ಬೆಂಗಳೂರು: ಕರ್ನಾಟಕದಲ್ಲಿ ಶನಿವಾರ ಒಟ್ಟು 787 ಮಂದಿಯಲ್ಲಿ ಕೊವಿಡ್ ಸೋಂಕು ದೃಢಪಟ್ಟಿದೆ. ಒಟ್ಟು 11 ಮಂದಿ ಮೃತಪಟ್ಟಿದ್ದಾರೆ. 775 ಜನರು ಕೊವಿಡ್ನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 11 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇ 0.55 ಇದ್ದರೆ, ಸಾವಿನ ಪ್ರಮಾಣ ಶೇ 1.39 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,72,620 ಮಂದಿಯಲ್ಲಿ ಕೊವಿಡ್ ದೃಢಪಟ್ಟಿದ್ದರೆ, 29,21,567 ಮಂದಿ ಚೇತರಿಸಿಕೊಂಡಿದ್ದಾರೆ. 37,717 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 13,307 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು ನಗರದಲ್ಲಿ ಒಟ್ಟು 276 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 279 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 12,45,235 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,21,669 ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 7436 ಸಕ್ರಿಯ ಪ್ರಕರಣಗಳಿವೆ. ಒಟ್ಟು 16,129 ಮಂದಿ ಮೃತಪಟ್ಟಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕು?
ಬೆಂಗಳೂರು ನಗರ 276, ದಕ್ಷಿಣ ಕನ್ನಡ 127, ಉಡುಪಿ 68, ಮೈಸೂರು 65, ತುಮಕೂರು 29, ಚಿಕ್ಕಮಗಳೂರು, ಉತ್ತರ ಕನ್ನಡ 27, ಕೊಡಗು 25, ಬೆಳಗಾವಿ, ಕೋಲಾರ 22, ಶಿವಮೊಗ್ಗ 21, ಬೆಂಗಳೂರು ಗ್ರಾಮಾಂತರ 17, ಮಂಡ್ಯ 9, ಚಿತ್ರದುರ್ಗ 7, ಚಾಮರಾಜನಗರ, ಚಿಕ್ಕಬಳ್ಳಾಪುರ 6, ರಾಮನಗರ 2, ದಾವಣಗೆರೆ, ಹಾವೇರಿ, ಕಲಬುರಗಿ, ಯಾದಗಿರಿ, ಬಳ್ಳಾರಿ, ರಾಯಚೂರು 1.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ಬೆಂಗಳೂರು ನಗರ 4, ಬೆಳಗಾವಿ, ಚಿಕ್ಕಮಗಳೂರು 2, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ ತಲಾ 1.
(Karnataka Corona Numbers 787 Infected 11 Deaths)
ಇದನ್ನೂ ಓದಿ: ಕೊವಿಡ್ ನಂತರ ಪರಿಸ್ಥಿತಿ ಸುಧಾರಿಸಿಕೊಳ್ಳುತ್ತಿದೆ; ಜನರಿಗೆ ತೊಂದರೆ ಆಗಬಾರದು: ಭಾರತ್ ಬಂದ್ ಬಗ್ಗೆ ಸಿಎಂ ಬೊಮ್ಮಾಯಿ
ಇದನ್ನೂ ಓದಿ: ಅಮೆರಿಕಾದ ಶ್ವೇತ ಭವನದಲ್ಲಿ ಕ್ವಾಡ್ ರಾಷ್ಟ್ರಗಳ ನಾಯಕರ ಸಭೆ; ಚೀನಾ, ಕೊವಿಡ್, ಹವಾಮಾನ, ರಕ್ಷಣಾ ವಿಚಾರಗಳ ಚರ್ಚೆ