Karnataka Rain: ಕರ್ನಾಟಕದ ಕರಾವಳಿ, ಕೊಡಗು, ಚಿಕ್ಕಮಗಳೂರಿನಲ್ಲಿ ಇಂದು ಮಳೆ ಸಾಧ್ಯತೆ

Weather Forecast: ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಇಂದು ಕರ್ನಾಟಕದ ಕರಾವಳಿ ಸೇರಿದಂತೆ ಅನೇಕ ಭಾಗದಲ್ಲಿ ಮಳೆಯಾಗಲಿದೆ.

Karnataka Rain: ಕರ್ನಾಟಕದ ಕರಾವಳಿ, ಕೊಡಗು, ಚಿಕ್ಕಮಗಳೂರಿನಲ್ಲಿ ಇಂದು ಮಳೆ ಸಾಧ್ಯತೆ
ಮಳೆಯ ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 24, 2022 | 5:49 AM

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದೆ. ಬೆಂಗಳೂರು (Bengaluru Rain) ಸೇರಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ (Tamil Nadu Rains) ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಇಂದು ಕರ್ನಾಟಕದ ಕರಾವಳಿ ಸೇರಿದಂತೆ ಅನೇಕ ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇಂದು ಕೂಡ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುವ್ಯ ಮತ್ತು ಪೂರ್ವ ಭಾರತದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ರಾಯಲಸೀಮೆ ಮತ್ತು ನೆರೆಯ ಪ್ರದೇಶಗಳಲ್ಲಿ ಚಂಡಮಾರುತದ ಪರಿಚಲನೆ ಇರುವುದರಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೇರಳ, ಮೇಘಾಲಯ ಮತ್ತು ತ್ರಿಪುರಾದಲ್ಲಿ ಕೂಡ ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆಯ ಆರ್ಭಟ; ಕೇರಳಕ್ಕೆ ಹಳದಿ ಅಲರ್ಟ್​

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಭಾರತದ ಕೇರಳ, ಕರ್ನಾಟಕದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ತಮಿಳುನಾಡಿನಲ್ಲಿ ಮಿಂಚು, ಗಾಳಿ ಸಹಿತ ಚದುರಿದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದ್ದು, ಹಿಮಾಚಲ ಪ್ರದೇಶ, ಉತ್ತಾರಖಂಡ, ಪಂಜಾಬ್‌ ಭಾಗಗಳಲ್ಲೂ ಸಾಧಾರಣ ಮಳೆಯಾಗುವ ಸೂಚನೆ ಇದೆ. ಪಶ್ಚಿಮ ರಾಜಸ್ಥಾನದಲ್ಲಿ ಇಂದು ಬಿರುಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ. ಇಂದು ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Delhi Rain: ದೆಹಲಿಯಲ್ಲಿ ಮಳೆಯಿಂದ ಮನೆ ಕುಸಿದು 8 ಜನರಿಗೆ ಗಾಯ; ನಿಲ್ಲದ ವರುಣನ ಆರ್ಭಟ

ಜಮ್ಮು-ಕಾಶ್ಮೀರ, ಲಡಾಖ್ ಮತ್ತು ಪಂಜಾಬ್‌ನ ಉತ್ತರ ಭಾಗಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದೆ. ಹಿಮಾಚಲ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಅಸ್ಸಾಂನಲ್ಲಿ ಸುರಿಯುತ್ತಿರುವ ಮಳೆಯಿಂದ 24 ಜನ ಸಾವನ್ನಪ್ಪಿದ್ದಾರೆ. ಒಟ್ಟು 24 ಸಾವುಗಳಲ್ಲಿ 19 ಸಾವು ಪ್ರವಾಹದಿಂದಾಗಿ ಸಂಭವಿಸಿದೆ. ಐವರು ವಿವಿಧ ಭೂಕುಸಿತ ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇದಲ್ಲದೆ, ರಾಜ್ಯದ 34 ಜಿಲ್ಲೆಗಳಲ್ಲಿ 2,095 ಹಳ್ಳಿಗಳಲ್ಲಿ 7.19 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೊಳಗಾಗಿದ್ದಾರೆ. ಪ್ರವಾಹದಿಂದಾಗಿ 95,473 ಹೆಕ್ಟೇರ್‌ ಬೆಳೆ ಹಾನಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ