AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದಲ್ಲಿ ತಗ್ಗಿದ ಮಳೆಯ ಅಬ್ಬರ; ಈ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

Karnataka Weather Today: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ತುಂತುರು ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ, ಕರ್ನಾಟಕದ ಈ 8 ಜಿಲ್ಲೆಗಳಿಗೆ ಇಂದು 'ಹಳದಿ ಅಲರ್ಟ್' ಘೋಷಿಸಲಾಗಿದೆ.

Karnataka Rain: ಕರ್ನಾಟಕದಲ್ಲಿ ತಗ್ಗಿದ ಮಳೆಯ ಅಬ್ಬರ; ಈ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ
ಮಳೆ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 13, 2022 | 5:49 AM

Share

ಬೆಂಗಳೂರು: ಕರ್ನಾಟಕದಲ್ಲಿ ಹಗುರ ಮಳೆಯ (Rainfall) ಮುಂದುವರೆದಿದೆ. ರಾಜ್ಯಾದ್ಯಂತ ಆ. 15ರವರೆಗೆ ಮಳೆ ಮುಂದುವರೆಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡು, ಕರಾವಳಿಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ (Udupi Rains), ಉತ್ತರ ಕನ್ನಡ (Uttara Kannada Rain) ಮತ್ತು ದಕ್ಷಿಣ ಕನ್ನಡ (Dakshina Kannada Rain) ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಭಾರೀ ಪ್ರಮಾಣದ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ತುಂತುರು ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ, ಕರ್ನಾಟಕದ ಈ 8 ಜಿಲ್ಲೆಗಳಿಗೆ ಇಂದು ‘ಹಳದಿ ಅಲರ್ಟ್’ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆ ಕೊಂಚ ಹೆಚ್ಚಾಗಲಿದೆ. ಉತ್ತರ ಒಳನಾಡಿನ ಧಾರವಾಡ, ಹುಬ್ಬಳ್ಳಿ, ಬೆಳಗಾವಿ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಇನ್ನೆರಡು ದಿನಗಳ ಕಾಲ ಮಧ್ಯ ಭಾರತದಾದ್ಯಂತ ಭಾರೀ ಮಳೆ ಮುಂದುವರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಎಂ. ಮೊಹಾಪಾತ್ರ ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Karnataka Rain: ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ; ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ

ಕರಾವಳಿ ಕರ್ನಾಟಕ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣದಿಂದ ಭಾರೀ ಪ್ರಮಾಣದ ಗುಡುಗು ಸಹಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಮಲೆನಾಡು ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಮುಂದಿನ ಕೆಲವು ದಿನಗಳಲ್ಲಿ, ದಕ್ಷಿಣ ಭಾರತದಲ್ಲಿ ವಿಶೇಷವಾಗಿ ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ತೀವ್ರವಾದ ಮಳೆ ಬೀಳಲಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?: ಇನ್ನೆರಡು ದಿನಗಳಲ್ಲಿ ಉತ್ತರ ಪ್ರದೇಶ, ಬಿಹಾರ, ಈಶಾನ್ಯ ರಾಜ್ಯಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಗುಜರಾತ್ ಪ್ರದೇಶ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ವಿದರ್ಭ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಕರ್ನಾಟಕದಾದ್ಯಂತ ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಬಿಹಾರ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಸೌರಾಷ್ಟ್ರ, ಕಚ್, ಮರಾಠವಾಡ, ಕರಾವಳಿ ಆಂಧ್ರಪ್ರದೇಶ, ಕೇರಳದಲ್ಲಿ ಚದುರಿದ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ರಾಯಲಸೀಮಾ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಕೂಡ ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ