ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯ ಅಬ್ಬರ (Bengaluru Rains) ಕಡಿಮೆಯಾಗಿದೆ. ಆದರೆ, ಚಳಿ ಮುಂದುವರೆದಿದೆ. ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಹಲವೆಡೆ ಕಳೆದೊಂದು ವಾರದಿಂದ ಹಗುರ ಮಳೆಯಾಗಿತ್ತು. ಇಂದು ಕೂಡ ಮಲೆನಾಡು ಮತ್ತು ಕರಾವಳಿಯಲ್ಲಿ ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಇದೀಗ ಮಳೆ ಕಡಿಮೆಯಾಗಿದ್ದು, ಇಂದಿನಿಂದ ಮತ್ತೆ ಚಳಿ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಉಳಿದ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಿತ್ತು. ಮೈಸೂರಿನಲ್ಲಿ ಇಂದಿನಿಂದ ಡಿ. 4ರವರೆಗೂ ಮಳೆಯಾಗಲಿದೆ. ಚಳಿಯ ಜೊತೆಗೆ ತುಂತುರು ಮಳೆಯೂ ಮುಂದುವರೆಯುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದು ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಇದನ್ನೂ ಓದಿ: Karnataka Rain: ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ; ಮಲೆನಾಡಿನಲ್ಲಿ ಹಗುರ ಮಳೆ ಸಾಧ್ಯತೆ
ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಇನ್ನಿತರ ಪ್ರದೇಶಗಳಲ್ಲಿ ತುಂತುರು ಮಳೆಯ ವಾತಾವರಣ ಕಂಡು ಬರಲಿದೆ. ಬೆಂಗಳೂರು ನಗರ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವೆಡೆ ಬೆಳಗ್ಗೆ ಚಳಿ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇಂದು ತುಂತುರು ಮಳೆ ಮತ್ತು ಬೆಳಗ್ಗೆ ಚಳಿಯ ವಾತಾವರಣ ಕಂಡು ಬರಲಿದೆ.
ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಸೇರಿದಂತೆ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಚದುರಿದ ಮಳೆ ಬೀಳಬಹುದು. ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಕೂಡ ಮಳೆಯಾಗುವ ಮುನ್ಸೂಚನೆ ಇದೆ. ಇಂದಿನಿಂದ 2 ದಿನಗಳ ಕಾಲ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಅಂಡಮಾನ್ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ವಾಯುವ್ಯ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Weather Today: ಕರ್ನಾಟಕದ ಹಲವೆಡೆ ಇಂದು ಚಳಿಯ ಜೊತೆ ತುಂತುರು ಮಳೆ ಸಾಧ್ಯತೆ
ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆ ಸುರಿಯುವ ನಿರೀಕ್ಷೆಯಿದೆ. ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರ ಪ್ರದೇಶ, ಯಾನಂ, ರಾಯಲಸೀಮಾ, ತೆಲಂಗಾಣ, ಕೇರಳ, ಮಾಹೆ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಮತ್ತು ಮಧ್ಯ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಮೇಲೆ ಮುಂಜಾನೆ ದಟ್ಟವಾದ ಮಂಜು ಕವಿಯುವ ಸಾಧ್ಯತೆಯಿದೆ. ಇನ್ನುಳಿದ ಪ್ರದೇಶಗಳಲ್ಲಿ ಒಣ ಹವಾಮಾನ ಇರಲಿದೆ.