ದೆಹಲಿ ಆಗಸ್ಟ್ 22: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಶಿಕ್ಷಣ ನೀತಿ (National Education Policy- NEP) ರದ್ದು ಮಾಡುವುದಾಗಿ ಭರವಸೆ ನೀಡಿದ್ದೆವು. ಇದಕ್ಕೆ ನಾವು ಬದ್ಧ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಆಗಸ್ಟ್ 18ರಂದು ಸಾಮಾಜಿಕ ಮಾಧ್ಯಮ X ನಲ್ಲಿ ಟ್ವೀಟ್ ಮಾಡಿದ ಡಿಕೆಶಿ, ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು ಆ ಮಾತಿಗೆ ನಾವು ಬದ್ಧರಾಗಿದ್ದೇವೆ. ಕರ್ನಾಟಕದಲ್ಲೇ ಮೊದಲು ಎನ್ಇಪಿ ಜಾರಿ ಮಾಡುವ ತರಾತುರಿ ಏನಿದೆ? ಗುಜರಾತ್, ಉತ್ತರ ಪ್ರದೇಶದಲ್ಲಿ ಏಕೆ ಎನ್ಇಪಿ ಜಾರಿ ಮಾಡಿಲ್ಲ? ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ. ಅದರಿಂದಾಗಿಯೇ ಇಂದು ಬೆಂಗಳೂರು ಐಟಿ ರಾಜಧಾನಿಯಾಗಿರುವುದು. ರಾಜ್ಯದಲ್ಲಿನ ಅದೆಷ್ಟೋ ಜನ ವಿದೇಶದಲ್ಲಿ ಒಳ್ಳೆ ಸ್ಥಾನದಲ್ಲಿದ್ದಾರೆ, ಅದಕ್ಕೂ ನಮ್ಮ ಶಿಕ್ಷಣ ವ್ಯವಸ್ಥೆಯೇ ಕಾರಣ ಎಂದು ಹೇಳಿದ್ದಾರೆ.
ಇದೀಗ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಎಂಟು ಪ್ರಶ್ನೆಗಳನ್ನು ಟ್ವೀಟ್ ಮಾಡಿದ್ದಾರೆ. ಸಚಿವರ ಟ್ವೀಟ್ ಹೀಗಿದೆ.
Questions for my dear friend @DKShivakumar!
1) Does he and the Congress party oppose early childhood care and education as a part of formal education? Does he not want our children to achieve foundational literacy and numeracy by the time they complete grade 2?
2) Does he… pic.twitter.com/uwje64ynPj
— Dharmendra Pradhan (@dpradhanbjp) August 22, 2023
ನನ್ನ ಗೆಳೆಯ ಡಿಕೆ ಶಿವಕುಮಾರ್ ಅವರಿಗೆ ಪ್ರಶ್ನೆಗಳು
ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಕ್ಬರ್-ಬೀರಬಲ್ ಬುದ್ಧಿವಂತಿಕೆ ಬಳಸಿ ಬಿಜೆಪಿ ನಾಯಕರನ್ನು ಅಣಕಿಸಿದ್ದು ಹೀಗೆ
ಎನ್‌ಇಪಿಯ ಮೇಲಿನ ಇಂತಹ ಅಸಂಬದ್ಧ ಹೇಳಿಕೆಗಳು ದೆಹಲಿಯಲ್ಲಿರುವ ಅವರ ರಾಜಕೀಯ ಯಜಮಾನರನ್ನು ಮೆಚ್ಚಿಸಬಹುದು. ಆದರೆ ಇದು ಕರ್ನಾಟಕದ ವಿದ್ಯಾರ್ಥಿಗಳ ಹಿತಾಸಕ್ತಿಗಳಿಗೆ ಧಕ್ಕೆ ತರುತ್ತದೆ ಎಂದು ಪ್ರಧಾನ್ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ