ಬಿವೈ ವಿಜಯೇಂದ್ರಗೆ ಬೆಂಗಾವಲು ವಾಹನ, ಭದ್ರತೆ ಒದಗಿಸಿದ ಸರ್ಕಾರ

| Updated By: ವಿವೇಕ ಬಿರಾದಾರ

Updated on: Nov 13, 2023 | 1:46 PM

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪುತ್ರ, ಶಾಸಕ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರಿಗೆ ತಾತ್ಕಾಲಿಕವಾಗಿ ಬೆಂಗಾವಲು ವಾಹನ ಸೌಲಭ್ಯ ಮತ್ತು ಪೊಲೀಸ್​ ಭದ್ರತೆ ನೀಡಿದೆ.

ಬಿವೈ ವಿಜಯೇಂದ್ರಗೆ ಬೆಂಗಾವಲು ವಾಹನ, ಭದ್ರತೆ ಒದಗಿಸಿದ ಸರ್ಕಾರ
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
Follow us on

ಬೆಂಗಳೂರು ನ.13: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಪುತ್ರ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ (BY Vijayendra) ಬಿಜೆಪಿ ರಾಜ್ಯ ಬಿಜೆಪಿ (BJP) ಘಟಕದ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರಿಗೆ ತಾತ್ಕಾಲಿಕವಾಗಿ ಬೆಂಗಾವಲು ವಾಹನ ಮತ್ತು ಪೊಲೀಸ್​ ಭದ್ರತೆ ನೀಡಿದೆ. ಪದಗ್ರಹಣದ ಬಳಿಕ ಅಧಿಕೃತವಾಗಿ ಸಿಬ್ಬಂದಿ ಸಹಿತ ಬೆಂಗಾವಲು ವಾಹನವನ್ನು ಸರ್ಕಾರ ಒದಗಿಸಲಿದೆ.

ರಾಜ್ಯಾಧ್ಯಕ್ಷರಾಗಿ ನೇಮಕವಾದ ಮೇಲೆ ಶಾಸಕ ಬಿವೈ ವಿಜಯೇಂದ್ರ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿವೈ ವಿಜಯೇಂದ್ರ ಅವರು ಮೊದಲಿಗೆ ಬೂತ ಮಟ್ಟದ ಅಧ್ಯಕ್ಷರನ್ನು ಭೇಟಿಯಾಗಿ ಸಿಹಿ ತಿನ್ನಿಸಿದರು. ಬಳಕಿ ರವಿವಾರ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಂತರ ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದರು.

ಇದನ್ನೂ ಓದಿ: ಮೊದಲ ಸವಾಲು ಎದುರಿಸಲು ನೂತನ ಅಧ್ಯಕ್ಷ ವಿಜಯೇಂದ್ರ ಮೆಗಾ ಪ್ಲ್ಯಾನ್: ಏನದು?

ಇಂದು (ನ.14) ಬಿವೈ ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್​ ಬೊಮ್ಮಾಯಿ, ಎಸ್​ಎಂ ಕೃಷ್ಣ ಅವರನ್ನು ಭೇಟಿಯಾದರು. ಬಳಿಕ ಮಾಜಿ ಪ್ರಧಾನಿ ದೇವೇಗೌಡರ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಈ ವೇಳೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿದ್ದರು.

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಕ್ಕೆ ಸಂತೋಷವಾಗಿದೆ: ಪ್ರಜ್ವಲ್​ ರೇವಣ್ಣ

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಕ್ಕೆ ಸಂತೋಷವಾಗಿದೆ. ಒಂದೆಡೆ ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕವಾಗಿದ್ದು, ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇಮಕವಾಗಿದ್ದಾರೆ. ಇದರಿಂದ ಎರಡು ಪಕ್ಷಗಳಿಗೆ ಮತ್ತಷ್ಟು ಬಲ ಬಂದಿದೆ. ಲೋಕಸಭೆ ಚುನಾವಣೆ ಬಗ್ಗೆ ಹೆಚ್​​ಡಿ ದೇವೇಗೌಡರ ಜೊತೆ ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಹಾಸನದಲ್ಲಿ ಯಾರೇ ಅಭ್ಯರ್ಥಿಯಾದರೂ ನಾನು ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ ಎಂದು ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Mon, 13 November 23