AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಪರಿಹಾರ: 2 ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ: ಸುಪ್ರೀಂಗೆ ಕೇಂದ್ರ ಸರ್ಕಾರ ಭರವಸೆ

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, "ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್​ಗೆ ಬರಬೇಕಾ?" ಎಂದು ಖಾರವಾಗಿ ಪ್ರಶ್ನಿಸಿತು. ಇದಕ್ಕೆ, "ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ" ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್‌ಜಿ ಮೆಹ್ತಾ ಕೋರ್ಟ್​ ತಿಳಿಸಿದರು.

ಬರ ಪರಿಹಾರ: 2 ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ: ಸುಪ್ರೀಂಗೆ ಕೇಂದ್ರ ಸರ್ಕಾರ ಭರವಸೆ
ಸುಪ್ರೀಂಕೋರ್ಟ್​
TV9 Web
| Edited By: |

Updated on:Apr 08, 2024 | 1:36 PM

Share

ನವದೆಹಲಿ/ಬೆಂಗಳೂರು, ಏಪ್ರಿಲ್​ 08: ಕೇಂದ್ರ ಸರ್ಕಾರದಿಂದ (Union Government) ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ (Karnataka Government) ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್​ಗೆ ಬರಬೇಕಾ?” ಎಂದು ಕೇಂದ್ರ ಸರ್ಕಾರಕ್ಕೆ ಖಾರವಾಗಿ ಪ್ರಶ್ನಿಸಿತು. ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್‌ಜಿ ಮೆಹ್ತಾ ಕೋರ್ಟ್​ ತಿಳಿಸಿದರು.

ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಕಪಿಲ್ ಸಿಬಲ್​ ವಾದ: ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್​ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್​: ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್​ಗೆ ಬರಬೇಕಾ? ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿತು.

ಕೇಂದ್ರ ಸರ್ಕಾರದ ಪರ ವಕೀಲರ ವಾದ: ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ನ್ಯಾಯ ಪೀಠಕ್ಕೆ ತಿಳಿಸಿದರು.

ನೋಟಿಸ್ ಕೊಡಬೇಡಿ ಅಂತ ಕೂಡ ಕೇಳಿಕೊಂಡಿದ್ದಾರೆ: ಕೃಷ್ಣಭೈರೇಗೌಡ

ವಾದ ಬಗೆಹರಿಸುತ್ತೇವೆ ಎಂದು ಸುಪ್ರೀಂಕೋರ್ಟ್​ನಲ್ಲಿ ಕೇಂದ್ರ ಸರ್ಕಾರ ಹೇಳಿದೆ. ಅಟಾರ್ನಿ ಜನರಲ್‌, ಸಾಲಿಸಿಟರ್ ಜನರಲ್ ಹಾಜರಾಗಿದ್ದರು. ಎರಡು ವಾರದಲ್ಲಿ ಪ್ರತಿಕ್ರಿಯೆ ನೀಡುತ್ತೇವೆ ಎಂದಿದ್ದಾರೆ. ನೋಟಿಸ್ ಕೊಡಬೇಡಿ ಅಂತ ಕೂಡ ಕೇಳಿಕೊಂಡಿದ್ದಾರೆ. ಎಲ್ಲಿ ಕೇಂದ್ರಕ್ಕೆ ಮುಜುಗರ ಆಗುತ್ತೋ ಎಂಬ ಆತಂಕವಿದೆ. ಹಾಗಾಗಿ ನೋಟಿಸ್ ಕೊಡಬೇಡಿ ಎಂದು ಕೇಂದ್ರ ಕೇಳಿದೆ ಎಂದು ದೆಹಲಿಯಲ್ಲಿ ಸಚಿವ ಕೃಷ್ಣಭೈರೇಗೌಡ ಹೇಳಿದರು.

ಇದನ್ನೂ ಓದಿ: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಅಮಿತ್ ಶಾ, ನಿರ್ಮಲಾ ಸೀತಾರಾಮನ್​ ಮಹಾನ್ ಸುಳ್ಳುಗಾರರು: ಗುಂಡೂರಾವ್​

ಅಮಿತ್ ಶಾ, ನಿರ್ಮಲಾ ಸೀತಾರಾಮನ್​ ಮಹಾನ್ ಸುಳ್ಳುಗಾರರು. ಕರ್ನಾಟಕ ತಡವಾಗಿ ಅರ್ಜಿ ಸಲ್ಲಿಸಿತು ಅಂತ ಅಮಿತ್ ಶಾ ಹೇಳಿದರು. ಆ ವಾದವನ್ನು ಅಮಿತ್ ಶಾ ಕೋರ್ಟ್ ಮುಂದೆ ಮಂಡಿಸಬೇಕು. ಅಮಿತ್ ಶಾ ರಾಜ್ಯಕ್ಕೆ ಬಂದು ಭಾಷಣ ಮಾಡುವುದಲ್ಲ ಅಫಿಡವಿಟ್ ಸಲ್ಲಿಸಲಿ. ಕೇಂದ್ರ ಸಚಿವ ಅಮಿತ್ ಶಾ ಸತ್ಯ ಒಪ್ಪಿಕೊಂಡರೆ ಜನರು ಕ್ಷಮಿಸುತ್ತಾರೆ. ಇದೊಂದು ಮಲತಾಯಿ ಧೋರಣೆ ಅನ್ನೋದು ಜನರಿಗೆ ಗೊತ್ತಾಗಿದೆ. ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಆರ್.ಅಶೋಕ್, ಬಿಜೆಪಿಯವರು ಇದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್​ಗೆ ಜ್ಞಾನದ ಕೊರತೆ ಇದೆ. ಹೀಗೆ ಮಾತನಾಡಿದರೆ ವಿಪಕ್ಷ ಸ್ಥಾನಕ್ಕೂ ಮರ್ಯಾದೆ ಇರಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:25 pm, Mon, 8 April 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ