ಕರೂರು ಕಾಲ್ತುಳಿತ, ರೋಡ್ ಶೋಗೆ ಅನುಮತಿ ಇರಲಿಲ್ಲ, ಅಂದು ತಡವಾಗಿ ಬಂದಿದ್ದಕ್ಕೆ ವಿಜಯ್ ವಿರುದ್ಧ ಎಫ್‌ಐಆರ್
ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ(Stampede)ಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಇದಕ್ಕೆ ನಟ, ರಾಜಕಾರಣಿ ವಿಜಯ್ ತಡವಾಗಿ ಬಂದಿದ್ದೇ ಕಾರಣ, ಅಷ್ಟೇ ಅಲ್ಲದೆ ರೋಡ್ ಶೋಗೆ ಅನುಮತಿಯೂ ಇರಲಿಲ್ಲ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಅಂದು ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ. ಎಫ್ಐಆರ್ನಲ್ಲಿ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬುಷಿ ಆನಂದ್ ಮತ್ತು ರಾಜ್ಯ ಜಂಟಿ ಕಾರ್ಯದರ್ಶಿ ಸಿಟಿಆರ್ ನಿರ್ಮಲ್ ಕುಮಾರ್ ಹೆಸರುಗಳಿವೆ.

ಕರೂರು, ಸೆಪ್ಟೆಂಬರ್ 29: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ(Stampede)ಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಇದಕ್ಕೆ ನಟ, ರಾಜಕಾರಣಿ ವಿಜಯ್ ತಡವಾಗಿ ಬಂದಿದ್ದೇ ಕಾರಣ, ಅಷ್ಟೇ ಅಲ್ಲದೆ ರೋಡ್ ಶೋಗೆ ಅನುಮತಿಯೂ ಇರಲಿಲ್ಲ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಅಂದು ಸಂಭವಿಸಿದ ಕಾಲ್ತುಳಿತದಲ್ಲಿ 41 ಮಂದಿ ಸಾವನ್ನಪ್ಪಿದ್ದಾರೆ. ಎಫ್ಐಆರ್ನಲ್ಲಿ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬುಷಿ ಆನಂದ್ ಮತ್ತು ರಾಜ್ಯ ಜಂಟಿ ಕಾರ್ಯದರ್ಶಿ ಸಿಟಿಆರ್ ನಿರ್ಮಲ್ ಕುಮಾರ್ ಹೆಸರುಗಳಿವೆ.
ರ್ಯಾಲಿಗೆ 11 ಷರತ್ತುಗಳನ್ನು ವಿಧಿಸಲಾಗಿದ್ದು, ಸುರಕ್ಷತೆ ಮತ್ತು ಸಂಚಾರ ನಿಯಂತ್ರಣಕ್ಕಾಗಿ 500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. 10,000 ಜನರ ಸಭೆಗೆ ಮಥಿಯಜಗನ್ ಅನುಮತಿ ಕೋರಿದ್ದರು, ಮಧ್ಯಾಹ್ನದ ವೇಳೆಗೆ ವಿಜಯ್ ಬರುತ್ತಾರೆ ಎಂದು ಮಾಧ್ಯಮ ವರದಿಗಳು ಪ್ರಕಟಿಸಿದ ನಂತರ ಜನಸಂದಣಿ 25,000 ಕ್ಕಿಂತ ಹೆಚ್ಚಾಗಿತ್ತು. ವಿಜಯ್ ಸಂಜೆ 4.45 ರ ಸುಮಾರಿಗೆ ವೇಲಾಯುಧಂಪಾಲಯಂನಲ್ಲಿರುವ ಜಿಲ್ಲಾ ಗಡಿಯನ್ನು ತಲುಪಿದ್ದರು, ಅನುಮತಿ ಇಲ್ಲದೆ ರೋಡ್ ಶೋ ನಡೆಸಿದ್ದರು.
ಈ ನಡುವೆ, ಕರೂರ್ ಕಾಲ್ತುಳಿತ ದುರಂತದ ಅಧಿಕೃತ ತನಿಖೆ ಪೂರ್ಣಗೊಳ್ಳುವವರೆಗೆ ವಿಜಯ್ ಅವರ ಪಕ್ಷ ಟಿವಿಕೆ ಯಾವುದೇ ಸಾರ್ವಜನಿಕ ಸಭೆಗಳು ಅಥವಾ ಸಭೆಗಳನ್ನು ನಡೆಸದಂತೆ ನಿರ್ಬಂಧಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಿಚಾರಣೆ ನಡೆಸಿದೆ.
ಮತ್ತಷ್ಟು ಓದಿ: ಕರೂರಿನಲ್ಲಿ ಕಾಲ್ತುಳಿತ ನಡೆದ ಸ್ಥಳಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಆಸ್ಪತ್ರೆಯಲ್ಲಿ ಸಂತ್ರಸ್ತರಿಗೆ ಸಾಂತ್ವನ
ಶನಿವಾರ ನಡೆದ ಟಿವಿಕೆ ಪ್ರಚಾರ ಸಮಾವೇಶದಲ್ಲಿ ಸಂಭವಿಸಿದ ಕಾಲ್ತುಳಿತದ ಬಳಿಕ ಈ ಕುರಿತು ನ್ಯಾಯಾಲಯಕ್ಕೆ ಮನವಿ ಸಲ್ಲಿಕೆಯಾಗಿದೆ. ಈ ದುರಂತವು ಕಾರ್ಯಕ್ರಮ ನಿರ್ವಹಣೆ, ಪೊಲೀಸ್ ಭದ್ರತೆ ಮತ್ತು ಜನಸಂದಣಿ ನಿಯಂತ್ರಣ ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆ ಮೂಡಿಸಿದೆ. ಘಟನೆ ಸಂಬಂಧ ಈಗಾಗಲೇ ತಮಿಳುನಾಡು ಸರ್ಕಾರ ತನಿಖೆ ಮುಂದುವರೆಸಿದ್ದು, ಹಿರಿಯ ಅಧಿಕಾರಿಗಳು ಮತ್ತು ಪೊಲೀಸರು ಲೋಪಗಳ ಪರಿಶೀಲನೆ ನಡೆಸಿದ್ದಾರೆ.
ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಭಾನುವಾರ ಕರೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುಗಳ ಭೇಟಿ ನೀಡಿಸಿದ್ದು, ಆರೋಗ್ಯ ವಿಚಾರಿಸಿದರು. ಇದೇ ವೇಳೆ ಅಲ್ಲಿನ ವೈದ್ಯರಿಗೆ ಸೂಕ್ತ ಚಿಕಿತ್ಸೆ ಮೇಲ್ವಿಚಾರಣೆ ನಡೆಸಲು ಸೂಚಿಸಿದ್ದಾರೆ.
ತಮಿಳುನಾಡಿನ ಕರೂರು ಬಳಿ ಶನಿವಾರ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಟಿವಿಕೆ ಪಕ್ಷದ ಸಂಸ್ಥಾಪಕ ವಿಜಯ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಜತೆಗೆ ದುರಂತದಲ್ಲಿ ಮಡಿದವರಿಗೆ ಸಂತಾಪ ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
‘ದೂರವಾಣಿ ಮೂಲಕ ಸಂಪರ್ಕಿಸಿದ ನೀವು, ಕರೂರು ದುರಂತದಲ್ಲಿ ಮೃತಪಟ್ಟವರ ಹಾಗೂ ಅವರ ಕುಟುಂಬದವರಿಗಾಗಿ ಕಾಳಜಿ ವ್ಯಕ್ತಿಪಡಿಸಿದ್ದೀರಿ. ಅದಕ್ಕಾಗಿ ತಮಗೆ ಧನ್ಯವಾದಗಳು. ಘಟನೆ ಕುರಿತು ಪ್ರಾಮಾಣಿಕವಾಗಿ ತನಿಖೆ ನಡೆಸಲಾಗುತ್ತಿದೆ. ಬದುಕುಳಿದವರ ಅಮೂಲ್ಯ ಜೀವ ರಕ್ಷಣೆಗೆ ಎಲ್ಲಾ ಪ್ರಯತ್ನಗಳನ್ನೂ ನಡೆಸಲಾಗುತ್ತಿದೆ’ ಎಂದು ರಾಹುಲ್ ಗಾಂಧಿಗೆ ಸ್ಟಾಲಿನ್ ಹೇಳಿದ್ದಾರೆ.
ಸೆ. 27ರಂದು ಪಕ್ಷದ ರ‍್ಯಾಲಿ ಆಯೋಜನೆಗೊಂಡಿತ್ತು. ಈ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನ ಮೃತಪಟ್ಟಿದ್ದಾರೆ. 60 ಜನ ಗಾಯಗೊಂಡು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಸಂಬಂಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿರುವ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು, ಸಿಬಿಐ ಅಥವಾ ಸ್ವತಂತ್ರ ತನಿಖೆಗೆ ಆದೇಶಿಸುವಂತೆ ಕೋರಿದೆ. ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ನೀಡುವುದಾಗಿ ವಿಜಯ್ ಘೋಷಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




