Monsoon 2021: ದೆಹಲಿಗೆ ಇಂದು ಮುಂಗಾರು ಪ್ರವೇಶ; ಕರ್ನಾಟಕದಲ್ಲಿ ಇಂದಿನಿಂದ ತೀವ್ರಗೊಳ್ಳಲಿದೆ ಮಳೆ

Karnataka Weather : ಕರ್ನಾಟಕದ ಕರಾವಳಿ ಪ್ರದೇಶದಲ್ಲೂ ಕೂಡ ಶನಿವಾರವೇ ರೆಡ್​ ಅಲರ್ಟ್​ ಜಾರಿಯಾಗಿದೆ. ಉಳಿದಂತೆ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

Monsoon 2021: ದೆಹಲಿಗೆ ಇಂದು ಮುಂಗಾರು ಪ್ರವೇಶ; ಕರ್ನಾಟಕದಲ್ಲಿ ಇಂದಿನಿಂದ ತೀವ್ರಗೊಳ್ಳಲಿದೆ ಮಳೆ
ಮಳೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Lakshmi Hegde

Updated on:Jul 11, 2021 | 11:15 AM

ರಾಷ್ಟ್ರರಾಜಧಾನಿ ದೆಹಲಿ ಸೇರಿ, ದೇಶದ ವಾಯುವ್ಯ ಭಾಗದ ಪ್ರದೇಶಗಳಿಗೆ ಇಂದು ಮಾನ್ಸೂನ್ (Monsoon 2021) ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದೆಹಲಿಗೆ ಸಾಮಾನ್ಯವಾಗಿ ಜೂ.29ರ ಹೊತ್ತಿಗೆಲ್ಲ ಮುಂಗಾರು ಪ್ರವೇಶ ಆಗುತ್ತದೆ. ಆದರೆ ಈ ಬಾರಿ ವಿಳಂಬ ಆಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೆಚ್ಚಿನ ಶಾಖ, ಇಬ್ಬನಿಯ ವಾತಾವರಣ ಇತ್ತು. ಶುಕ್ರವಾರ ದೆಹಲಿಯಲ್ಲಿ ಮುಂಗಾರು ಪೂರ್ವ ಮಳೆಯಾಗಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಮಳೆಯಾಗಲಿಲ್ಲ.

ಇಂದು ದೆಹಲಿಯನ್ನು ಪ್ರವೇಶಿಸುವ ನೈಋತ್ಯ ಮಾನ್ಸೂನ್​ ಜು.13ರೊಳಗೆ ದೆಹಲಿ, ಹರ್ಯಾಣ, ಪಂಜಾಬ್​​ನ ಭಾಗಗಳಲ್ಲಿ ತೀವ್ರಗೊಳ್ಳಲಿದ್ದು, ಹೆಚ್ಚಿನ ಮಳೆ ತರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಈ ಮಧ್ಯೆ ದೆಹಲಿ ಗರಿಷ್ಠ ತಾಪಮಾನ ಶನಿವಾರ 39.8 ಡಿಗ್ರಿ ಸೆಲ್ಸಿಯಸ್​​ನಷ್ಟಿತ್ತು. ದೆಹಲಿಯಲ್ಲಿ ಕಳೆದ 15ವರ್ಷಗಳಲ್ಲಿ ಇದೇ ತುಂಬ ವಿಳಂಬಿತ ಮಾನ್ಸೂನ್​. ಇಷ್ಟು ದಿನಗಳ ಕಾಲ ಮುಂದೂಡಲ್ಪಟ್ಟಿರಲಿಲ್ಲ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಕುಲದೀಪ್​ ಶ್ರೀವತ್ಸ ತಿಳಿಸಿದ್ದಾರೆ. ಈ ಮಧ್ಯೆ ಕೇರಳದಲ್ಲಿ ಸಿಕ್ಕಾಪಟೆ ಮಳೆಯಾಗುತ್ತಿದ್ದು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಇಂದು ರೆಡ್​ಅಲರ್ಟ್​ ಘೋಷಣೆಯಾಗಿದೆ.

ಕರ್ನಾಟಕ ಹವಾಮಾನ (Karnataka Weather) ಕರ್ನಾಟಕದ ಕರಾವಳಿ ಪ್ರದೇಶದಲ್ಲೂ ಕೂಡ ಶನಿವಾರವೇ ರೆಡ್​ ಅಲರ್ಟ್​ ಜಾರಿಯಾಗಿದೆ. ಉಳಿದಂತೆ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ರಾಜ್ಯ ಹಲವು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು-ಮಿಂಚು ಸಹಿತ ಸಿಕ್ಕಾಪಟೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕರ್ನಾಟಕದ ಕರಾವಳಿ ತೀರಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡಗಳಲ್ಲಿ ರೆಡ್​ ಅಲರ್ಟ್​, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಜಾರಿಯಾಗಿದೆ. ಇನ್ನುಳಿದ ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೀದರ್​, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇದೆ. ಇನ್ನೂ 24ಗಂಟೆಗಳ ಕಾಲ ಇದು ಮುಂದುವರಿಯಲಿದೆ.

ಜುಲೈ 11ರ ಹೊತ್ತಿಗೆ ಅರೇಬಿಯನ್ ಸಮುದ್ರದಲ್ಲಿ ಮಾನ್ಸೂನ್​ ಬಲಗೊಳ್ಳಲಿದ್ದು, ಬಂಗಾಳಕೊಲ್ಲಿಯ ಪಶ್ಚಿಮ, ಮಧ್ಯ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಕಡಿಮೆ ಒತ್ತಡ ಪ್ರದೇಶ ರಚನೆಯಾಗಲಿದೆ. ಈ ಕಾರಣಕ್ಕೆ ಕರ್ನಾಟಕದಲ್ಲಿ ಇಂದಿನಿಂದ ಮಾನ್ಸೂನ್​ ತೀವ್ರಗೊಂಡು, ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Petrol Price Today: ಶತಕ ಬಾರಿಸಿ ಮುನ್ನುಗ್ಗುತ್ತಲೇ ಇದೆ ಇಂಧನ ದರ; ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಪರಿಶೀಲಿಸಿ

Karnataka Weather IMD issues red alert in coastal districts Of Karnataka

Published On - 9:52 am, Sun, 11 July 21

ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಮುಸ್ಲಿಮರ ಕೊಲ್ಲುವಂತಹ ದಿನ ಬರುತ್ತದೆ ಎಂದ ಈಶ್ವರಪ್ಪ ವಿರುದ್ಧ ಕೇಸ್ ಬುಕ್​!
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಚನ್ನಪಟ್ಟಣದಲ್ಲಿ ಯೋಗೇಶ್ವರ್​​ರನ್ನು ಎದುರಿಸುವವರಿಲ್ಲ: ಬಂಡಿಸಿದ್ದೇಗೌಡ
ಸಿಎಂ ಹೀಗೆಲ್ಲ ಮಾತಾಡುತಿದ್ದರೆ ಜನ ತಲೆ ಕೆಟ್ಟಿದೆ ಅಂತಾರೆ: ಕುಮಾರಸ್ವಾಮಿ
ಸಿಎಂ ಹೀಗೆಲ್ಲ ಮಾತಾಡುತಿದ್ದರೆ ಜನ ತಲೆ ಕೆಟ್ಟಿದೆ ಅಂತಾರೆ: ಕುಮಾರಸ್ವಾಮಿ
ಟಿವಿ9 ಸ್ವೀಟ್ ಹೋಂ ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಚಾಲನೆ
ಟಿವಿ9 ಸ್ವೀಟ್ ಹೋಂ ರಿಯಲ್ ಎಸ್ಟೇಟ್ ಎಕ್ಸ್​ಪೋಗೆ ಚಾಲನೆ
‘ಸಾರಿ ಹನುಮಂತು’, ಅಳುತ್ತ ಕ್ಷಮೆ ಕೇಳಿದ ಗೌತಮಿ
‘ಸಾರಿ ಹನುಮಂತು’, ಅಳುತ್ತ ಕ್ಷಮೆ ಕೇಳಿದ ಗೌತಮಿ
ಜಾಗೃತಿ ಅಭಿಯಾನದಲ್ಲಿ ರಾಜ್ಯಾಧ್ಯಕ್ಷರೂ ಭಾಗವಹಿಸುತ್ತಾರೆ: ಅರವಿಂದ ಲಿಂಬಾವಳಿ
ಜಾಗೃತಿ ಅಭಿಯಾನದಲ್ಲಿ ರಾಜ್ಯಾಧ್ಯಕ್ಷರೂ ಭಾಗವಹಿಸುತ್ತಾರೆ: ಅರವಿಂದ ಲಿಂಬಾವಳಿ