ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಪ್ರಕರಣ: ರಾಜಸ್ಥಾನದ 31 ಕಡೆ ಎನ್​ಐಎ ದಾಳಿ

ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಮತ್ತು ರಾಜಸ್ಥಾನದ 31 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸುತ್ತಿದೆ. ಗೃಹ ಸಚಿವಾಲಯ (ಎಂಎಚ್‌ಎ) ಇತ್ತೀಚೆಗೆ ಹತ್ಯೆಯ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿತ್ತು . ಕೊಲೆಯಲ್ಲಿ ಹೈಪ್ರೊಫೈಲ್ ಗ್ಯಾಂಗ್​ಸ್ಟರ್ ಕೈವಾಡವನ್ನು ಪರಿಗಣಿಸಿ ತನಿಖಾ ಸಂಸ್ಥೆಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಯಿತು.

ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ ಪ್ರಕರಣ: ರಾಜಸ್ಥಾನದ 31 ಕಡೆ ಎನ್​ಐಎ ದಾಳಿ
ಸುಖದೇವ್
Follow us
ನಯನಾ ರಾಜೀವ್
|

Updated on: Jan 03, 2024 | 8:26 AM

ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ(Sukdev Singh Gogamedi) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಮತ್ತು ರಾಜಸ್ಥಾನದ 31 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸುತ್ತಿದೆ. ಗೃಹ ಸಚಿವಾಲಯ (ಎಂಎಚ್‌ಎ) ಇತ್ತೀಚೆಗೆ ಹತ್ಯೆಯ ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿತ್ತು . ಕೊಲೆಯಲ್ಲಿ ಹೈಪ್ರೊಫೈಲ್ ಗ್ಯಾಂಗ್​ಸ್ಟರ್ ಕೈವಾಡವನ್ನು ಪರಿಗಣಿಸಿ ತನಿಖಾ ಸಂಸ್ಥೆಗೆ ತನಿಖೆಯ ಜವಾಬ್ದಾರಿಯನ್ನು ನೀಡಲಾಯಿತು.

ಪ್ರಕರಣವನ್ನು ಕೈಗೆತ್ತಿಕೊಂಡ ನಂತರ ಎನ್‌ಐಎ ಶಂಕಿತರನ್ನು ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ವೇಳೆ ಸಿಕ್ಕ ಮಾಹಿತಿ ಮೇರೆಗೆ ದಾಳಿ ನಡೆಸಲಾಗುತ್ತಿದೆ. ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಡಿಸೆಂಬರ್ 5 ರಂದು ಜೈಪುರದ ಅವರ ಮನೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು .

ಘಟನೆಯ ನಂತರ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಗ್ಯಾಂಗ್​ಸ್ಟರ್ ರೋಹಿತ್ ಗೋಡಾರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ಗೊಗಮೆಡಿ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದ. ಕೊಲೆಯಾಗುವ ಕೆಲವು ತಿಂಗಳ ಹಿಂದೆ ರೋಹಿತ್ ಗೋದಾರಾ ಎಂಬಾತ ಸುಖದೇವ್ ಸಿಂಗ್ ಗೊಗಮೆಡಿಗೆ ದುಬೈ ಸಂಖ್ಯೆಯಿಂದ ಬೆದರಿಕೆ ಕರೆ ಮಾಡಿದ್ದ.

ಮತ್ತಷ್ಟು ಓದಿ: ಜೈಪುರದಲ್ಲಿ ಹಾಡಹಗಲೇ ಗುಂಡಿಕ್ಕಿ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್​ ಸಿಂಗ್​ ಹತ್ಯೆ

ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆಯಲ್ಲಿ ಭಾಗಿಯಾಗಿರುವ ಇಬ್ಬರು ಶೂಟರ್‌ಗಳು ಮತ್ತು ಒಬ್ಬ ಸಹಚರನನ್ನು ಡಿಸೆಂಬರ್ 10 ರಂದು ದೆಹಲಿ ಅಪರಾಧ ವಿಭಾಗ ಮತ್ತು ರಾಜಸ್ಥಾನ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಚಂಡೀಗಢದಲ್ಲಿ ಬಂಧಿಸಿದ್ದರು.

ಸುಖದೇವ್ ಸಿಂಗ್ ಗೊಗಮೆಡಿ ಅವರು ರಾಷ್ಟ್ರೀಯ ಕರ್ಣಿ ಸೇನೆಯೊಂದಿಗೆ ಬಹಳ ಹಿಂದಿನಿಂದಲೂ ಸಂಬಂಧ ಹೊಂದಿದ್ದಾರೆ. ನಂತರ ಇವರೇ ಈ ಸಂಘಟನೆಯಿಂದ ದೂರವಾಗಿ ಪ್ರತ್ಯೇಕ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯನ್ನು ಕಟ್ಟಿದ್ದಾರೆ. ಪದ್ಮಾವತ್ ಸಿನಿಮಾ ಮತ್ತು ಗ್ಯಾಂಗ್‌ಸ್ಟರ್ ಆನಂದ್‌ಪಾಲ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಇವರ ಹೆಸರು ಕೇಳಿ ಬರುತ್ತಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ