲ್ಲಿ ಬೆಡ್ ಸ್ಟೇಟಸ್ ಬಗ್ಗೆ ಮಾಹಿತಿ ಪಡೆಯಲಾಗಿದೆ. ಎಷ್ಟು ಬೆಡ್ ವ್ಯವಸ್ಥೆ ಇದೆ‌‌. ಹೆಚ್ಚುವರಿಯಾಗಿ ಎಷ್ಟು ಬೆಡ್ ಹೆಚ್ಚಿಸಬೇಕು. ಬೆಡ್ ಗಳನ್ನ ಹೆಚ್ಚಳ ಮಾಡಿಕೊಳ್ಳ ಬೇಕು ಎಂದು ತಜ್ಞರಿಂದ ಮಾಹಿತಿ ಲಭ್ಯವಾಗಿದೆ. ಆಕ್ಸಿಜನ್ ಬೆಡ್​ಗಳ ಲಭ್ಯತೆ ಸದ್ಯಕ್ಕೆ ಕೊರತೆ ಇಲ್ಲ. ಕೊವಿಡ್ ಕೇರ್ ಸೆಂಟರ್ ಗಳನ್ನೂ ಪ್ರಾರಂಭಿಸಬೇಕು. ಈಗ ನಿಧಾನವಾಗಿ ಆಸ್ಪತ್ರೆ ಬೆಡ್​ಗಳು ಭರ್ತಿ ಆಗುತ್ತಿವೆ. ಇದುವರೆಗೆ ಸರಾಸರಿ ಶೇಕಡಾ 5ರಷ್ಟು ಆಸ್ಪತ್ರೆ ಬೆಡ್ ಭರ್ತಿ ಆಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 2,479 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು

ಇದನ್ನೂ ಓದಿ: ಬೆಂಗಳೂರಿನಲ್ಲಿ 2 ಸಾವಿರ ಗಡಿ ದಾಟಿದ ಕೊರೊನಾ ಕೇಸ್​; 24 ಗಂಟೆಯಲ್ಲಿ ಕೊವಿಡ್ ಪ್ರಕರಣಗಳು​ ದ್ವಿಗುಣ

Published On - 8:15 pm, Tue, 4 January 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್