Weather Today: ತಮಿಳುನಾಡು, ಕೇರಳ, ಅಸ್ಸಾಂ, ಅರುಣಾಚಲ ಪ್ರದೇಶ ಸೇರಿ ಹಲವೆಡೆ ಇನ್ನೆರಡು ದಿನ ಭಾರೀ ಮಳೆ

Rain Updates: ಭಾರತದ ದಕ್ಷಿಣ ಭಾಗದ ಕಡೆಗೆ ಪೂರ್ವ ಮಾರುತಗಳು ತಮಿಳುನಾಡು ಮತ್ತು ಕೇರಳದ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆಯನ್ನು ತರುವ ನಿರೀಕ್ಷೆಯಿದೆ.

Weather Today: ತಮಿಳುನಾಡು, ಕೇರಳ, ಅಸ್ಸಾಂ, ಅರುಣಾಚಲ ಪ್ರದೇಶ ಸೇರಿ ಹಲವೆಡೆ ಇನ್ನೆರಡು ದಿನ ಭಾರೀ ಮಳೆ
ಮಳೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 12, 2022 | 6:05 AM

ಬೆಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಸಂಪೂರ್ಣವಾಗಿ ಮಳೆಗಾಲ (Rainfall) ಮುಗಿದು ಕೆಲವು ಜಿಲ್ಲೆಗಳಲ್ಲಿ ಚಳಿ ಶುರುವಾಗಿದೆ. ಹಲವೆಡೆ ಸೆಖೆ ಕೂಡ ಆರಂಭವಾಗಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ 2 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್, ಪಶ್ಚಿಮ ಬಂಗಾಳ, ಸಿಕ್ಕಿಂ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ತಮಿಳುನಾಡಿನ ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಭಾರತದ ದಕ್ಷಿಣ ಭಾಗದ ಕಡೆಗೆ ಪೂರ್ವ ಮಾರುತಗಳು ತಮಿಳುನಾಡು ಮತ್ತು ಕೇರಳದ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆಯನ್ನು ತರುವ ನಿರೀಕ್ಷೆಯಿದೆ.

ಫೆ. 13ರಿಂದ 15ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿ ಇರಲಿದೆ. ಫೆಬ್ರವರಿ 13-15ರ ವೇಳೆಗೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿಗಳಲ್ಲಿ ದಟ್ಟವಾದ ಮಂಜು ಹೆಚ್ಚಾಗಲಿದೆ. ಮುಂದಿನ 2 ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಚದುರಿದ ಮಳೆಯಾಗುವ ಮುನ್ಸೂಚನೆಯಿದೆ.

ಮುಂದಿನ ಎರಡು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇಂದು ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇನ್ನೆರಡು ದಿನ ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಬಲವಾದ ಗಾಳಿ ಕಂಡುಬರುತ್ತದೆ.

ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಜನವರಿ 13 ಮತ್ತು 14ರಂದು ಚದುರಿದ ಮಳೆ ಅಥವಾ ಹಿಮಪಾತ ಉಂಟಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮಪಾತವಾಗಲಿದೆ. ಫೆಬ್ರವರಿ 17ರಿಂದ 21ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ.

ಇದನ್ನೂ ಓದಿ: Weather Today: ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ ಸೆಖೆ ಶುರು; ಈ ರಾಜ್ಯಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ

Weather Today: ಪಂಜಾಬ್, ದೆಹಲಿ ಸೇರಿ 15 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ