ಏಕ್ ಭಾರತ್ ಶ್ರೇಷ್ಠ್ ಭಾರತ್: ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ -ಪ್ರಧಾನಿ ಮೋದಿ
ಗುಜರಾತ್ನ ಅಹಮದಾಬಾದ್‌ನಲ್ಲಿಂದು ಕನ್ನಡ ಸಂಘದ 75 ನೇ ವಾರ್ಷಿಕೋತ್ಸವದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪಾಲ್ಗೊಂಡಿರುವುದನ್ನು ಉಲ್ಲೇಖಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ. ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು(Narendra Modi) ಟ್ವೀಟ್ ಮಾಡಿದ್ದಾರೆ.
ಗುಜರಾತ್ನ ಅಹಮದಾಬಾದ್‌ನಲ್ಲಿಂದು ಕನ್ನಡ ಸಂಘದ 75 ನೇ ವಾರ್ಷಿಕೋತ್ಸವದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪಾಲ್ಗೊಂಡಿರುವುದನ್ನು ಉಲ್ಲೇಖಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ ಎಂದು ಅಭಿಪ್ರಾಯ ಪಟ್ಟಿರುವ ಅವರು, ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ” ಎಂದಿದ್ದಾರೆ.
ಅಹಮದಾಬಾದ್‌ನಲ್ಲಿಂದು ನಡೆದ ಕನ್ನಡ ಸಂಘದ 75ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು, ಕರ್ನಾಟಕ ಭವನ ನಿರ್ಮಾಣಕ್ಕೆ ಸ್ಥಳ ನೀಡುವಂತೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಮನವಿ ಮಾಡಿದ್ದರು. ಗುಜರಾತ್ ಸಿಎಂ ಗೆ ಮನವಿ ಮಾಡಿದ ಜೋಶಿಯವರು, ಕರ್ನಾಟಕ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಹಾಗು ತಮ್ಮ ವೈಯಕ್ತಿಕ ಸಹಕಾರ ನೀಡುವುದಾಗಿಯೂ ಹೇಳಿದ್ದರು. ಇದನ್ನೂ ಓದಿ: ಅಹಮದಾಬಾದ್ನಲ್ಲಿ ಕರ್ನಾಟಕ ಭವನ ನಿರ್ಮಾಣ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ವಾರ್ಷಿಕೋತ್ಸವದಲ್ಲಿ ಮಾತನಾಡಿದ ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು, ಗುಜರಾತ್ ನ ಕನ್ನಡಿಗರೊಂದಿಗೆ ಎರಡು ರಾಜ್ಯಗಳು ಹೊಂದಿರುವ ವಿಶೇಷ ಬಾಂಧವ್ಯದ ಕುರಿತ ಹಲವು ವಿಚಾರಗಳನ್ನು ಹಂಚಿಕೊಂಡು, ಒಂದೆಡೆ ದೇಶದ ಆಜಾದಿ ಕಾ ಅಮೃತ ಮಹೋತ್ಸವ ನಡೆಯುತ್ತಿದೆ. ಗುಜರಾತ್ ನಲ್ಲಿ ಕನ್ನಡ ಸಂಘದ 75ನೇ ವರ್ಷದ ಸಂಭ್ರಮ ನಡೆಯುತ್ತಿದೆ. ಅಂದಿನ ದಿನಗಳಲ್ಲಿಯೇ ಕನ್ನಡಿಗರು ಗುಜರಾತ್ ರಾಜ್ಯಕ್ಕೆ ಬಂದು, ಇಲ್ಲಿನ ಜನರೊಂದಿಗೆ ಬೆರೆತು, ವ್ಯಾಪಾರ-ವಹಿವಾಟು ನಡೆಸಿ ಗುಜರಾತನ ಏಳಿಗೆಗೆ ಕೊಡುಗೆಗಳನ್ನು ನೀಡಿದ್ದಾರೆ. ಇದು ಶ್ಲಾಘನೀಯ ಕಾರ್ಯ.
ಏಕ ಭಾರತ್, ಶ್ರೇಷ್ಠ ಭಾರತ್.
ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ. ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ! https://t.co/4rbVVzAnJl
— Narendra Modi (@narendramodi) October 8, 2022
ನರ್ಮದಾ ನದಿಯಿಂದ ಕಾವೇರಿ ವರೆಗೆ ಕನ್ನಡ ಹಾಗೂ ಗುಜರಾತಿ ಮಾತನಾಡುವವರಿದ್ದಾರೆ. ಈ ಬಾಂಧವ್ಯ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆರ್ ಎಸ್ ಎಸ್, ಜನ ಸಂಘ ಹಾಗೂ ಬಿಜೆಪಿಯನ್ನು ಕಟ್ಟುವಾಗ ಆರಂಭಿಕ ದಿನಗಳಲ್ಲಿ ನಮಗೆ ಸಹಕಾರ ನೀಡುತ್ತಿದ್ದವರು ಗುಜರಾತಿಗಳು. ಈ ದೃಷ್ಟಿಯಿಂದ, ಈ ಸಮುದಾಯದೊಂದಿಗೆ ನನ್ನ ವಿಶೇಷ ಸಂಬಂಧವಿದೆ. ಇಂದು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶ ಅಭೂತಪೂರ್ವ ಬೆಳವಣಿಗೆ ಕಾಣುತ್ತಿದೆ. 200 ವರ್ಷಗಳ ವರೆಗೆ ನಮ್ಮನ್ನು ಆಳಿ, ದೇಶ ಬಿಟ್ಟು ಹೋಗುವಾಗ ಅಪಹಾಸ್ಯ ಮಾಡಿ, ಈ ದೇಶದ ಏಳಿಗೆ ಸಾಧ್ಯವೇ ಇಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದ ಬ್ರಿಟಿಷರನ್ನು ಹಿಂದಿಕ್ಕಿ ನಾವು ಇಂದು ಐದನೇ ಅತ್ಯಂತ ಪ್ರಬಲ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದೇವೆ.
ಈ ಸಾಧನೆಯಲ್ಲಿ ಕರ್ನಾಟಕ ಹಾಗೂ ಗುಜರಾತ್ ಅತ್ಯಂತ ಮಹತ್ವದ ಕೊಡುಗೆಗಳನ್ನು ನೀಡಿವೆ. 19 ಹಾಗೂ 20ನೇ ಶತಮಾನಗಳು ಪಾಶ್ಚಿಮಾತ್ಯರ ಪಾಲಾಗಿದ್ದರೇ, 21ನೇ ಶತಮಾನ ಭಾರತದ್ದಾಗಿ ಮಾಡುವ ಸಂಕಲ್ಪದೊಂದಿಗೆ ಪ್ರಧಾನಿ ಮೋದಿ ಹಾಗೂ ಶ್ರೀ ಅಮಿತ್ ಶಾ ಅವರ ನೇತೃತ್ವದಲ್ಲಿ ನಾವು ಶ್ರಮಿಸುತ್ತಿದ್ದೇವೆ ಎಂದು ಇದೇ ವೇಳೆ ಪ್ರಲ್ಹಾದ್ ಜೋಶಿ ಹೇಳಿದ್ದರು. ಬಹುಮುಖ್ಯವಾಗಿ ಗುಜರಾತಿಗಳ ಕೊಡುಗೆಗಳ ಬಗ್ಗೆ ಉಲ್ಲೇಖಿಸಿ ಶ್ಲಾಘಿಸಿದ್ದರು. ಈ ಬಗ್ಗೆ ಪ್ರಲ್ಹಾದ ಜೋಶಿಯವರು ಮಾಡಿದ್ದ ಟ್ವೀಟನ್ನು ರೀಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಏಕ್ ಭಾರತ್ ಶ್ರೇಷ್ಠ್ ಭಾರತ್ ಎಂಬ ಸಂದೇಶ ರವಾನಿಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:35 am, Sun, 9 October 22