ಹಿಂದಿ ನಾಡಲ್ಲಿ ಫಳಫಳಿಸುತ್ತಿದೆ ಕನ್ನಡ ಫಲಕ! ಎಲ್ಲಿ?
ಕರ್ನಾಟಕ ಸರ್ಕಾರ 2020-21ನ್ನು ಕನ್ನಡ ಕಾಯಕ ವರ್ಷ ಎಂದು ಘೋಷಿಸಿದೆ. ಈ ಬೆನ್ನಲ್ಲೇ ಕರ್ನಾಟಕ ಸರ್ಕಾರ ದೆಹಲಿಯಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ನಾಮಫಲಕವನ್ನು ಅಳವಡಿಸಿದೆ. ಇದು ದೆಹಲಿ ಕನ್ನಡಿಗರ ಸಂತಸಕ್ಕೆ ಕಾರಣವಾಗಿದೆ. ದೆಹಲಿ ಕನ್ನಡ ಹಿರಿಯ ಮಾಧ್ಯಮಿಕ ಶಾಲೆಯ ನಾಮಫಲಕವನ್ನು ಅಳವಡಿಸಲಾಗಿದೆ. ಈ ಮಾಹಿತಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರವು ತನ್ನ ಅಧಿಕೃತ ಫೇಸ್ಬುಕ್ ಪುಟದಲ್ಲಿ ಹಂಚಿಕೊಂಡಿದೆ. ಕನ್ನಡ ಭಾಷೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನವೆಂಬರ್ 1ರಂದು ಕನ್ನಡ ಕಾಯಕ ವರ್ಷವನ್ನಾಗಿ ಘೋಷಿಸಿದ್ದರು. ‘ಕನ್ನಡ ಭಾಷೆಯ ಬಳಕೆ […]
ಕರ್ನಾಟಕ ಸರ್ಕಾರ 2020-21ನ್ನು ಕನ್ನಡ ಕಾಯಕ ವರ್ಷ ಎಂದು ಘೋಷಿಸಿದೆ. ಈ ಬೆನ್ನಲ್ಲೇ ಕರ್ನಾಟಕ ಸರ್ಕಾರ ದೆಹಲಿಯಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ನಾಮಫಲಕವನ್ನು ಅಳವಡಿಸಿದೆ. ಇದು ದೆಹಲಿ ಕನ್ನಡಿಗರ ಸಂತಸಕ್ಕೆ ಕಾರಣವಾಗಿದೆ.
ದೆಹಲಿ ಕನ್ನಡ ಹಿರಿಯ ಮಾಧ್ಯಮಿಕ ಶಾಲೆಯ ನಾಮಫಲಕವನ್ನು ಅಳವಡಿಸಲಾಗಿದೆ. ಈ ಮಾಹಿತಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರವು ತನ್ನ ಅಧಿಕೃತ ಫೇಸ್ಬುಕ್ ಪುಟದಲ್ಲಿ ಹಂಚಿಕೊಂಡಿದೆ. ಕನ್ನಡ ಭಾಷೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನವೆಂಬರ್ 1ರಂದು ಕನ್ನಡ ಕಾಯಕ ವರ್ಷವನ್ನಾಗಿ ಘೋಷಿಸಿದ್ದರು.
‘ಕನ್ನಡ ಭಾಷೆಯ ಬಳಕೆ ನವೆಂಬರ್‌ಗಷ್ಟೇ ಸೀಮಿತವಾಗದೆ ವರ್ಷಪೂರ್ತಿ ಆಚರಿಸುವಂತಾಗಬೇಕು. ಬದಲಾದ ಕಾಲಘಟ್ಟದಲ್ಲಿ ಕನ್ನಡವನ್ನು ತಂತ್ರಜ್ಞಾನದ ಭಾಷೆಯನ್ನಾಗಿಸಬೇಕಿದೆ. ಇದಕ್ಕಾಗಿ ಕನ್ನಡ ಕಾಯಕ ವರ್ಷದಲ್ಲಿ ನಾನಾ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದ ರೂಪುರೇಷೆಗಳನ್ನು ಅಂತಿಮಗೊಳಿಸಿ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಹೇಳಿರುವುದನ್ನು ಇಲ್ಲಿ ಉಲ್ಲೇಖಿಸಲಬೇಕಿದೆ. ಒಟ್ಟಿನಲ್ಲಿ ಎಲ್ಲೇ ಇರು ಹೇಗೆ ಇರು ಎಂದೆಂದಿಗೂ ನೀ ಕನ್ನಡಿಗನಾಗಿರು ಎಂಬ ಸಾಲುಗಳನ್ನು ಈ ನಾಮಫಲಕ ನೆನಪಿಸುವಂತಿದೆ.
https://www.facebook.com/1436646726611343/posts/2874813136128021/